Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ನೀವೂ 11 ಗಂಟೆ ಕೆಲಸ ಮಾಡ್ತೀರಾ? ಜಾಗ್ರತೆಯಿಂದಿರಿ

ಲಂಡನ್ ನ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಿಂದ ಈ ಅಂಶ ತಿಳಿದುಬಂದಿದೆ. 11 ವರ್ಷಗಳ ಅವಧಿ ಸುಮಾರು 7000 ನೌಕರರ ಮೇಲೆ ಅವರು ಕೆಲಸ ಮಾಡುವ ಅವಧಿಯನ್ನಾಧರಿಸಿ ಈ ಸಂಶೋಧನೆ ನಡೆಸಲಾಗಿದೆ.
ನೌಕರರ ಕೆಲಸದ ಅವಧಿ, ಆರೋಗ್ಯ, ಅದರಲ್ಲೂ ಹೃದಯದ ಸ್ವಾಸ್ಥ್ಯದ ಕುರಿತು ಆಗಾಗ್ಗೆ ಮಾಹಿತಿ ಕಲೆಹಾಕಿದಾಗ, ಕಾಲಕ್ರಮೇಣ 192 ಮಂದಿಯ ಹೃದಯದ ಸ್ವಾಸ್ಥ್ಯ ಹದಗೆಟ್ಟಿದ್ದಾಗಿ ತಿಳಿದುಬಂದಿದೆ. ದಿನದಲ್ಲಿ 11 ಗಂಟೆ ಅಥವಾ ಅದಕ್ಕಿಂತ ಹೆಚ್ಚು ಸಮಯ ಕೆಲಸದಲ್ಲಿ ಕಳೆದರೆ ಅಂತಹವರಿಗೆ ಶೇ 67 ರಷ್ಟು ಹೃದಯದ ಗಂಭೀರ ಸಮಸ್ಯೆ ಉಂಟಾಗುವುದಾಗಿ ಡೈಲಿ ಮೇಲ್ ವರದಿ ಮಾಡಿದೆ.
ಒಂದೇ ಕಡೆ ಕೂತು ಕೆಲಸ ಮಾಡುವುದರಿಂದ, ಹೃದಯಕ್ಕೆ ರಕ್ತಸಂಚಲನ ಮಾಡುವ ರಕ್ತನಾಳಗಳಲ್ಲಿ ಬೊಜ್ಜು ಸೇರಿಕೊಂಡು ಅದು ಹೃದಯಕ್ಕೆ ಸಮರ್ಥವಾಗಿ ರಕ್ತ ಸಂಚಲನವಾಗುವುದನ್ನು ತಡೆದು ಹೃದಯಾಘಾತವಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದೆ.
ಅಷ್ಟೇ ಅಲ್ಲದೆ ಕೆಲಸದ ಅವಧಿಯೊಂದಿಗೆ ಧೂಮಪಾನ, ಮದ್ಯಪಾನ ಸೇರಿಕೊಂಡರೆ ಈ ಸಮಸ್ಯೆಯ ಸಾಧ್ಯತೆ ಇನ್ನೂ ಹೆಚ್ಚಾಗುತ್ತದೆ ಎಂದು ಅಧ್ಯಯನ ಎಚ್ಚರಿಕೆ ನೀಡಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
