Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಪುರುಷರೆ ಈ 5 ಹೆಮ್ಮಾರಿಗಳ ಬಗ್ಗೆ ಎಚ್ಚರ!

ಮಧ್ಯವಯಸ್ಸು ದಾಟಿದ ಪುರುಷರಲ್ಲಿ ಸಾಮಾನ್ಯವಾಗಿ ಈ ಕೆಳಗಿನ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತದೆ:
1. ಹೃದಯಾಘಾತ: ಮಹಿಳೆಯರಿಗಿಂತ ಪುರುಷರಿಗೆ ಹೃದಯಾಘಾತ ಹೆಚ್ಚಾಗಿ ಕಂಡುಬರುತ್ತದೆ. ವ್ಯಾಯಾಮ ಮಾಡದಿರುವುದು, ಅಧಿಕ ಕೊಲೆಸ್ಟ್ರಾಲ್, ಆರೋಗ್ಯಕರವಲ್ಲದ ಜೀವನ ಶೈಲಿ ಇವೆಲ್ಲವೂ ಹೃದಯಾಘಾತ ಹೆಚ್ಚಾಗಲು ಮುಖ್ಯ ಕಾರಣವಾಗಿದೆ. ಹೆಚ್ಚಿನ ಕೊಲೆಸ್ಟ್ರಾಲ್ ಹೊಂದಿದ್ದರೆ ಹೃದಯಾಘಾತ 30ರ ಹರೆಯದವರಿಗೂ ಉಂಟಾಗಬಾರದು.
ಆದ್ದರಿಂದ ದೇಹದ ತೂಕವನ್ನು ಸಮತೋಲದಲ್ಲಿಡಲು, ಆರೋಗ್ಯಕರ ಆಹಾರ ಸೇವನೆ, ವ್ಯಾಯಾಮ ಮಾಡುವುದು ಒಳ್ಳೆಯದು.
2. ಪಾರ್ಶ್ವವಾಯು: ಹೃದಯಾಘಾತ ಮತ್ತು ಪಾರ್ಶ್ವವಾಯು ಕಾಯಿಲೆಗಳ ಲಕ್ಷಣಗಳು ಬೇರೆ-ಬೇರೆಯಾಗಿದ್ದರೂ ಉಂಟಾಗುವುದು ಮಾತ್ರ ಸಾಮಾನ್ಯವಾದ ಕಾರಣಗಳಿಂದ. ಅಧಿಕ ರಕ್ತದೊತ್ತಡ ಮತ್ತು ಮಾನಸಿಕ ಒತ್ತಡಗಳು ಈ ಎರಡು ಕಾಯಿಲೆ ಉಂಟಾಗಲು ಪ್ರಮುಖ ಕಾರಣಗಳಾಗಿವೆ. ಮೆದುಳಿಗೆ ರಕ್ತ ಸಂಚಾರ ಸರಿಯಾಗಿ ಪೂರೈಕೆಯಾಗದಿದ್ದರೆ ಪಾರ್ಶ್ವವಾಯು ಉಂಟಾಗುತ್ತದೆ.
3. ಶ್ವಾಸಕೋಶದ ಕ್ಯಾನ್ಸರ್: ಧೂಮಪಾನ, ಪರಿಸರ ಮಾಲಿನ್ಯ, ಜೀವನ ಶೈಲಿ ಇವುಗಳು ಶ್ವಾಸಕೋಶದ ಕ್ಯಾನ್ಸರ್ ಬರಲು ಪ್ರಮುಖ ಕಾರಣಗಳಾಗಿವೆ. ಅದರಲ್ಲೂ ಧೂಮಪಾನ ಶ್ವಾಸಕೋಶದ ಕ್ಯಾನ್ಸರ್ ಗೆ ಪ್ರಮುಖ ಕಾರಣವಾಗಿದೆ. ಆದ್ದರಿಂದ ಧೂಮಪಾನ ಹವ್ಯಾಸದಿಂದ ಆದಷ್ಟು ದೂರವಿರುವುದು ಒಳ್ಳೆಯದು.
4. ಮಧುಮೇಹ: ಮಧುಮೇಹ ಕಾಯಿಲೆ ಕೂಡ ಮಹಿಳೆಯರಿಗಿಂತ ಪುರುಷರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ದೇಹದಲ್ಲಿರುವ ಈಸ್ಟ್ರೋಜನ್ ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತದೆ. ಆದರೆ ಈಸ್ಟ್ರೋಜನ್ ಪುರುಷರಲ್ಲಿ ಕಡಿಮೆ ಪ್ರಮಾಣದಲ್ಲಿರುತ್ತದೆ. ಆದ್ದರಿಂದ ಪುರುಷರಿಗೆ ಮಧುಮೇಹ ಬರುವ ಸಾಧ್ಯತೆ ಹೆಚ್ಚು. ದಿನ ನಿತ್ಯ ವ್ಯಾಯಾಮ ಮಾಡುವುದರಿಂದ ಮಧುಮೇಹ ಕಾಯಿಲೆ ಬರದಂತೆ ತಡೆಯಬಹುದು.
5. ನಪುಂಸಕತೆ:ಇತ್ತೀಚಿಕೆಗೆ ಈ ಸಮಸ್ಯೆ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಈ ರೀತಿ ಹೆಚ್ಚಾಗುತ್ತಿರುವುದು ಆಧುನಿಕ ಜೀವನಶೈಲಿಯ ಕೊಡುಗೆಯಾಗಿದೆ. ಫ್ಯಾಷನ್ ಸೋಗಿನಲ್ಲಿ ಕಲಿಯುತ್ತಿರುವ ಕೆಟ್ಟ ಹವ್ಯಾಸಗಳು ಮತ್ತು ಕೊಲೆಸ್ಟ್ರಾಲ್ ಈ ಸಮಸ್ಯೆಗೆ ಮುಖ್ಯ ಕಾರಣಗಳಾಗಿವೆ.
ಆದ್ದರಿಂದ ಪುರುಷರು ಒಳ್ಳೆಯ ಜೀವನ ಶೈಲಿ ಅನುಸರಿಸಿದರೆ ಮತ್ತು ದೇಹದ ತೂಕವನ್ನು ಮಿತಿಯಲ್ಲಿಟ್ಟರೆ ಈ ಮೇಲಿನ ಸಮಸ್ಯೆಗಳು ಬರದಂತೆ 90% ತಡೆಯಬಹುದಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
