Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಗ್ಯಾಸ್ಟ್ರಿಕ್ ಸಮಸ್ಯೆಯೇ? ಈ ಮನೆಮದ್ದು ಟ್ರೈ ಮಾಡಿ ಬೇಗನೆ ರಿಲೀಫ್ ಸಿಗುತ್ತೆ
ಗ್ಯಾಸ್ಟ್ರಿಕ್ ಸಮಸ್ಯೆ ಯಾವಾಗ ಬೇಕಾದರೂ ಕಾಡಬಹುದು, ಹೀಗೆ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾದರೆ ತುಂಬಾನೇ ಹೊಟ್ಟೆ ನೋವು ಉಂಟಾಗುವುದು, ನೀವು ಗ್ಯಾಸ್ಟ್ರಿಕ್ ಹೊಟ್ಟೆನೋವು ತಕ್ಷಣ ಶಮನವಾಗಲು ಈ ಮನೆಮದ್ದು ಟ್ರೈ ಮಾಡಬಹುದು ನೋಡಿ:

ಓಂ ಕಾಳುಗಳು
ಗ್ಯಾಸ್ಟ್ರಿಕ್ ಸಮಸ್ಯೆಗೆ ಈ ಮನೆಮದ್ದು ಪರಿಣಾಮಕಾರಿಯಾಗಿದೆ. ಇದರಲ್ಲಿರುವ ಥೈಮಾಲ್ ಎಂಬ ಪೋಷಕಾಂಶ ಕರುಳುಗಳಲ್ಲಿ ಕೆಲವು ಜೀರ್ಣರಸಗಳನ್ನು ಸ್ರವಿಸಲು ಪ್ರಚೋದನೆ ಸಿಗುವುದು. ಇದರಿಂದಾಗಿ ಗ್ಯಾಸ್ಟ್ರಿಕ್ ಸಮಸ್ಯೆಗೆ ಪರಿಣಾಮಕಾರಿ. ಇದರ ಪ್ರಯೋಜನ ಪಡೆಯಲು ಅರ್ಧ ಕಪ್ ನೀರಿನಲ್ಲಿ ಸುಮಾರು ಮೂರರಿಂದ ನಾಲ್ಕು ಚಿಕ್ಕ ಚಮಚ ಓಂ ಕಾಳು ಹಾಕಿ ಕುದಿಸಿ ನಂತರ ಸ್ವಲ್ಪ ಬಿಸಿ ಆರಿದ ಮೇಲೆ ಕುಡಿಯಿರಿ.
ಆಪಲ್ ಸಿಡರ್ ವಿನಿಗರ್
ಅಜೀರ್ಣದಿಂದ ಹೊಟ್ಟೆ ನೋವು ಅಥವಾ ಗ್ಯಾಸ್ಟ್ರಿಕ್ ಸಮಸ್ಯೆಯಾದಾಗ ಇದು ಉತ್ತಮ ಆಯ್ಕೆಯಾಗಿದೆ. ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಎರಡು ದೊಡ್ಡ ಚಮಚ ವಿನೆಗರ್ ಹಾಕಿ ಆ ನೀರು ಕುಡಿಯಿರಿ, ಇದರಿಂದ ನಿಮಗೆ ರಿಲ್ಯಾಕ್ಸ್ ಅನಿಸುವುದು.
ಪುದೀನಾ ಟೀ
ಗ್ಯಾಸ್ಟ್ರಿಕ್ ಸಮಸ್ಯೆಗೆ ಪುದಿನಾ ಕೂಡ ಉತ್ತಮ ಆಯ್ಕೆಯಾಗಿದೆ. ನೀವು ಪುದೀನಾ ಹಾಕಿದ ಟೀ ಕುಡಿಯಬಹುದು, ಅಥವಾ ಕೆಲವು ಪುದಿನಾ ಎಲೆಗಳನ್ನು ಹಸಿಯಾಗಿ ಜಗಿದು ನುಂಗಬಹುದು. ಇಲ್ಲದಿದ್ದರೆ ಒಂದು ಲೋಟ ನೀರಿಗೆ 2-3 ಪುದಿನಾ ಎಲೆಗಳನ್ನು ಹಾಕಿ ಸುಮಾರು ಐದು ನಿಮಿಷ ಚಿಕ್ಕ ಉರಿಯಲ್ಲಿ ಕುದಿಸಿ ಆ ನೀರು ಕುಡಿದರೆ ಕೂಡ ಒಳ್ಳೆಯದು.
ಡಾಲ್ಚಿನ್ನಿ
ಜೇನಿಗೆ ಅರ್ದ ಚಮಚ ದಾಲ್ಚಿನ್ನಿ ಪುಡಿಯನ್ನು ಬೆರೆಸಿ ಕುಡಿಯಬಹುದು ಅಥವಾ ಉಗುರು ಬೆಚ್ಚಗಿನ ಹಾಲಿನಲ್ಲಿ ಡಾಲ್ಚಿನ್ನಿ ಬೆರೆಸಿ ಕುಡಿಯಿರಿ. ಹೀಗೆ ಮಾಡುವುದರಿಂದಲೂ ಗ್ಯಾಸ್ಟ್ರಿಕ್ ಸಮಸ್ಯೆ ಕಡಿಮೆಯಾಗುವುದು.
ಹಸಿ ಶುಂಠಿ
ಸ್ವಲ್ಪ ಹಸಿ ಶುಂಠಿ ಜಗಿದು ಅದರ ರಸ ಹಿಂಡಿ ಅದಕ್ಕೆ ಒಂದು ಕಲ್ಲುಪ್ಪು ಸೇರಿಸಿ ಕುಡಿಯಿರಿ. ನೀವು ಶುಂಠಿ ಟೀ ಮಾಡಿ ಕೂಡ ಕುಡಿಯಬಹುದು. ಹೀಗೆ ಮಾಡುವುದರಿಂದ ಗ್ಯಾಸ್ಟ್ರಿಕ್‌ನಿಂದಾದ ಹೊಟ್ಟೆ ನೋವು ಕಡಿಮೆಯಾಗುವುದು.
ಸೋಂಪು'
ನೀವು ಒಂದು ಲೋಟ ನೀರಿಗೆ ಸೋಂಪು ಹಾಕಿ ಕುಡಿದರೆ ಕೂಡ ಒಳ್ಳೆಯದು, ಭರ್ಜರಿ ಊಟದ ಬಳಿಕ ಸೋಂಪಿನ ನೀರು ಕುಡಿದರೆ ಜೀರ್ಣಕ್ರಿಯೆಗೆ ಸಹಕಾರಿ.
ಕಾಳುಮೆಣಸು
ಚಿಕ್ಕ ಚಮಚದಷ್ಟು ಕಾಳುಮೆಣಸಿನ ಪುಡಿಯನ್ನು ಕೊಂಚ ಜೇನಿನೊಂದಿಗೆ ಬೆರೆಸಿ ಇದನ್ನು ಅರ್ಧ ಲೋಟ ಮಜ್ಜಿಗೆಯಲ್ಲಿ ಬೆರೆಸಿ ಕುಡಿದರೆ ಗ್ಯಾಸ್ಟ್ರಿಕ್ ಸಮಸ್ಯೆ ಕಡಿಮೆಯಾಗುವುದು.
ನಿಂಬೆ ಪಾನೀಯ
ಕೂಡ ಗ್ಯಾಸ್ಟ್ರಿಕ್ ಸಮಸ್ಯೆಗೆ ತಕ್ಷಣದ ಪರಿಹಾರ ನೀಡುತ್ತದೆ. ಒಂದು ಲೋಟ ನೀರಿಗೆ ನಿಂಬೆರಸ ಹಾಕಿ ಅದಕ್ಕೆ ಚಿಟಿಕೆಯಷ್ಟು ಅಡುಗೆ ಸೋಡಾ, ಚಿಟಕೆಯಷ್ಟು ಬ್ಲ್ಯಾಕ್ ಸಾಲ್ಟ್, ಹುರಿದು ಪುಡಿ ಮಾಡಿದ ಜೀರಿಗೆ ಪುಡಿ ಹಾಕಿ ಮಿಶ್ರ ಮಾಡಿ ಕುಡಿದರೆ ಗ್ಯಾಸ್ಟ್ರಿಕ್ ಹೊಟ್ಟೆನೋವು ತಕ್ಷಣವೇ ಕಡಿಮೆಯಾಗುವುದು
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
