Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಮಹಿಳೆಯರಿಗೆ ಶುಭ ಸುದ್ದಿ: ಡೆಡ್ಲಿ ಸ್ತನ ಕ್ಯಾನ್ಸರ್ ಅಂತ್ಯ! ಮೊಳಕೆಯಲ್ಲೇ ಚಿವುಟಿ ಹಾಕುತ್ತೆ ಈ ಲಸಿಕೆ
ಮಹಿಳೆಯರಿಗೆ ದೊಡ್ಡ ಶುಭ ಸುದ್ದಿ! ಸ್ತನ ಕ್ಯಾನ್ಸರ್ (Breast Cancer) ಅನ್ನು ಮೊಳಕೆಯಲ್ಲೇ ಚಿವುಟಿ ಹಾಕುತ್ತೆ ಈ ಲಸಿಕೆ. ಹೌದು, ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಮತ್ತು ಮಾರಕವಾದ ಕ್ಯಾನ್ಸರ್ ಶೀಘ್ರದಲ್ಲೇ ಮೂಲೆಗುಂಪಾಗಬಹುದು. ಸ್ತನ ಕ್ಯಾನ್ಸರ್ (Breast Cancer Vaccine) ಚಿಕಿತ್ಸೆಯಲ್ಲಿ ಈ ಲಸಿಕೆ ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾಡಲಿದೆ. ಬ್ರೇಕ್‌ಥ್ರೂ ಲಸಿಕೆ ಪ್ರಯೋಗದಲ್ಲಿ ಶೇ.75 ರಷ್ಟು ರೋಗನಿರೋಧಕ ಪ್ರತಿಕ್ರಿಯೆಯನ್ನು ತೋರಿಸುತ್ತದೆ. ಈ ಮೂಲಕ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ. ಹಾಗಿದ್ರೆ, ಸ್ತನ ಕ್ಯಾನ್ಸರ್ ಅಂತ್ಯವೇ? ಲಸಿಕೆ ಹೇಗೆ ಕೆಲಸ ಮಾಡುತ್ತದೆ? ಎಂಬ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಹೆಚ್ಚಿನ ಮಾಹಿತಿ.
ದೇಶದಲ್ಲಿ ಮಹಿಳೆಯರು ಎದುರಿಸುತ್ತಿರುವ ಅತಿದೊಡ್ಡ ಆರೋಗ್ಯ ಸಮಸ್ಯೆಗಳಲ್ಲಿ ಸ್ತನ ಕ್ಯಾನ್ಸರ್ ಒಂದು. ಪ್ರತಿ ವರ್ಷ ಲಕ್ಷಾಂತರ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ. ಈ ಭಯಾನಕ ರೋಗದ ವಿರುದ್ಧ ಹೋರಾಡಲು ಪ್ರಪಂಚದಾದ್ಯಂತದ ವಿಜ್ಞಾನಿಗಳು ಅವಿಶ್ರಾಂತವಾಗಿ ಶ್ರಮಿಸುತ್ತಿದ್ದಾರೆ. ಆದರೆ, ಇದನ್ನು ಪರೀಕ್ಷಿಸಲು ಮತ್ತು ಲಸಿಕೆಯನ್ನು ಕಂಡುಹಿಡಿಯಲು ಅವರಿಗೆ ಸಾಧ್ಯವಾಗಿಲ್ಲ. ಆದರೂ, ಈಗ ವೈದ್ಯಕೀಯ ಜಗತ್ತಿನಲ್ಲಿ ಹೊಸ ಆಶಾಕಿರಣ ಮೂಡಿದೆ. ಕ್ಯಾನ್ಸರ್ ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಕಡೆಗೆ ಕೆಲಸ ಮಾಡುವ 'ಅನಿಕ್ಸಾ ಬಯೋಸೈನ್ಸ್' ಎಂಬ ಕಂಪನಿಯು ಸ್ತನ ಕ್ಯಾನ್ಸರ್ ಪರೀಕ್ಷಿಸಲು ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

ಲಸಿಕೆ ಹೇಗೆ ಕೆಲಸ ಮಾಡುತ್ತದೆ?
ಅನಿಕ್ಸಾ ಬಯೋಸೈನ್ಸ್ ಕಂಪನಿಯು ಕ್ಲೀವ್ಲ್ಯಾಂಡ್ ಕ್ಲಿನಿಕ್ ಸಹಯೋಗದೊಂದಿಗೆ ಈ ಲಸಿಕೆ ಅಭಿವೃದ್ಧಿಪಡಿಸಿದೆ. ಇದು ನಮ್ಮ ದೇಹದ ರೋಗನಿರೋಧಕ ವ್ಯವಸ್ಥೆಗೆ ತರಬೇತುದಾರನಂತೆ ಕೆಲಸ ನಿರ್ವಹಿಸುತ್ತದೆ. ಸಾಮಾನ್ಯವಾಗಿ ಮಹಿಳೆಯರು ತಮ್ಮ ಶಿಶುಗಳಿಗೆ ಹಾಲುಣಿಸುವಾಗ, ಅವರ ಸ್ತನಗಳು ಆಲ್ಫಾ-ಲ್ಯಾಕ್ಟಾಲ್ಬುಮಿನ್ ಎಂಬ ವಿಶೇಷ ಪ್ರೋಟೀನ್ ಅನ್ನು ಉತ್ಪಾದಿಸುತ್ತವೆ. ಇದು ಸಂಪೂರ್ಣವಾಗಿ ನೈಸರ್ಗಿಕ ಪ್ರಕ್ರಿಯೆ. ಆದರೆ, ಆಶ್ಚರ್ಯಕರವಾಗಿ ಅತ್ಯಂತ ಅಪಾಯಕಾರಿ ಟ್ರಿಪಲ್ ನೆಗೆಟಿವ್ ಸ್ತನ ಕ್ಯಾನ್ಸರ್ ಕೋಶಗಳು ಸಹ ಇದೇ ಪ್ರೋಟೀನ್ ಅನ್ನು ಉತ್ಪಾದಿಸುತ್ತವೆ.
ಮೊಳಕೆಯಲ್ಲೇ ಚಿವುಟಿ ಹಾಕುತ್ತದೆ
ಈ ಲಸಿಕೆ ನಮ್ಮ ದೇಹದ ಸೈಟೋಟಾಕ್ಸಿಕ್ ಟಿ-ಕೋಶಗಳಿಗೆ ಈ ಆಲ್ಫಾ-ಲ್ಯಾಕ್ಟಾಲ್ಬ್ಯುಮಿನ್ ಪ್ರೋಟೀನ್ ಅನ್ನು ಶತ್ರುವಾಗಿ ಗುರುತಿಸಲು ತರಬೇತಿ ನೀಡುತ್ತದೆ. ಇದು ದೇಹದಲ್ಲಿನ ಕ್ಯಾನ್ಸರ್ ಕೋಶಗಳು ಈ ಪ್ರೋಟೀನ್ ಅನ್ನು ಉತ್ಪಾದಿಸಲು ಪ್ರಾರಂಭಿಸಿದಾಗಲೆಲ್ಲಾ, ನಮ್ಮ ರೋಗನಿರೋಧಕ ಸೈನಿಕರು, ಟಿ-ಕೋಶಗಳು ತಕ್ಷಣವೇ ಅವುಗಳ ಮೇಲೆ ದಾಳಿ ಮಾಡಿ, ಅವುಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕುತ್ತದೆ. ಅಂದರೆ, ಇವು ಕ್ಯಾನ್ಸರ್ ಗೆಡ್ಡೆಗಳಾಗಿ ಬದಲಾಗುವ ಮೊದಲು ಮತ್ತು ರೋಗವು ಬರದಂತೆ ತಡೆಯುವ ಮೊದಲು ಅವುಗಳನ್ನು ನಾಶಮಾಡುವ ಮೂಲಕ ದೇಹವು ರಕ್ಷಣಾತ್ಮಕ ಆಯುಧವನ್ನು ಸೃಷ್ಟಿಸುತ್ತದೆ.
ಐತಿಹಾಸಿಕ ಹೆಜ್ಜೆ ಎಂದ ತಜ್ಞರು
ಲಸಿಕೆ ಇತ್ತೀಚೆಗೆ ತನ್ನ ಮೊದಲ ಹಂತದ ಕ್ಲಿನಿಕಲ್ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಟ್ರಿಪಲ್-ನೆಗೆಟಿವ್ ಸ್ತನ ಕ್ಯಾನ್ಸರ್‌ನಿಂದ ಚೇತರಿಸಿಕೊಂಡ 35 ಮಹಿಳೆಯರ ಮೇಲೆ ಪ್ರಯೋಗಗಳನ್ನು ನಡೆಸಲಾಯಿತು. ಈ ಫಲಿತಾಂಶಗಳು ಭರವಸೆ ನೀಡಿದ್ದವು. ಪ್ರಯೋಗದಲ್ಲಿ ಭಾಗವಹಿಸಿದ ಶೇ. 75 ಕ್ಕಿಂತ ಹೆಚ್ಚು ಮಹಿಳೆಯರು ಕ್ಯಾನ್ಸರ್ ಕೋಶಗಳನ್ನು ನಾಶಮಾಡುವ ಪ್ರಬಲ ರೋಗನಿರೋಧಕ ಪ್ರತಿಕ್ರಿಯೆಯನ್ನು ತೋರಿಸಿದರು. ಇದನ್ನು ತಜ್ಞರು ಐತಿಹಾಸಿಕ ಹೆಜ್ಜೆ ಎಂದು ಬಣ್ಣಿಸುತ್ತಿದ್ದಾರೆ.
ಲಸಿಕೆಗಾಗಿ ಮೊದಲ ಹಂತದ ಪರವಾನಗಿ
ಅನಿಕ್ಸಾ ಬಯೋಸೈನ್ಸ್ ಕಂಪನಿಯು ಸ್ತನ ಕ್ಯಾನ್ಸರ್ ಲಸಿಕೆಗಾಗಿ ಮೊದಲ ಹಂತದ ಪರವಾನಗಿಯನ್ನು ಪಡೆದುಕೊಂಡಿದೆ. ಮುಂಬರುವ ಹಂತದ ಪ್ರಯೋಗಗಳು ಸಹ ಯಶಸ್ವಿಯಾದರೆ, ಸ್ತನ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗುತ್ತದೆ. ಈ ಯಶಸ್ಸಿನಿಂದ ಪ್ರೇರಿತರಾಗಿ, ಅಂಡಾಶಯದ ಕ್ಯಾನ್ಸರ್ ತಡೆಗಟ್ಟಲು ಲಸಿಕೆಯನ್ನು ಅಭಿವೃದ್ಧಿಪಡಿಸಲು ಅನಿಕ್ಸಾ ಬಯೋಸೈನ್ಸ್ ಕಂಪನಿಯು ಕ್ಲೀವ್ಲ್ಯಾಂಡ್ ಕ್ಲಿನಿಕ್ ಜೊತೆ ಕೆಲಸ ಮಾಡುತ್ತಿದೆ.
ಭಾರತೀಯ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸುವ ಕ್ಯಾನ್ಸರ್ ಎಂದರೆ ಅದು ಸ್ತನಗಳ ಕ್ಯಾನ್ಸರ್. ಆಗಾಗ ಪರೀಕ್ಷೆ ಮಾಡಿಸಿ ಕೊಳ್ಳುವುದು ಮತ್ತು ಕ್ಲಿನಿಕಲ್ ಸ್ಕ್ರೀನಿಂಗ್‌ಗೆ ಒಳಪಡುವುದು ಕಡ್ಡಾಯವಾಗಿರುತ್ತದೆ. ಅದರಲ್ಲೂ 40 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರತಿ ವರ್ಷ ಅಥವಾ ಎರಡು ವರ್ಷಕ್ಕೊಮ್ಮೆ ಮ್ಯಾಮೋಗ್ರಾಂ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಈ ಸಮಸ್ಯೆಯನ್ನು ಆರಂಭದಲ್ಲಿಯೇ ಪತ್ತೆಹಚ್ಚಬಹುದು. ಇದಕ್ಕೆ ಸಂಬಂಧಪಟ್ಟಂತೆ ಸರ್ಜರಿ, ರೇಡಿ ಯೇಶನ್ ಥೆರಪಿ, ಹಾರ್ಮೋನ್ ಥೆರಪಿ ಇತ್ಯಾದಿಗಳನ್ನು ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

