Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕಮಲದ ಬೀಜಗಳಲ್ಲಿ ಎಷ್ಟೆಲ್ಲಾ ಆರೋಗ್ಯ ಅಡಗಿದೆ ಗೊತ್ತಾ..! ತಿಳಿದರೆ ನಿಮಗೂ ಅಚ್ಚರಿ ಆಗುತ್ತೆ
ಇತ್ತೀಚಿಗೆ ಫಿಟ್‌ನೆಸ್ ಹಾಗೂ ಆರೋಗ್ಯದ ಕುರಿತು ಬಹಳ ಕಾಳಜಿ ವ್ಯಕ್ತಪಡಿಸುತ್ತಿರುವ ನಡುವೆ ಹಲವು ರೀತಿಯ ಖಾದ್ಯಗಳು ಮುಂಚೂಣಿಗೆ ಬರುತ್ತಿವೆ. ಈ ನಡುವೆ ಇತ್ತೀಚಿಗೆ ಕಮಲದ ಹೂವಿನ ಬೀಜಗಳ ಬಳಕೆ ಹೆಚ್ಚಾಗುತ್ತಿದೆ. ಮಾರುಕಟ್ಟೆಯಲ್ಲಿ ಹೆಚ್ಚು ಬೆಲೆ ಹೊಂದಿರುವ ಕಮಲದ ಹೂವಿನ ಬೀಜಗಳನ್ನು ಆಹಾರ ಕ್ರಮದಲ್ಲಿ ಬಳಸಲಾಗುತ್ತಿದೆ.
ಗೋಡಂಬಿ, ಬಾದಾಮಿ ಮತ್ತು ಪಿಸ್ತಾಗಳಂತಹ ಬೀಜಗಳನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಎಷ್ಟು ಉಪಯೋಗವಿದೆಯೋ ಅದೇ ರೀತಿ ಈ ಕಮಲದ ಬೀಜಗಳಿಂದಲೂ ಅನೇಕ ಆರೋಗ್ಯಕರ ಅಂಶಗಳು ಅಡಗಿವೆಯಂತೆ. ಕಮಲದ ಬೀಜಗಳನ್ನು ದಿನಕ್ಕೆ 2 ಅಥವಾ 4 ಬಾರಿ ಸೇವಿಸುವುದರಿಂದ ಯಾವ ರೀತಿಯ ಉಪಯೋಗವಾಗಲಿದೆ. ಅದರಿಂದ ಆರೋಗ್ಯದ ಮೇಲೆ ಯಾವ ರೀತಿಯ ಧನಾತ್ಮಕ ಅಂಶ ಪರಿಣಾಮ ಬೀಲಿದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.

ಕ್ಯಾಲ್ಸಿಯಂ ಸಮೃದ್ಧವಾಗಿದೆ
ಸಾಮಾನ್ಯವಾಗಿ ನಾವು ಕ್ಯಾಲ್ಸಿಯಂ ಪಡೆಯಲು ಹಾಲು, ಮೊಸರು, ಬೆಣ್ಣೆ ಇತ್ಯಾದಿಗಳನ್ನು ಸೇವಿಸುತ್ತೇವೆ. ಅದಕ್ಕೆ ಅನುಗುಣವಾಗಿ ಕ್ಯಾಲ್ಸಿಯಂ ಕಮಲದ ಬೀಜಗಳಲ್ಲಿಯೂ ಲಭ್ಯವಿದೆ. ಈ ಕ್ಯಾಲ್ಸಿಯಂ ಮೂಳೆಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಕೀಲು ನೋವಿನ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ತಿನ್ನುವುದರಿಂದ ಪ್ರಯೋಜನ ಪಡೆಯಬಹುದು.
ನಿದ್ರೆಗೆ ಸಹಕಾರಿ
ಇಂದು ಹೆಚ್ಚಿನ ಜನರು ಅತಿಯಾದ ಒತ್ತಡದಿಂದ ನಿದ್ರಾಹೀನತೆಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂತಹವರು ಮಲಗುವ ಮುನ್ನ ಒಂದು ಲೋಟ ಹಾಲಿನಲ್ಲಿ ಕೆಲವು ಕಮಲದ ಬೀಜದ ಪುಡಿ ಅಥವಾ ಬೀಜವನ್ನು ಹಾಕಿ ಚೆನ್ನಾಗಿ ಕುದಿಸಿ ಸೇವಿಸಬೇಕು. ಇದರಿಂದ ಅವರಿಗೆ ಉತ್ತಮ ಮತ್ತು ಶಾಂತ ನಿದ್ರೆ ಬರುತ್ತದೆ.
ಸ್ನಾಯುಗಳನ್ನು ಬಲಪಡಿಸುತ್ತದೆ
ಸ್ನಾಯು ಸೆಳೆತ ಅಥವಾ ಸ್ನಾಯು ನೋವಿನಂತಹ ಸಮಸ್ಯೆಗಳನ್ನು ಎದುರಿಸುತ್ತಿರುವವರು ಕಮಲದ ಬೀಜಗಳನ್ನು ತಿನ್ನಬಹುದು. ವಿಶೇಷವಾಗಿ ಮಕ್ಕಳಿಗೆ ಕಮಲದ ಬೀಜಗಳನ್ನು ನೀಡಿದರೆ, ಅವರ ಸ್ನಾಯುಗಳು ವೇಗವಾಗಿ ಬೆಳೆಯುತ್ತವೆ.
ಖನಿಜಗಳಿಂದ ಸಮೃದ್ಧ
ಕಮಲ ಹೂವಿನ ಬೀಜಗಳು ಮೆಗ್ನೀಸಿಯಮ್, ಪೊಟ್ಯಾಸಿಯಮ್, ಫೈಬರ್, ಕಬ್ಬಿಣ ಮತ್ತು ಸತುವುಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಇದನ್ನು ಸೇವಿಸುವ ಪುರುಷರು ಹೆಚ್ಚಿದ ಕಾಮಾಸಕ್ತಿ ಹೊಂದುತ್ತಾರೆ. ಕಮಲದ ಬೀಜಗಳು ಬಿ ಕಾಂಪ್ಲೆಕ್ಸ್ ಮತ್ತು ವಿಟಮಿನ್ ಕೆ ನಂತಹ ಪೋಷಕಾಂಶಗಳನ್ನು ಸಹ ಹೊಂದಿರುತ್ತವೆ.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ
ಮಧುಮೇಹದಿಂದ ಬಳಲುತ್ತಿರುವವರು ಫೈಬರ್‌ನಿಂದ ಸಮೃದ್ಧವಾಗಿರುವ ಕಮಲದ ಬೀಜಗಳನ್ನು ಸೇವಿಸಬಹುದು. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಮಧುಮೇಹದ ಪರಿಣಾಮಗಳನ್ನು ನಿಯಂತ್ರಿಸುತ್ತದೆ.
ತೂಕ ಇಳಿಕೆ
ತೂಕ ಇಳಿಸಿಕೊಳ್ಳಲು ಬಯಸುವವರು ಕಮಲದ ಬೀಜಗಳನ್ನು ತೆಗೆದುಕೊಳ್ಳಬಹುದು. ಏಕೆಂದರೆ ಇದು ಕೊಬ್ಬಿನ ಕ್ಯಾಲೋರಿಗಳಿಂದ ಮುಕ್ತವಾಗಿದೆ. ನಮ್ಮ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ನಾವು ಈ ಬೀಜಗಳಿಂದ ಪಡೆಯಬಹುದು.
ತ್ವಚೆಯ ಆರೋಗ್ಯಕ್ಕೆ ಉತ್ತಮ
ಕಮಲದ ಬೀಜಗಳಲ್ಲಿರುವ ಕಿಣ್ವವು ದೇಹದಲ್ಲಿ ಕಂಡುಬರುವ ಪ್ರೋಟೀನ್‌ಗಳ ಆರೋಗ್ಯವನ್ನು ಹೆಚ್ಚಿಸುವಲ್ಲಿ ಸಕ್ರಿಯ ಪಾತ್ರವನ್ನು ವಹಿಸುತ್ತದೆ. ಇದಲ್ಲದೆ ದೇಹದ ಹಾನಿಗೊಳಗಾದ ಪ್ರೋಟೀನ್‌ಗಳ ಮರುಪೂರಣ ಕೆಲಸ ಮಾಡುತ್ತದೆ. ಇದರಿಂದ ಆರೋಗ್ಯವಂತ ತ್ವಚೆ ಪಡೆಯಬಹುದಿದೆ.
ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ
ಕಮಲದ ಬೀಜದಲ್ಲಿ ಅನೇಕ ಪೋಷಕಾಂಶ ಹಾಗೂ ವಿಟಮಿನ್ ಅಡಗಿರುವುದರಿಂದ ಈ ಬೀಜವನ್ನು ನಿಯಮಿತವಾಗಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. 100 ಗ್ರಾಂ ಕಮಲದ ಬೀಜಗಳಲ್ಲಿ 89 ಕ್ಯಾಲೋರಿ ಸಿಗುತ್ತದೆ. ಅವುಗಳಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್ ಬಿ -6 ಮತ್ತು ಕಬ್ಬಿಣ ಸಮೃದ್ಧವಾಗಿದೆ. ಈ ಬೀಜಗಳು ಕೇವಲ 0.5% ಕೊಬ್ಬು ಮತ್ತು ಶೂನ್ಯ ಕೊಲೆಸ್ಟ್ರಾಲ್ ಅನ್ನು ಹೊಂದಿರುತ್ತವೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



