Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಜ್ಯೂಸ್ ಕುಡಿತಿರಾ..! ಶುಗರ್ ಬರುತ್ತೆ ಹುಷಾರ್.. ಸಂಶೋಧನೆಯಲ್ಲಿ ಬಹಿರಂಗ
ನಿಮಗೆ ಜ್ಯೂಸ್ ಕುಡಿಯುವ ಚಟ ಇದ್ಯಾ? ಹಾಗಿದ್ರೆ, ಟೈಪ್ 2 ಮಧುಮೇಹ ಬರುವುದು ಖಚಿತ. ಅದರಲ್ಲೂ ಈ ಹಣ್ಣುಗಳ ಜ್ಯೂಸ್ ಕುಡಿಯುವುದು ಭಲೇ ಡೇಂಜರ್! ಹೌದು, ಜ್ಯೂಸ್‌ಗಳು ಟೈಪ್ 2 ಮಧುಮೇಹದ (T2D) ಅಪಾಯವನ್ನು ಹೆಚ್ಚಿಸಬಹುದು ಎಂದು ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಪ್ರತಿದಿನ ಜ್ಯೂಸ್ (juice) ಕುಡಿಯುವಾಗ ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಉತ್ತಮ. ಇದರಿಂದ ಟೈಪ್ 2 ಮಧುಮೇಹ (type 2 diabetes) ಸಮಸ್ಯೆಯಿಂದ ಪಾರಾಗಬಹುದು. ಹಾಗೆಯೇ, ಮಧುಮೇಹವನ್ನು ತಡೆಗಟ್ಟಲು ಕೆಲವು ಸಲಹೆಗಳನ್ನು ನೀಡಲಾಗಿದೆ. ಈ ಬಗ್ಗೆ ತಿಳಿಯಲು ಮುಂದೆ ಓದಿ.
ಬ್ರಿಗ್ಯಾಮ್ ಯಂಗ್ ವಿಶ್ವವಿದ್ಯಾಲಯದ (Brigham Young University) ವಿಜ್ಞಾನಿಗಳು ಇತ್ತೀಚೆಗೆ ಸಂಶೋಧನೆ ನಡೆಸಿದ್ದಾರೆ. ಈ ಅಧ್ಯಯನವು ಸೋಡಾ (soda), ಎನರ್ಜಿ ಡ್ರಿಂಕ್ಸ್ ಮತ್ತು ಶೇ.100 ರಷ್ಟು ಹಣ್ಣಿನ ಜ್ಯೂಸ್ (fruit juices) ಸೇರಿದಂತೆ ಸಿಹಿ ಪಾನೀಯಗಳ ನಿಯಮಿತ ಸೇವನೆಯಿಂದ ಟೈಪ್ 2 ಮಧುಮೇಹ ಬರುವ ಸಾಧ್ಯತೆ ಹೆಚ್ಚಿದೆ ಎಂದು ಬಹಿರಂಗಪಡಿಸಿದೆ. ಈ ಸಂಶೋಧನೆಯಲ್ಲಿ, ವಿವಿಧ ಪ್ರದೇಶಗಳ 5 ಲಕ್ಷಕ್ಕೂ ಹೆಚ್ಚು ಜನರ ಡೇಟಾವನ್ನು ಪಡೆಯಲಾಗಿದೆ. ಈ ಆಘಾತಕಾರಿ ವಿಷಯ ಸಂಶೋಧನೆಯಲ್ಲಿ ಬೆಳಕಿಗೆ ಬಂದಿದೆ. ವಿಜ್ಞಾನಿಗಳು ಜ್ಯೂಸ್ ಪ್ರಿಯರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಎನರ್ಜಿ ಡ್ರಿಂಕ್ಸ್ ಕುಡಿಯುವವರಿಗೆ ಶೇ.25% ಅಪಾಯ
ಪ್ರತಿದಿನ ಸುಮಾರು 350 ಮಿಲಿ ಸೋಡಾ ಅಥವಾ ಎನರ್ಜಿ ಡ್ರಿಂಕ್ಸ್ ಸೇವಿಸುವ ಜನರಿಗೆ ಟೈಪ್ -2 ಮಧುಮೇಹ ಬರುವ ಅಪಾಯ ಶೇ.25 ರಷ್ಟು ಹೆಚ್ಚಾಗಿದೆ ಎಂದು ಸಂಶೋಧನೆಯಲ್ಲಿ ತಿಳಿದುಬಂದಿದೆ. ಅದೇ ಸಮಯದಲ್ಲಿ, ಒಬ್ಬ ವ್ಯಕ್ತಿಯು ನಿತ್ಯ 250 ಮಿಲಿ ಹಣ್ಣಿನ ಜ್ಯೂಸ್ (ಹಣ್ಣಿನ ರಸ) ಕುಡಿದರೆ, ಆತನಿಗೆ ಈ ಅಪಾಯವು ಶೇ.5 ರಷ್ಟು ಹೆಚ್ಚಾಗುತ್ತದೆ ಎಂದು ವರದಿಯಾಗಿದೆ.
ಯಾವ ಹಣ್ಣಿನ ಜ್ಯೂಸ್ ಸೇವಿಸಿದರೆ ಮಧುಮೇಹ ಬರುತ್ತೆ?
ಸಂಶೋಧನೆಯ ಪ್ರಕಾರ, ಹಣ್ಣಿನ ಜ್ಯೂಸ್‌ನಲ್ಲಿರುವ ಸಕ್ಕರೆ ಅಂಶ ರಕ್ತದಲ್ಲಿನ ಶುಗರ್ ಮಟ್ಟವನ್ನು ವೇಗವಾಗಿ ಹೆಚ್ಚಿಸುತ್ತದೆ. ಈ ಪರಿಣಾಮವು ಕ್ರಮೇಣ ದೇಹವನ್ನು ಮಧುಮೇಹದತ್ತ ಕೊಂಡೊಯ್ಯುತ್ತದೆ. ಈ ಅಧ್ಯಯನದಲ್ಲಿ ಯಾವುದೇ ನಿರ್ದಿಷ್ಟ ಹಣ್ಣಿನ ಹೆಸರನ್ನು ಬಹಿರಂಗಪಡಿಸಿಲ್ಲ. ಆದರೂ, ಯಾವುದೇ ರೀತಿಯ ಹಣ್ಣಿನ ಜ್ಯೂಸ್ ಅನ್ನು ನಿತ್ಯ ಸೇವಿಸಿದರೆ, ಅದು ಹಾನಿಕಾರಕ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಇವುಗಳ ಸೇವನೆ ದೇಹಕ್ಕೆ ಹಾನಿಕಾರಕವಲ್ಲ
ಹಣ್ಣುಗಳು ದೇಹದಲ್ಲಿ ಸಕ್ಕರೆಯನ್ನು ನಿಧಾನವಾಗಿ ಬಿಡುಗಡೆ ಮಾಡುತ್ತವೆ. ಮತ್ತು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುವುದರಿಂದ ಸಂಪೂರ್ಣ ಹಣ್ಣುಗಳನ್ನು ತಿನ್ನುವುದು ಹೆಚ್ಚು ಪ್ರಯೋಜನಕಾರಿ ಎಂದು ವರದಿ ಹೇಳಿದೆ. ಹಣ್ಣುಗಳು, ಧಾನ್ಯಗಳು ಮತ್ತು ಡೈರಿ ಉತ್ಪನ್ನಗಳಲ್ಲಿ ಕಂಡುಬರುವ ಸಕ್ಕರೆ ಅಂಶವು ದೇಹಕ್ಕೆ ಹಾನಿಕಾರಕವಲ್ಲ. ಇದಕ್ಕೆ ವ್ಯತಿರಿಕ್ತವಾಗಿ, ವಿವಿಧ ಪಾನೀಯಗಳು ಮತ್ತು ಜ್ಯೂಸ್‌ಗಳು ಸಂಸ್ಕರಿಸಿದ ಸಕ್ಕರೆಯನ್ನು ಹೊಂದಿರುತ್ತವೆ. ಇದು ಮಧುಮೇಹ ಸಮಸ್ಯೆಗೆ ಕಾರಣವಾಗುತ್ತದೆ ಎಂದು ಸಂಶೋಧನೆಯಲ್ಲಿ ಕಂಡುಬಂದಿದೆ.
ಮಧುಮೇಹ ತಡೆಗಟ್ಟಲು ಈ ಸಲಹೆ ಫಾಲೋ ಮಾಡಿ
ಮಧುಮೇಹ ಇಲ್ಲದ ಜನರು ತಾವು ಎಷ್ಟು ಬೇಕಾದರೂ ಹಣ್ಣಿನ ಜ್ಯೂಸ್ (ಹಣ್ಣಿನ ರಸ) ಕುಡಿಯಬಹುದು ಎಂದು ಭಾವಿಸಬಾರದು. ಭವಿಷ್ಯದಲ್ಲಿ ಮಧುಮೇಹದಂತಹ ಗಂಭೀರ ಕಾಯಿಲೆಗಳನ್ನು ತಪ್ಪಿಸಲು ಪ್ರತಿಯೊಬ್ಬರೂ ಎಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಸಂಶೋಧನೆಯು ಮಧುಮೇಹವನ್ನು ತಡೆಗಟ್ಟಲು ಕೆಲವು ಸಲಹೆಗಳನ್ನು ನೀಡಿದೆ. ಅವುಗಳು ಈ ಕೆಳಗಿನಂತಿವೆ.
- ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಮಾಡಿ.
- ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ಸೇವಿಸಿ.
- ಸಿಹಿ ಪದಾರ್ಥ ಮತ್ತು ಪಾನೀಯಗಳಿಂದ (ಜ್ಯೂಸ್, ಸೋಡಾ) ದೂರವಿರಿ.
- ಒತ್ತಡದಿಂದ ಹೊರಬನ್ನಿ ಮತ್ತು ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
