Latest Updates
-
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ
ಮಧುಮೇಹ-ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಇಲ್ಲಿದೆ ಮದ್ದು: ಖಾಲಿ ಹೊಟ್ಟೆಯಲ್ಲಿ ಸೇವಿಸಿ!
ಇತ್ತೀಚಿಗೆ ಯಾವ ಬಾಯಲ್ಲಿ ಕೇಳಿದ್ರು ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಕುರಿಯಾಗಿ ಹೇಳುತ್ತಾರೆ. ತಮಗೂ ಈ ಸಮಸ್ಯೆ ಇರುವಂತೆ ಹೇಳಿಕೊಳ್ಳುತ್ತಾರೆ. ಅದರಲ್ಲೂ ಈಗ ಯುವ ಸಮುದಾಯದಲ್ಲು ಕೂಡ ಈ ಸಮಸ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಮಧುಮೇಹವು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಮಸ್ಯೆಯಾಗಿದ್ದು, ಅಂದಾಜು 77 ಮಿಲಿಯನ್ ಜನರು ಈ ಸ್ಥಿತಿಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
2045 ರ ವೇಳೆಗೆ ಈ ಸಂಖ್ಯೆ 134 ಮಿಲಿಯನ್‌ಗೆ ಹೆಚ್ಚಾಗುವ ನಿರೀಕ್ಷೆಯಿದ್ದು, ಭಾರತವು ಮಧುಮೇಹದ ಕೇಂದ್ರವಾಗಿ ಬದಲಾಗಲಿದೆ. ಹಾಗೆ ಭಾರತದಲ್ಲಿ ಮಧುಮೇಹ ಇರುವವರು ತಮ್ಮ ರೋಗ ನಿರ್ಣಯ ಮಾಡದೆ ಹಾಗೆಯೇ ಉಳಿದಿರುವುದು ಕೂಡ ಸಮಸ್ಯೆ ಹೆಚ್ಚಾಗಲು ಕಾರಣವಾಗಿದೆ.

ಜಾಗತಿಕ ತಾಣವಾಗಿದೆ. ಭಾರತದಲ್ಲಿ ಮಧುಮೇಹಿಗಳ ಹೆಚ್ಚಿನ ಭಾಗವು ರೋಗನಿರ್ಣಯ ಮಾಡದೆಯೇ ಉಳಿದಿದೆ, ಇದು ಈ ಕಾಯಿಲೆಗೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ಹಾಗೆ ಪ್ರತಿಯೊಂದು ಮನೆಯಲ್ಲೂ ಈ ಸಮಸ್ಯೆ ಇರುವ ಒಬ್ಬರು ಸಿಗಬಹುದು. ಈ ಸಮಸ್ಯೆಗಳಗೆ ನಮ್ಮ ಆಹಾರ ಪದ್ದತಿ, ಜೀವನ ಶೈಲಿ ಪ್ರಮುಖ ಕಾರಣ ಎನಿಸಿದೆ. ಹಾಗೆ ಕೆಲವೊಂದು ಬಾಹ್ಯ ಅಂಶಗಳು ಸಹ ಈ ಸಮಸ್ಯೆ ಉಂಟಾಗಲು ಕಾರಣ ಎಂದು ತಿಳಿದುಬರಲಿದೆ.
ಹಾಗೆ ಪ್ರಪಂಚದಾದ್ಯಂತ ಬರೋಬ್ಬರಿ 830 ಮಿಲಿಯನ್ ಮಂದಿ ಮಧುಮೇಹದಿಂದ ಬಳಲುತ್ತಿದ್ದರೆ, ಇತ್ತ 220 ಮಿಲಿಯನ್ ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಹಾಗೆ ಭಾರತದಲ್ಲಿ ಈ ಎರಡೂ ಕಾಯಿಲೆಗಳಿಂದ ಬಳಲುತ್ತಿರುವ ಜನರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಲೇ ಇದೆ. ನಮ್ಮ ಆರೋಗ್ಯ ಕಾಪಾಡುವಾಗ ರಕ್ತದಲ್ಲಿನ ಸಕ್ಕರೆ ಮಟ್ಟ ಮತ್ತು ರಕ್ತದೊತ್ತಡ ಕಾಪಾಡಿಕೊಳ್ಳುವುದು ಅತ್ಯಗತ್ಯ. ನೀವು ಮಧುಮೇಹವನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾಧ್ಯವಾಗುವುದಿಲ್ಲ ಬದಲಾಗಿ ನೀವು ನಿಯಂತ್ರಣದಲ್ಲಿಡಬಹುದು.
ಹೀಗಾಗಿ ನೀವು ಖಾಲಿ ಹೊಟ್ಟೆಗೆ ಈ ಪಾನಿಯವನ್ನು ಸೇವಿಸುವುದರಿಂದ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು. ಹಾಗಾದ್ರೆ ಖಾಲಿ ಹೊಟ್ಟೆಯಲ್ಲಿ ಯಾವ ಆಹಾರ ಸೇವಿಸಿದರೆ ಮಧುಮೇಹ, ಅಧಿಕ ರಕ್ತದೊತ್ತಡ ನಿಯಂತ್ರಿಸಬಹುದು ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.
ನೆಲ್ಲಿಕಾಯಿ ರಸ
ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಅಥವಾ ನೆಲ್ಲಿಕಾಯಿ ರಸವನ್ನು ಸೇವಿಸುವುದು ನಿಮ್ಮ ಅಧಿಕ ರಕ್ತದೊತ್ತಡ ಅಥವಾ ಮಧುಮೇಹ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಲಿದೆ. ಇದು ಮಧುಮೇಹ ಮತ್ತು ರಕ್ತದೊತ್ತಡ ಎರಡನ್ನೂ ನಿಯಂತ್ರಿಸಲು ಅತ್ಯುತ್ತಮ ಆಯ್ಕೆಯಾಗಿದೆ. ವಿಟಮಿನ್ ಸಿ ಮತ್ತು ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಮೆಣಸಿನ ಪುಡಿ ದಾಲ್ಚಿನ್ನಿ ನೀರು
ದಾಲ್ಚಿನ್ನಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಮೆಣಸಿನ ಪುಡಿ ಜೊತೆಗೆ ದಾಲ್ಚಿನ್ನಿ ಹಾಕಿ ಆ ನೀರು ಸೇವಿಸಬೇಕು. ಇದರಲ್ಲಿ ಪೈಪರಿನ್ ಅಂಶವಿದ್ದು ಇದು ದೇಹವು ಅಗತ್ಯ ಪೋಷಕಾಂಶಗಳ ಹೀರಿಕೊಳ್ಳಲು ಸಹಾಯ ಮಾಡಲಿದೆ. ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ದಾಲ್ಚಿನ್ನಿ ನೀರಿಗೆ ಒಂದು ಚಿಟಿಕೆ ಮೆಣಸಿನ ಪುಡಿ ಸೇರಿಸಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮತ್ತು ರಕ್ತದೊತ್ತಡದ ಮಟ್ಟ ನಿಯಂತ್ರಿಸಬಹುದು.
ಮೆಂತ್ಯ ನೀರು
ಮೆಂತ್ಯವನ್ನು ಶತಮಾನದಿಂದಲೂ ಮಧುಮೇಹ ನಿಯಂತ್ರಿಸಲು ವ್ಯಾಪಕವಾಗಿ ಬಳಸಲಾಗುತ್ತಿದೆ. ಇದರಲ್ಲಿನ ಅತ್ಯಧಿಕ ಫೈಬರ್ ಅಂಶ ಹಾಗೆ ಹೀರಿಕೊಳ್ಳುವ ಅಂಶವು ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ರಾತ್ರಿ ಪೂರ್ತಿ ನೆನೆಸಿಟ್ಟ ಮೆಂತ್ಯ ನೀರನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಬೇಕಾಗುತ್ತದೆ.
ಅಗಸೆ ಬೀಜಗಳು
ಅಗಸೆ ಬೀಜವು ಆರೋಗ್ಯಕರ ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್ ಉತ್ಕರ್ಷಣ ನಿರೋಧಕಗಳಿಂದ ತುಂಬಿದೆ. ಈ ಬೀಜಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಬೆಂಬಲಿಸಲು ಮತ್ತು ರಕ್ತದೊತ್ತಡ ಕಡಿಮೆ ಮಾಡಲು ಸಹಾಯ ಮಾಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











