Latest Updates
-
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ! -
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ!
ಸೀಬೆಕಾಯಿ ಇಷ್ಟನಾ? ಹುಷಾರ್.. ಪೇರಲ ಹಣ್ಣು ಕೆಲವರಿಗೆ ವಿಷಕಾರಿ! ಯಾರಿಗೆ ಗೊತ್ತಾ?
ನಿಮಗೂ ಸೀಬೆಕಾಯಿ ಇಷ್ಟನಾ? ಹುಷಾರ್.. ಇವು ಕೆಲವರಿಗೆ ವಿಷಕಾರಿ. ಹೌದು, ಸೇಬು ಹಣ್ಣಿನಂತೆ ರುಚಿಕರ ಹಾಗೂ ಆರೋಗ್ಯಕರ ಹಣ್ಣು ಸೀಬೆಹಣ್ಣು ಅಥವಾ ಪೇರಲ ಹಣ್ಣು (Guava). ಜುಲೈ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳವರೆಗೆ ಮಾರುಕಟ್ಟೆಗಳಲ್ಲಿ ಹೇರಳವಾಗಿ ದೊರೆಯುವ ಈ ಹಣ್ಣನ್ನು ಮಕ್ಕಳು, ವೃದ್ಧರು ಎನ್ನದೆ, ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ರುಚಿ ಮತ್ತು ಆರೋಗ್ಯಕರ ಗುಣಗಳಲ್ಲದೆ, ಕಡಿಮೆ ಬೆಲೆಯಲ್ಲಿ ಸಿಗುವುದರಿಂದ 'ಬಡವರ ಸೇಬು' ಎಂದು ಕರೆಯಲಾಗುತ್ತದೆ. ಆದರೆ, ಪೇರಲ ಹಣ್ಣಿನಿಂದ (Guava Fruit) ಕೆಲವರಿಗೆ ತೊಂದರೆಯೂ ಆಗಬಹುದು. ಇಲ್ಲಿದೆ ನಿಮಗೆ ಗೊತ್ತಿಲ್ಲದ ಸತ್ಯ.
ಸೀಬೆಹಣ್ಣು ಅಥವಾ ಪೇರಲ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ ನಾಲ್ಕು ಪಟ್ಟು ಹೆಚ್ಚು ವಿಟಮಿನ್ ಸಿ ಇದರಲ್ಲಿರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ವಿಟಮಿನ್ ಎ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ಪೇರಲ ಹಣ್ಣಿನಲ್ಲಿ ಫೈಬರ್ ಅಂಶ ಹೆಚ್ಚಾಗಿರುವುದರಿಂದ ಜೀರ್ಣಕ್ರಿಯೆಗೆ ಸಹಾಯಕವಾಗಿದೆ. ಪೇರಳೆಯಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡುತ್ತವೆ. ಜೀವಕೋಶಗಳನ್ನು ರಕ್ಷಿಸಿ ಕ್ಯಾನ್ಸರ್ ತಡೆಗಟ್ಟಲು ನೆರವಾಗುತ್ತದೆ. ಇಷ್ಟೆಲ್ಲಾ ಆರೋಗ್ಯಕರ ಗುಣಗಳಿದ್ದರೂ, ಕೆಲವರು ಪೇರಲ ಹಣ್ಣನ್ನು (Guava side effects) ತಿನ್ನಬಾರದು. ಅವರು ಯಾರು ಗೊತ್ತಾ?

ಸೀಬೆಕಾಯಿ ಯಾರಿಗೆ ವಿಷಕಾರಿ?
ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸಮಸ್ಯೆಗಳು ಹೆಚ್ಚುತ್ತಿವೆ. ಆದ್ದರಿಂದ, ಪೇರಲ ಹಣ್ಣುಗಳನ್ನು ತಿನ್ನುವಾಗ ಬಹಳ ಜಾಗರೂಕರಾಗಿರಬೇಕು. ಪೇರಲ ಹಣ್ಣುಗಳಲ್ಲಿ ಪೊಟ್ಯಾಸಿಯಮ್ ಹೆಚ್ಚಾಗಿರುತ್ತದೆ. ಕಿಡ್ನಿ ಸಮಸ್ಯೆ ಇರುವವರು ಹೆಚ್ಚುವರಿ ಪೊಟ್ಯಾಸಿಯಮ್ ಅನ್ನು ಫಿಲ್ಟರ್ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಕಿಡ್ನಿ ಸಮಸ್ಯೆಗಳಿರುವವರು ಪೇರಲ ಹಣ್ಣುಗಳನ್ನು ತಿನ್ನುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಅಥವಾ ವೈದ್ಯರ ಸಲಹೆ ಪಡೆಯುವುದು ಒಳ್ಳೆಯದು.
ಬೀಜಗಳಿಂದ ಜೀರ್ಣಕ್ರಿಯೆಯ ಸಮಸ್ಯೆ
ಪೇರಲ ಹಣ್ಣುಗಳಲ್ಲಿ ಫ್ರಕ್ಟೋಸ್ ಮತ್ತು ವಿಟಮಿನ್ ಸಿ ಅಂಶ ಹೆಚ್ಚಾಗಿರುತ್ತದೆ. ಇವುಗಳನ್ನು ಅತಿಯಾಗಿ ಸೇವಿಸುವುದರಿಂದ ಜೀರ್ಣಕ್ರಿಯೆಯ ಸಮಸ್ಯೆಗಳು ಉಂಟಾಗಬಹುದು. ಉಬ್ಬುವುದು, ಗ್ಯಾಸ್ ಮತ್ತು ಅಸಿಡಿಟಿಯಂತಹ ಸಮಸ್ಯೆಗಳು ಹೆಚ್ಚಾಗುತ್ತವೆ. ಅದರಲ್ಲೂ ರಾತ್ರಿ ಹೊತ್ತು ತಿನ್ನುವುದರಿಂದ ಸಮಸ್ಯೆಗಳು ಉಲ್ಬಣಗೊಳ್ಳಬಹುದು. ಪೇರಳೆ ಹಣ್ಣುಗಳಲ್ಲಿ ಫೈಬರ್ ಅಧಿಕವಾಗಿದ್ದು, ಇದು ಜೀರ್ಣಕ್ರಿಯೆಗೆ ಒಳ್ಳೆಯದು. ಈಗಾಗಲೇ ಹೊಟ್ಟೆ ನೋವು, ಅತಿಸಾರ, ಮಲಬದ್ಧತೆ ಇದ್ದವರು ಇದನ್ನು ಹೆಚ್ಚಾಗಿ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಈ ಪೇರಲ ಹಣ್ಣಿನಲ್ಲಿರುವ ಬೀಜಗಳು ಕೆಲವರಿಗೆ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಉಂಟುಮಾಡಬಹುದು.
ಮಳೆಗಾಲದಲ್ಲಿ ಶೀತ, ಕೆಮ್ಮು ಮತ್ತಷ್ಟು ಹೆಚ್ಚಳ
ಸಾಮಾನ್ಯವಾಗಿ ಪೇರಲ ಹಣ್ಣುಗಳು ಶೀತ, ಕೆಮ್ಮು ಮುಂತಾದ ಕಾಯಿಲೆಗಳನ್ನು ತಡೆಯುತ್ತದೆ. ಏಕೆಂದರೆ, ಇದರಲ್ಲಿ ವಿಟಮಿನ್ ಸಿ ಇದೆ. ಆದರೆ, ಮಳೆಗಾಲದಲ್ಲಿ ಶೀತ, ಕೆಮ್ಮು ಇದ್ದಾಗ ಪೇರಲ ಹಣ್ಣು ತಿನ್ನುವುದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ಪೇರಲ ಹಣ್ಣು ತಂಪಾಗಿಸುವ ಗುಣಗಳನ್ನು ಹೊಂದಿರುವುದರಿಂದ ಇದು ಸಮಸ್ಯೆಯನ್ನು ಉಲ್ಬಣಗೊಳಿಸುತ್ತದೆ.
ಮಧುಮೇಹ ರೋಗ
ಇತ್ತೀಚಿನ ದಿನಗಳಲ್ಲಿ ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಪೇರಲ ಹಣ್ಣುಗಳು ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಕಡಿಮೆ ಹೊಂದಿರುವುದರಿಂದ ಇದು ಅವರಿಗೆ ಉತ್ತಮ ಆಯ್ಕೆಯಾಗಿದೆ. ಆದರೆ, ಪೇರಲ ಹಣ್ಣುಗಳಲ್ಲಿ ಸಕ್ಕರೆಯ ಅಂಶವೂ ಹೆಚ್ಚಾಗಿರುತ್ತದೆ. ಹೀಗಾಗಿ, ಪೇರಲ ಹಣ್ಣುಗಳನ್ನು ಹೆಚ್ಚಾಗಿ ತಿಂದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ, ಮಧುಮೇಹ ರೋಗಿಗಳು ಪೇರಲ ಹಣ್ಣುಗಳನ್ನು ಮಿತವಾಗಿ ಸೇವಿಸಬೇಕು ಅಥವಾ ತಿನ್ನದೇ ಇರುವುದು ಒಳ್ಳೆಯದು.
ಚರ್ಮದ ಕಿರಿಕಿರಿ ಮತ್ತು ಅಲರ್ಜಿ
ಪೇರಲ ಹಣ್ಣಿನಲ್ಲಿರುವ ಕೆಲವು ರಾಸಾಯನಿಕಗಳು ಕೆಲವರಲ್ಲಿ ಚರ್ಮದ ಕಿರಿಕಿರಿ ಮತ್ತು ಅಲರ್ಜಿಯನ್ನು ಉಂಟುಮಾಡಬಹುದು. ಆದ್ದರಿಂದ, ಈಗಾಗಲೇ ಚರ್ಮದ ಸಮಸ್ಯೆಗಳಿದ್ದರೆ ಸೀಬೆಕಾಯಿ ತಿನ್ನುವ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ. ಅಲ್ಲದೆ, ಪೇರಲ ಹಣ್ಣು ಗಟ್ಟಿಯಾಗಿರುತ್ತದೆ. ಹಲ್ಲು ಅಥವಾ ಒಸಡು ಸಮಸ್ಯೆ ಇರುವವರು ಅದನ್ನು ಅಗಿಯಲು ಕಷ್ಟವಾಗಬಹುದು. ಇದು ನೋವನ್ನು ಹೆಚ್ಚಿಸುತ್ತದೆ. ಹಾಗೆಯೇ, ಪೇರಲ ಹಣ್ಣುಗಳನ್ನು ಮಿತವಾಗಿ ತಿನ್ನುವುದು ಒಳ್ಳೆಯದು. ಸಾಮಾನ್ಯ ವ್ಯಕ್ತಿಗಳು ಕೂಡ ಹೆಚ್ಚಾಗಿ ತಿಂದರೆ ವಿವಿಧ ಸಮಸ್ಯೆಗಳು ಉಂಟಾಗುತ್ತವೆ.
ಒಟ್ಟಾರೆಯಾಗಿ, ಪೇರಲ ಹಣ್ಣು ಆರೋಗ್ಯಕ್ಕೆ ಉತ್ತಮ. ಆದರೆ, ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಈ ಹಣ್ಣನ್ನು ತಿನ್ನುವುದಕ್ಕೆ ಮುಂಚೆ ವೈದ್ಯರ ಸಲಹೆ ಪಡೆಯುವುದು ಉತ್ತಮ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications













