Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಶ್ ! ಇದು ಹೃದಯಗಳ ವಿಷಯ

ಹೃದಯದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಐದು ಸಲಹೆಗಳನ್ನು ಇಲ್ಲಿ ನೀಡಲಾಗಿದೆ.
1. ಶೇಕಡಾ 10 ರಷ್ಟು ಬೊಜ್ಜು ಕಳೆದುಕೊಳ್ಳಿ: ನೀವು ಸ್ಥೂಲಕಾಯಿಗಳಾಗಿದ್ದರೆ ನಿಮ್ಮ ದೇಹ ತೂಕದ ಶೇ. 10 ರಷ್ಟು ಭಾಗವನ್ನು ಕಡಿಮೆ ಮಾಡಿಕೊಳ್ಳಿ. ಇದರಿಂದ ರಕ್ತದೊತ್ತಡವೂ ಕ್ಷೀಣಿಸಿ ಹೃದಯ ಆರೋಗ್ಯದಿಂದಿರಲು ಸಹಾಯವಾಗುತ್ತದೆ.
2. ಹೆಚ್ಚು ನಡೆಯಿರಿ: ಹೆಚ್ಚು ನಡೆಯುವುದರಿಂದ ಮತ್ತು ಅನೇಕ ಚಟುವಟಿಕೆಗಳಲ್ಲಿ ಭಾಗಿಯಾಗುವುದರಿಂದ ನಿಮ್ಮ ಹೃದಯವೂ ಹೆಚ್ಚು ಕ್ರಿಯಾಶೀಲವಾಗಿರುತ್ತದೆ ಮತ್ತು ಮನಸ್ಸೂ ಉಲ್ಲಸಿತವಾಗಿರುತ್ತದೆ.
3. ಮೀನು ಸೇವನೆ: ವಾರದಲ್ಲಿ ಎರಡು ಅಥವಾ ಮೂರು ಬಾರಿ ಮೀನಿನ ಸೇವನೆ ಮಾಡುವುದರಿಂದ ದೇಹದಲ್ಲಿ ಸೇರಿಕೊಂಡಿರುವ ಕೆಟ್ಟ ಬೊಜ್ಜು ಕಡಿಮೆಗೊಂಡು ಹೃದಯಕ್ಕೆ ಬರಬಹುದಾದ ರೋಗಗಳನ್ನು ದೂರವಿಡುತ್ತದೆ ಎಂದು ಸಂಶೋಧನೆ ತಿಳಿಸಿಕೊಟ್ಟಿದೆ.
4. ಆಹಾರ ಶಕ್ತಿಯುತವಾಗಿರಲಿ: ಸಕ್ಕರೆ ತುಂಬಿದ ಪದಾರ್ಥಗಳಿಗಿಂತ ದೇಹಕ್ಕೆ ಮತ್ತು ಹೃದಯಕ್ಕೆ ಚೈತನ್ಯ ನೀಡುವ ಆಹಾರವನ್ನು ಸೇವಿಸುವುದು ಉತ್ತಮ. ಒಣದ್ರಾಕ್ಷಿ, ಬಾದಾಮಿಯನ್ನು ಆಗಾಗ ಸೇವಿಸುತ್ತಿದ್ದರೆ ಹೃದಯದ ಆರೋಗ್ಯ ಸುಧಾರಿಸುತ್ತದೆ ಮತ್ತು ವೃದ್ಧಿಸುತ್ತದೆ.
5. ದವಸ ಧಾನ್ಯಗಳ ಸೇವನೆಯಿರಲಿ: ಓಟ್ಸ್, ರಾಗಿ, ಗೋಧಿ, ಬಾರ್ಲಿ ಮುಂತಾದುವು ನಿಮ್ಮ ಪ್ರತಿ ನಿತ್ಯದ ಆಹಾರದಲ್ಲಿ ಒಂದಾಗಿದ್ದರೆ ನಿಮ್ಮ ಹೃದಯದ ಬಗ್ಗೆ ನೀವು ಚಿಂತಿಸುವ ಅಗತ್ಯವಿಲ್ಲ.
ಈ ಐದು ಸಲಹೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಆರಂಭಿಸಿದರೆ ಹೃದಯದ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಈ ಚಿಕ್ಕ ಚಿಕ್ಕ ಬದಲಾವಣೆಗಳು ದೊಡ್ಡ ಲಾಭವನ್ನು ತಂದುಕೊಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
