Latest Updates
-
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಕ್ಯಾರೆಟ್ ಆರೋಗ್ಯಕ್ಕೆ ಹೇಗೆ ಸಹಕಾರಿಯಾಗಲಿದೆ?
ತರಕಾರಿಗಳಲ್ಲೇ ಸ್ವಾದಿಷ್ಟ ಮತ್ತು ಅಧಿಕ ಸತ್ವಗಳನ್ನು ತನ್ನೊಳಗೆ ಇರಿಸಿಕೊಂಡಿರುವ ತರಕಾರಿಯೆಂದರೆ ಕ್ಯಾರೆಟ್ ಆಗಿದೆ. ಇದನ್ನು ಹಸಿಯಾಗಿ ಅಥವಾ ಬೇಯಿಸಿ ಕೂಡ ತಿನ್ನಬಹುದು. ಕ್ಯಾರೆಟ್‌ನ ಸಲಾಡ್, ಪಲ್ಯ, ಕೋಸಂಬರಿ ಹೀಗೆ ವಿಧ ವಿಧದಲ್ಲಿ ಇದರ ವ್ಯಂಜನಗಳನ್ನು ತಯಾರಿಸಿ ಸೇವಿಸಬಹುದು.
ಇದರಲ್ಲಿ ಅಧಿಕವಾಗಿರುವ ಬೇಟಾ ಕ್ಯಾರೊಟಿನ್ ಶಕ್ತಿಯುತ ಸಾರವಾಗಿದ್ದು ತ್ವಚೆಯನ್ನು ಸುಂದರಗೊಳಿಸಲು ಸಹಕಾರಿಯಾಗಿದೆ. ವಿಧ ವಿಧದ ಪ್ರೋಟೀನ್ ವಿಟಮಿನ್‌ಗಳನ್ನು ಹೇರಳವಾಗಿ ಬೆರೆತಿರುವ ಕ್ಯಾರೆಟ್ ರೋಗನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ.

ಇಂದು ನಾವು ಬಹುರೂಪಿ ಕ್ಯಾರೆಟ್‌ನ ಕೆಲವಾರು ಉತ್ತಮ ಗುಣಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ. ನೀವು ಇದರ ಪ್ರಯೋಜನವನ್ನು ಪಡೆದುಕೊಳ್ಳಿ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಸಿಕ್ಸ್ ಪ್ಯಾಕ್ ನೀಡಬಲ್ಲವು ಈ ಆಹಾರಗಳು!
ರೋಗನಿರೋಧಕ ಶಕ್ತಿಯನ್ನು ಹೊಂದಿದೆ:
ಕ್ಯಾರೆಟ್‌ನಲ್ಲಿ ಬೇಟಾ ಕ್ಯಾರೊಟಿನ್ ಅಧಿಕವಾಗಿದ್ದು ಶಕ್ತಿಯುತ ರೋಗನಿರೋಧಕ ಅಂಶವನ್ನು ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು ಹಲವಾರು ರೋಗಗಳನ್ನು ದೂರವಿಡುತ್ತದೆ. ಕ್ಯಾರೆಟ್ ಅನ್ನು ನಿತ್ಯವೂ ಸೇವಿಸುವುದರಿಂದ ತ್ವಚೆ, ಕೂದಲು, ಉಗುರುಗಳ ಹೊಳಪು ಸುಧಾರಣೆಯಾಗುತ್ತದೆ ಮತ್ತು ಕಣ್ಣಿನ ಆರೋಗ್ಯವನ್ನೂ ಸಹ ಇದು ಹೆಚ್ಚಿಸುತ್ತದೆ.
ರಕ್ತದ ಶುದ್ಧತೆಗೆ ಸಹಕಾರಿಯಾಗಿದೆ:
ರಕ್ತದ ಶುದ್ಧತೆಗೆ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು ಕ್ಯಾರೆಟ್ ಯಥೇಚ್ಛವಾಗಿ ಒಳಗೊಂಡಿದೆ. ದೇಹದಲ್ಲಿನ ಆಸಿಡ್ ಆಲ್ಕಾಲೈನ್ ಪ್ರಮಾಣವನ್ನು ಅವು ನಿಯಂತ್ರಣದಲ್ಲಿಡುತ್ತವೆ. ಹೈಪರ್‌ಟೆನ್ಶನ್‌ನೊಂದಿಗೆ ಸಂಯೋಜಿತವಾಗಿರುವ ಸೋಡಿಯಂನ ಹೆಚ್ಚಿನ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ಕ್ಯಾರೆಟ್‌ನಲ್ಲಿರುವ ಪೊಟ್ಯಾಶಿಯಂ ಸಹಾಯಕವಾಗಿವೆ ಹಾಗೂ ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.
ದಂತಕ್ಷಯವನ್ನು ನಿವಾರಿಸುತ್ತದೆ:
ಬಾಯಿಯಲ್ಲಿರುವ ಉಪದ್ರವಕಾರಿ ಕೀಟಾಣುಗಳನ್ನು ನಾಶ ಮಾಡುತ್ತದೆ ಮತ್ತು ದಂತಕ್ಷಯವನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ಕ್ಯಾರೆಟ್ ವಹಿಸುತ್ತದೆ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ತಲೆನೋವಿಗೆ ನೈಸರ್ಗಿಕ ಪರಿಹಾರ ಹೀಗೆ ಮಾಡಿ!!
ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ:
ಕ್ಯಾರೆಟ್‌ನಲ್ಲಿ ಕರಗುವ ನಾರಿನಂಶ ಹೆಚ್ಚಿಗೆ ಇದ್ದು ಎಲ್‌ಡಿಎಲ್ ಅನ್ನು ಬಂಧಿಸುವ ಮೂಲಕ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್‌ನ ಪ್ರಮಾಣವನ್ನು ತಗ್ಗಿಸುತ್ತದೆ ಮತ್ತು ಹೃದಯಾಘಾತ ಹಾಗೂ ಹೃದಯ ಕಾಯಿಲೆಗಳನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುವಂತಹ ಎಚ್‌ಡಿಎಲ್ ಅನ್ನು ಏರಿಸುವಲ್ಲಿ ಸಹಾಯ ಮಾಡುತ್ತದೆ.
ತಾಯಂದಿರಲ್ಲಿ ಎದೆ ಹಾಲಿನ ಗುಣಮಟ್ಟ ಸುಧಾರಣೆಯಾಗುತ್ತದೆ:
ಕ್ಯಾರೆಟ್ ಅನ್ನು ನಿಯಮಿತವಾಗಿ ತಿನ್ನುವುದರಿಂದ ಹಾಗೂ ಅದರ ಜ್ಯೂಸ್ ಅನ್ನು ಬಳಸುವುದರಿಂದ ತಾಯಂದಿರಲ್ಲಿ ಎದೆ ಹಾಲಿನ ಗುಣಮಟ್ಟ ಸುಧಾರಣೆಯಾಗುತ್ತದೆ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಕೊಲೆಸ್ಟ್ರಾಲ್ ಕಡಿಮೆ ಮಾಡುವ 10 ಬೆಸ್ಟ್ ಆಹಾರ
ಋತುಚಕ್ರಕ್ಕೆ ಸಹಕಾರಿ:
ಋತುಚಕ್ರದ ಹರಿವನ್ನು ಹೆಚ್ಚಿಸುವಲ್ಲಿ ಸಹ ಇದು ಸಹಾಯ ಮಾಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications