Latest Updates
-
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್
ಮಧುಮೇಹವಿದ್ದರೆ ಕಿಡ್ನಿ ವೈಫಲ್ಯ ಉಂಟಾಗುವುದೇ? ಆರಂಭಿಕ ಲಕ್ಷಣಗಳೇಣು?
ಭಾರತದಲ್ಲಿ ಮಧುಮೇಹಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ, ಮಧುಮೇಹ ಎಂಬುವುದು ಸರ್ವೇ ಸಾಮಾನ್ಯ ಸಮಸ್ಯೆಯಾಗಿದೆ. ಮಧುಮೇಹ ನಿಯಂತ್ರಣದಲ್ಲಿದ್ದರೆ ಯಾವುದೇ ಸಮಸ್ಯೆಯಿಲ್ಲ, ಇಲ್ಲದಿದ್ದರೆ ಈ ಮಧುಮೇಹದ ಕಾರಣದಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಿ ಇದರಿಂದ ಪ್ರಾಣಕ್ಕೆ ಅಪಾಯ ಉಂಟಾಗಬಹುದು. ಇತ್ತೀಚೆಗೆ ಕಿಡ್ನಿ ರೋಗಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ, ಮಧುಮೇಹದಿಂದಾಗಿ ಕಿಡ್ನಿ ಸಮಸ್ಯೆ ಹೆಚ್ಚಾಗುತ್ತಿದೆಯೇ? ಇದರ ಬಗ್ಗೆ ನೋಡೋಣ ಬನ್ನಿ:

ಮಧುಮೇಹವಿದ್ದವರಲ್ಲಿ ಕಿಡ್ನಿ ಸಮಸ್ಯೆ ಹೆಚ್ಚಾಗುತ್ತಿದೆಯೇ?
ಭಾರತದಲ್ಲಿ ಡಯಾಬಿಟಿಕ್ ಕಿಡ್ನಿ ಸಮಸ್ಯೆ ತುಂಬಾನೇ ಹೆಚ್ಚಾಗುತ್ತಿದೆ ಎಂದು ICMR ( ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್) ಹೇಳಿದೆ. ಶೇ. 25-30ರಷ್ಟು ಮಧುಮೇಹಿಗಳಲ್ಲಿ ಕಿಡ್ನಿ ಸಮಸ್ಯೆ ಕಂಡು ಬರುತ್ತಿದೆ ಎಂದು ಈ ಸಂಶೋಧನಾ ಸಂಸ್ಥೆ ಹೇಳಿದೆ.
ಮಧುಮೇಹಿಗಳಲ್ಲಿ ಕಿಡ್ನಿ ವೈಫಲ್ಯ ಕಂಡು ಬಂದರೆ ಅದನ್ನು diabetic nephropathy ಎಂದು ಕರೆಯಲಾಗುವುದು, ರಕ್ತದಲ್ಲಿ ಅತ್ಯಧಿಕ ಸಕ್ಕರೆಯಂಶ ಕಿಡ್ನಿ ಆರೋಗ್ಯವನ್ನು ಹಾಳು ಮಾಡುತ್ತದೆ, ಇದರಿಂದ ಕಿಡ್ನಿ ವೈಫಲ್ಯ ಉಂಟಾಗುವುದು.
ಮಧುಮೇಹಿಗಳಲ್ಲಿ ಕಿಡ್ನಿ ಸಮಸ್ಯೆ ಹೇಗೆ ಉಂಟಾಗುತ್ತದೆ?
ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾದರೆ ಕಿಡ್ನಿಯಲ್ಲಿರುವ ರಕ್ತ ನಾಳಗಳಿಗೆ ಹಾನಿಯನ್ನುಂಟು ಮಾಡುತ್ತೆ, ಇದರಿಂದ ಕಿಡ್ನಿಗೆ ರಕ್ತದಿಂದ ಕಶ್ಮಲವನ್ನು ಪ್ರತ್ಯೇಕಿಸುವುದು ಕಷ್ಟವಾಗುವುದು, ಹೀಗಾಗಿ ಕಿಡ್ನಿಯ ಕಾರ್ಯದಲ್ಲಿ ವೈಫಲ್ಯ ಉಂಟಾಗುವುದು, ಇದರಿಂದಾಗಿ ಕಿಡ್ನಿ ಸಮಸ್ಯೆ ಉಂಟಾಗುವುದು.
ಮಧುಮೇಹದ ಜೊತೆಗೆ ಅತ್ಯಧಿಕ ರಕ್ತದೊತ್ತಡ ಕೂಡ ಕಿಡ್ನಿ ಆರೋಗ್ಯವನ್ನು ಸಂಪೂರ್ಣವಾಗಿ ನಾಶ ಮಾಡುತ್ತದೆ.
ಕಿಡ್ನಿ ಸಮಸ್ಯೆಯನ್ನು ಪ್ರಾರಂಭದಲ್ಲಿಯೇ ಗಮನಿಸಿದರೆ ಕಿಡ್ನಿ ಸಮಸ್ಯೆ ಗಂಭೀರವಾಗುವುದನ್ನು ತಡೆಗಟ್ಟಬಹುದು.
ಕಿಡ್ನಿ ಸಮಸ್ಯೆ ತಡೆಗಟ್ಟಲು ಮಧುಮೇಹವನ್ನು ನಿಯಂತ್ರಣದಲ್ಲಿಡಬೇಕು.
ಕಿಡ್ನಿ ಸಮಸ್ಯೆಯ ಆರಂಭದ ಲಕ್ಷಣಗಳು
ಕಿಡ್ನಿ ಸಮಸ್ಯೆ ಪ್ರಾರಂಭದಲ್ಲಿ ಗೊತ್ತಾಗುವುದು ತುಂಬಾ ನಿಧಾನ.
ಮೂತ್ರ ಪರೀಕ್ಷೆ ಮಾಡಿದಾಗ ಮೂತ್ರದಲ್ಲಿ ಪ್ರೊಟೀನ್ ಅಧಿಕವಿದ್ದರೆ ಕಿಡ್ನಿ ಆರೋಗ್ಯದ ಕಡೆಗೆ ಗಮನಹರಿಸಬೇಕು.
ನಿಯಮಿತ ಪರೀಕ್ಷೆ ಒಳ್ಳೆಯದು
ಮಧುಮೇಹಿಗಳು ಮಧುಮೇಹ ಪರೀಕ್ಷೆ ಜೊತೆಗೆ ವರ್ಷದಲ್ಲಿ ಎರಡು ಬಾರಿ ಕಿಡದನಿ ಆರೋಗ್ಯದ ಬಗ್ಗೆ ಕೂಡ ಪರೀಕ್ಷೆ ಮಾಡುವುದು ಒಳ್ಳೆಯದು. ಹಾಗಾಗಿ ನಿಯಮಿತ ಪರೀಕ್ಷೆ ಮಾಡಿಸುವುದು ಒಳ್ಳೆಯದು.
ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ:
ಸುಸ್ತು
ಕಾಲುಗಳಲ್ಲಿ ಊತ
ಕೆಲಸ ಕಾರ್ಯದಲ್ಲಿ ಏಕಾಗ್ರತೆ ಕಡಿಮೆಯಾಗುವುದು
ಮೂತ್ರ ವಿಸರ್ಜನೆಗೆ ಕಷ್ಟವಾಗುವುದು
ಈ ಬಗೆಯ ಲಕ್ಷಣಗಳು ಕಂಡು ಬಂದರೆ ನೀವು ಕಿಡ್ನಿ ಆರೋಗ್ಯದ ಬಗ್ಗೆ ತಿಳಿಯಲು ವೈದ್ಯರನ್ನು ಭೇಟಿಯಾಗುವುದು ಒಳ್ಳೆಯದು.
ಮಧುಮೇಹಿಗಳು ಕಿಡ್ನಿ ಸಮಸ್ಯೆ ಉಂಟಾಗುವುದನ್ನು ತಡೆಗಟ್ಟುವುದು ಹೇಗೆ?
ಮಧುಮೇಹಿಗಳು ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಿ
ಪ್ರತಿನಿತ್ಯ ವ್ಯಾಯಾಮ ಮಾಡಿ
ಆರೋಗ್ಯಕರ ಆಹಾರಕ್ರಮ ಪಾಲಿಸಿ
ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಿ.
ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.
ಬೆರ್ರಿ, ಸೇಬು, ಮೊಟ್ಟೆ, ಹೂಕೋಸು, ಚಿಕನ್, ಪೈನಾಪಲ್, ಮೀನು
ಕಿಡ್ನಿ ಆರೋಗ್ಯಕ್ಕೆ ದಿನದಲ್ಲಿ ಎರಡು ಲೀಟರ್ ಕುಡಿಯಬೇಕು



Click it and Unblock the Notifications
