Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಈ 5 ಹಣ್ಣುಗಳನ್ನು ತಿಂದ ನಂತರ ನೀರು ಕುಡಿದ್ರೆ ಗಂಭೀರ ಆರೋಗ್ಯ ಸಮಸ್ಯೆ ಎದುರಾಗುತ್ತೆ!
ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯಕಾರಿ ಪ್ರಯೋಜನಗಳಿವೆ. ಹಣ್ಣುಗಳು ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅಗತ್ಯವಾದ ಜೀವಸತ್ವಗಳು, ಖನಿಜಗಳು, ಫೈಬರ್, ಕ್ಯಾಲ್ಸಿಯಂ, ಕಬ್ಬಿಣದಂತಹ ಎಲ್ಲಾ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ವಿವಿಧ ರೀತಿಯ ಹಣ್ಣುಗಳು ತಮ್ಮದೇ ಆದ ವಿಶೇಷತೆಯನ್ನು ಹೊಂದಿದೆ. ಇವುಗಳನ್ನು ಸೇವನೆ ಮಾಡೋದ್ರಿಂದ ನಾವು ವಿವಿಧ ರೀತಿಯ ಪ್ರಯೋಜನಗಳನ್ನು ಕೂಡ ಪಡೆದುಕೊಳ್ಳಬಹುದು.

ಹಣ್ಣುಗಳಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯ ಬೇಕಾದರೆ ನೀವು ಹಣ್ಣುಗಳನ್ನು ಸರಿಯಾದ ಸಮಯ ಹಾಗೂ ಸರಿಯಾದ ಪ್ರಮಾಣದಲ್ಲಿ ಸೇವನೆ ಮಾಡಬೇಕು. ಇನ್ನೂ ಮುಖ್ಯವಾದ ವಿಚಾರ ಅಂದ್ರೆ ಹಣ್ಣುಗಳ ಜೊತೆಗೆ ಬೇರೆ ಯಾವ ವಸ್ತುಗಳನ್ನು ಸೇವಿಸಬಾರದು. ಹೆಚ್ಚಿನ ಜನ ಊಟದ ನಂತರ ಹಲವು ವಿಧದ ಹಣ್ಣುಗಳನ್ನು ಸೇವನೆ ಮಾಡುತ್ತಾರೆ.
ಇದ್ರ ಜೊತೆಗೆ ನೀರನ್ನೂ ಕುಡಿಯುತ್ತಾರೆ. ಇದರಿಂದ ನೀವು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಷ್ಟಕ್ಕೂ ಯಾವ ಹಣ್ಣುಗಳನ್ನು ತಿಂದ ನಂತರ ನೀರು ಸೇವಿಸಬಾರದು? ಇದರಿಂದ ಯಾವ ರೀತಿ ಆರೋಗ್ಯ ಸಮಸ್ಯೆ ಎದುರಾಗುತ್ತೆ ಅನ್ನೋದನ್ನು ತಿಳಿಯೋಣ.
ದಾಳಿಂಬೆ ಹಣ್ಣು
ದಾಳಿಂಬೆ ಹಣ್ಣು ಎಲ್ಲರಿಗೂ ಇಷ್ಟವಾಗುತ್ತದೆ. ಈ ಹಣ್ಣು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಆದರೆ ಈ ಹಣ್ಣನ್ನು ತಿಂದ ನಂತರ ನೀರು ಕುಡಿಯಬಾರದು. ಹೀಗೆ ಮಾಡುವುದರಿಂದ ವಾಕರಿಕೆ, ಅಸಿಡಿಟಿ ಮತ್ತು ವಾಂತಿ ಬರುವ ಸಾಧ್ಯತೆಗಳು ಹೆಚ್ಚಿದೆ.
ಬಾಳೆಹಣ್ಣು
ಬಾಳೆಹಣ್ಣು ನಮ್ಮ ಶಕ್ತಿಯ ಪ್ರಬಲ ಮೂಲವಾಗಿದೆ. ಮತ್ತು ಇದ್ರಲ್ಲಿ ಪೊಟ್ಯಾಸಿಯಮ್ ಉತ್ತಮ ಪ್ರಮಾಣದಲ್ಲಿ ಕಂಡುಬರುತ್ತದೆ. ಬಾಳೆಹಣ್ಣು ಮಲಬದ್ಧತೆ ಮತ್ತು ಹೊಟ್ಟೆಯ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಆದರೆ ಬಾಳೆಹಣ್ಣು ತಿಂದ ಮೇಲೆ ನೀರು ಕುಡಿಯುವುದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಹಾಳುಮಾಡುವ ಸಾಧ್ಯತೆಯಿದೆ.
ಸಿಟ್ರಸ್ ಹಣ್ಣುಗಳು
ಸಿಟ್ರಸ್ ಅಂಶ ಹೊಂದಿರುವ ಹಣ್ಣುಗಳಾದ ಕಿತ್ತಳೆ, ಆಮ್ಲಾ, ದ್ರಾಕ್ಷಿ ಇತ್ಯಾದಿಗಳನ್ನು ತಿಂದ ನಂತರ ನೀರು ಕುಡಿಯುವ ತಪ್ಪನ್ನು ಮಾಡಬೇಡಿ. ಈ ರೀತಿ ಮಾಡುವುದರಿಂದ ನಿಮ್ಮ ದೇಹದ ಪಿಹೆಚ್ ಮಟ್ಟವು ಹದಗೆಡುತ್ತದೆ. ಮತ್ತು ಜೀರ್ಣಾಂಗ ವ್ಯವಸ್ಥೆಯು ಸಹ ತೊಂದರೆಗೊಳಗಾಗುತ್ತದೆ.
ಕಲ್ಲಂಗಡಿ
ಕಲ್ಲಂಗಡಿ ಹಣ್ಣು ಕೂಡ ಅತ್ಯತ್ತಮ ಪೋಷಕಾಂಶಗಳನ್ನು ಹೊಂದಿರುವ ಹಣ್ಣಾಗಿದೆ. ಈ ಹಣ್ಣಿನಲ್ಲಿ ಶೇಕಡ 90 ರಷ್ಟು ಭಾಗ ನೀರಿನ ಅಂಶವಿದೆ. ಕಲ್ಲಂಗಡಿ ಹಣ್ಣು ತಿಂದ ನಂತರ ನೀರು ಕುಡಿಯಬಾರದಂತೆ. ಇದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಹದಗೆಡಬಹುದು. ಅನೇಕ ರೀತಿಯ ಹೊಟ್ಟೆಯ ಸಮಸ್ಯೆಗಳು ಉಂಟಾಗಬಹುದು.
ಸೀಬೆಹಣ್ಣು
ಸೀಬೆಹಣ್ಣು ಅಥವಾ ಪೇರಳೆ ಹಣ್ಣು. ಇದ್ರಲ್ಲಿ ಫೈಬರ್, ವಿಟಮಿನ್ ಎ ಮತ್ತು ವಿಟಮಿನ್ ಸಿ ಜೊತೆಗೆ ಫೋಲಿಕ್ ಆಮ್ಲ, ಪೊಟ್ಯಾಸಿಯಮ್, ತಾಮ್ರದ ಉತ್ತಮ ಮೂಲವಾಗಿದೆ. ಇದನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸಮಸ್ಯೆಗಳು ದೂರವಾಗುತ್ತವೆ. ಆದರೆ ನೀವು ಪೇರಳೆ ಹಣ್ಣು ತಿಂದ ಮೇಲೆ ನೀರು ಕುಡಿದರೆ ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications