Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಚಿಕ್ಕ ಪ್ರಾಯದಲ್ಲಿಯೇ ಹೃದಯಾಘಾತ: ಇದನ್ನು ತಡೆಗಟ್ಟಲು ಆಯುರ್ವೇದ ಟಿಪ್ಸ್
ಪುನೀತ್ ರಾಜ್‌ಕುಮಾರ್ ಸಾವಿನ ಬಳಿಕ ಜನರು ಹೃದಯದ ಆರೋಗ್ಯದ ಬಗ್ಗೆ ತುಂಬಾನೇ ಕಾಳಜಿವಹಿಸುತ್ತಿದ್ದಾರೆ. ಹೃದಯ ಪರೀಕ್ಷೆಗೆ ಬರುವವರ ಸಂಖ್ಯೆ ಶೇ.30ರಷ್ಟು ಹೆಚ್ಚಾಗಿದೆ ಎಂದು ಬೆಂಗಳೂರಿನ ಜಯದೇವ ಆಸ್ಪತ್ರೆಯ ತಜ್ಞರು ಹೇಳುತ್ತಿದ್ದಾರೆ. ಚಿರಂಜೀವಿ ಸರ್ಜಾ, ಹಿಂದಿ ಬಿಗ್‌ಬಾಸ್ ವಿನ್ನರ್ ಆಗಿದ್ದ ಸಿದ್ಧಾರ್ಥ್ ಶುಕ್ಲ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿ ಕೇಳಿದಾಗ ಅಷ್ಟೊಂದು ಫಿಟ್ ಆಗಿದ್ದವರಿಗೆ ಹೃದಯಾಘಾತ ಬರಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದರು. ಇದೀಗ ಪುನೀತ್ ರಾಜ್‌ಕುಮಾರ್ ಅವರ ಸಾವು ದೊಡ್ಡ ಶಾಕ್ ಅನ್ನೇ ನೀಡಿದೆ. ನಮಗೇನೂ ತೊಂದರೆಯಿಲ್ಲ ಆರಾಮವಾಗಿದ್ದೇವೆ ಎಂದು ಅಂದುಕೊಂಡವರು ಕೂಡ ತಮ್ಮ ಹೃದಯದ ಆರೋಗ್ಯ ಹೇಗಿದೆ ಎಂದು ತಿಳಿದುಬಿಡೋಣ ಎಂದ ಪರೀಕ್ಷೆ ಮಾಡಿಸುತ್ತಿದ್ದಾರೆ.
ತುಂಬಾ ಚಿಕ್ಕ ಪ್ರಾಯದಲ್ಲಿ ಹೃದಯಕ್ಕೆ ಹಾನಿಯುಂಟಾಗದಂತೆ ಹೃದಯವನ್ನು ಜೋಪಾನ ಮಾಡಲು ಆಯುರ್ವೇದ ಕೆಲವೊಂದು ಟಿಪ್ಸ್ ನೀಡಿ, ಅದೇನೆಂದು ನೋಡೋಣ ಬನ್ನಿ:

ಹೃದಯಾಘಾತಕ್ಕೆ ಕಾರಣವೇನು?
ಹೃದಯದ ನಾಳಗಳಲ್ಲಿ ರಕ್ತ ಸಂಚಾರಕ್ಕೆ ವ್ಯತ್ಯಾಸ ಉಂಟಾದರೆ ಅಂದರೆ ಸರಿಯಾಗಿ ರಕ್ತ ಪೂರೈಕೆಯಾಗದೇ ಹೋದಾಗ ರಕ್ತ ಸಂಚಾರವಾಗುವುದು. ಅದಿಕ ಕೊಲೆಸ್ಟ್ರಾಲ್, ಒಬೆಸಿಟಿ, ಮಧುಮೇಹ, ಕುಟುಂಬದಲ್ಲಿ ಹೃದಯ ಸಮಸ್ಯೆಯ ಇತಿಹಾಸ ಇರುವವರಲ್ಲಿ ಈ ಸಮಸ್ಯೆ ಕಂಡು ಬರುವುದು. ಅಧಿಕ ಕೊಬ್ಬಿನಂಶದ ಆಹಾರ ಸೇವನೆ, ಅಧಿಕ ಸೋಡಿಯಂ ಇರುವ ಆಹಾರಗಳ ಸೇವನೆ, ಧೂಮಪಾನ ಇವೆಲ್ಲಾ ಹೃದಯಾಘಾತವನ್ನು ಉಂಟು ಮಾಡಬಹುದು.
ಹೃದಯ ಸಂಬಂಧಿ ಸಮಸ್ಯೆ ತಡೆಗಟ್ಟಲು ಕೆಲವೊಂದು ಆಹಾರಗಳನ್ನು ಆಹಾರಕ್ರಮದಲ್ಲಿ ಸೇರಿಸಬೇಕೆಂದು ಆಯುರ್ವೇದದಲ್ಲಿ ಹೇಳಲಾಗಿದೆ.

ಹೃದಯಾಘಾತ ನಿಮ್ಮ ಆಹಾರಕ್ರಮದಲ್ಲಿ ಸೇರಿಸಬೇಕಾದ ಆಹಾರಗಳು
ಹೊಳೆ ಮತ್ತಿ, ತೊರೆ ಮತ್ತಿ(Terminalia Arjuna, Arjuna Tree)
ಕೊಲೆಸ್ಟ್ರಾಲ್ ಪ್ರಮಾಣ ನಿಯಂತ್ರಣದಲ್ಲಿಡಲು ಇದು ತುಂಬಾನೇ ಸಹಕಾರಿ. ಇದನ್ನು ಬಳಸುವುದರಿಂದ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚುವುದು, ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುವುದು.

ಚಕ್ಕೆ
ಭಾರತೀಯರ ಅಡುಗೆಯಲ್ಲಿ ಚಕ್ಕೆ ಇದ್ದೇ ಇರುತ್ತದೆ. ಇದು ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ. ಹೃದಯ ಸಮಸ್ಯೆ ಇರುವವರು ಬೆಳಗ್ಗೆ ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಚಕ್ಕೆ ಪುಡಿ ಹಾಕಿ ಕುಡಿದರೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು.

ಪಪ್ಪಾಯಿ
ಪ್ರತಿದಿನ ಒಂದು ಬೌಲ್ ಪಪ್ಪಾಯಿ ತಿಂದರೆ ಹೃದಯಕ್ಕೆ ತುಂಬಾನೇ ಒಳ್ಳೆಯದು. ಇದರಲ್ಲಿ ವಿಟಮಿನ್ ಎ, ಸಿ, ಇ ಹಾಗೂ ಆ್ಯಂಟಿಆಕ್ಸಿಡೆಂಟ್ ಅಂಶ ಅಧಿಕವಿರುತ್ತದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ. ಅಲ್ಲದೆ ಹೃದಯ ನಾಳಗಳಲ್ಲಿ ಬ್ಲಾಕ್ ಉಂಟಾಗದಂತೆ ತಡೆಗಟ್ಟುತ್ತೆ.

ಅಶ್ವಗಂಧ
ಅಶ್ವಗಂಧವನ್ನು ಆಯುರ್ವೇದದಲ್ಲಿ ತುಂಬಾ ವ್ಯಾಪಕವಾಗಿ ಬಳಸಲಾಗುವುದು. ಅಶ್ವಗಂಧದಲ್ಲಿ ಹಲವು ಬಗೆಯ ಔಷಧೀಯ ಗುಣಗಳಿದ್ದು ಇದನ್ನು ಪ್ರತಿದಿನ ಬಳಸುವುದರಿಂದ ಹೃದಯದ ಸ್ವಾಸ್ಥ್ಯ ಹೆಚ್ಚುವುದು. ಇದು ಒತ್ತಡದ ಹಾರ್ಮೋನ್ ಬಿಡುಗಡೆಯನ್ನು ಕಡಿಮೆ ಮಾಡುತ್ತೆ, ಕೊಲೆಸ್ಟ್ರಾಲ್ ನಿಯಂತ್ರಿಸುತ್ತದೆ.



Click it and Unblock the Notifications
