Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ತೂಕ ಹೆಚ್ಚಾದಂತೆ ಹೃದಯಕ್ಕೆ ಆಪತ್ತು ಖಂಡಿತ !
ಆರೋಗ್ಯ ನಮ್ಮೆಲ್ಲರ ಸಂಪತ್ತು. ಆರೋಗ್ಯವನ್ನು ಕಾಪಾಡಿಕೊಳ್ಳುವುದು ಜೀವನದಲ್ಲಿ ತುಂಬಾನೇ ಮುಖ್ಯವಾಗುತ್ತದೆ. ಅದ್ರಲ್ಲೂ ನಮ್ಮ ದೇಹದ ತೂಕದಲ್ಲಿ ವ್ಯತ್ಯಾಸವಾದರೆ ಅದು ನಮ್ಮ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಬಹುದು.
ಅದ್ರಲ್ಲಿ ಮುಖ್ಯವಾಗಿ ಹೃದಯಾಘಾತ. ಹೌದು, ದೇಹದ ತೂಕ ಹೆಚ್ಚಳವಾದ್ರೆ ಹಾರ್ಟ್ ಅಟ್ಯಾಕ್ ಆಗುವ ಸಾಧ್ಯತೆ ಇದೆ. ಹೀಗಾಗಿ ಸಮ ಪ್ರಮಾಣದಲ್ಲಿ ನಮ್ಮ ದೇಹದ ತೂಕ ಕಾಪಾಡಿಕೊಳ್ಳೋದು ತುಂಬಾನೇ ಮುಖ್ಯವಾಗುತ್ತದೆ. ಹಾಗಾದ್ರೆ ದೇಹದ ತೂಕ ಇಳಿಸಿಕೊಳ್ಳೋದ್ರಿಂದ ಹೃದಯದ ಆರೋಗ್ಯಕ್ಕೆ ಯಾವ ರೀತಿ ಸಹಾಯವಾಗಲಿದೆ ಅನ್ನೋದನ್ನ ತಿಳಿಯೋಣ.

ಅತೀ ಹೆಚ್ಚು ತೂಕ ಹೊಂದಿದ್ದರೆ ಹೃದಯಾಘಾತದ ಅಪಾಯಗಳು ಹೆಚ್ಚಾಗಿರುತ್ತದೆ. ಆದ್ದರಿಂದ ಹಾರ್ಟ್ ಅಟ್ಯಾಕ್‌ನ ಅಪಾಯದಿಂದ ತಪ್ಪಿಸಿಕೊಳ್ಳಬೇಕಾದರೆ ತೂಕ ಇಳಿಸಿಕೊಳ್ಳಲೇಬೇಕು. ಹಾಗಂತ ವೇಗವಾಗಿ ತೂಕ ಇಳಿಸಿಕೊಳ್ಳೋದಕ್ಕೆ ಹೋದರೆ ಅಪಾಯ ತಪ್ಪಿದ್ದಲ್ಲ. ಯಾವ ವಿಧಾನದಲ್ಲಿ ತೂಕ ಇಳಿಸಿಕೊಳ್ಳಬೇಕೆಂದರೆ ಅದರಿಂದ ನಿಮ್ಮ ಹೃದಯಕ್ಕೆ ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ನಿಮ್ಮ ಹೃದಯದ ಆರೋಗ್ಯ ಹಾಳಾಗುವುದಕ್ಕೆ ಸ್ಥೂಲಕಾಯತೆ ಕೂಡ ಒಂದು ರೀತಿಯಲ್ಲಿ ಕಾರಣವಾಗಬಹುದು. ಹಾಗಾದ್ರೆ ತೂಕ ಇಳಿಸಿಕೊಂಡರೆ ಏನೆಲ್ಲಾ ಲಾಭಗಳಿದೆ ಅನ್ನೋದನ್ನ ಹೇಳ್ತೀವಿ.
1. ನಿಮ್ಮ ರಕ್ತದೊತ್ತಡ ಕಡಿಮೆಯಾಗುತ್ತದೆ
ನೀವು ಅತಿಯಾದ ತೂಕವನ್ನು ಹೊಂದಿದ್ದರೆ ರಕ್ತವನ್ನು ದೇಹದ ಎಲ್ಲಾ ಬಾಗಕ್ಕೆ ಪಂಪ್ ಮಾಡಲು ನಿಮ್ಮ ಹೃದಯ ಹೆಚ್ಚು ಕೆಲಸ ಮಾಡಬೇಕಾಗುತ್ತದೆ. ಹೃದಯ ಹೆಚ್ಚು ಒತ್ತಡ ಹಾಕಿ ರಕ್ತವನ್ನು ಪಂಪ್ ಮಾಡಿದಂತೆ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತದೆ. ಇದರಿಂದಾಗಿ ಕಣ್ಣಿನ ಸಮಸ್ಯೆ, ಸ್ಟ್ರೋಕ್, ಕಿಡ್ನಿ ಸಮಸ್ಯೆ ಇದರ ಜೊತೆಗೆ ಹೃದಯದ ಸಮಸ್ಯೆಯು ಕಾಣಿಸಿಕೊಳ್ಳುತ್ತದೆ. ಹೀಗಾಗಿ ದೇಹದ ತೂಕ ಕಡಿಮೆ ಮಾಡಿಕೊಂಡರೆ ರಕ್ತದೊತ್ತಡ ತನ್ನಿಂದ ತಾನೇ ಕಡಿಮೆಯಾಗುತ್ತದೆ.
2. ದೇಹದಲ್ಲಿನ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ
ಸ್ಥೂಲಕಾಯತೆಯು ಅಧಿಕ ಕೊಲೆಸ್ಟ್ರಾಲ್‌ಗೆ ಕಾರಣವಾಗಬಹುದು ಮತ್ತು ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗೆ ಕಾರಣವಾಗಬಹುದು. ಇವುಗಳು ಒಂದಕ್ಕೊಂದು ಸಂಬಂಧವನ್ನು ಹೊಂದಿದೆ. ತೂಕ ಹೆಚ್ಚಾಗಲು ಅತಿಯಾಗಿ ತಿನ್ನುವುದು ಹಾಗೂ ಹಾರ್ಮೋನು ಸಮಸ್ಯೆಯು ಕೂಡ ಕಾರಣವಾಗಬಹುದು. ಮಾಂಸ, ಜಂಕ್‌ಫುಡ್, ಫಾಸ್ಟ್‌ಫುಡ್‌ಗಳು, ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ಸೇವಿಸುವುದರಿಂದ ನಿಮ್ಮ ದೇಹದ ತೂಕ ಏಕಾಏಕಿ ಹೆಚ್ಚಾಗುತ್ತದೆ. ತೂಕ ಹೆಚ್ಚಾದಾಗ ಕೊಲೆಸ್ಟ್ರಾಲ್ ಪ್ರಮಾಣ ಕೂಡ ಹೆಚ್ಚಾಗುತ್ತಾ ಸಾಗುತ್ತದೆ. ಹೀಗಾಗಿ ನೀವು ತೂಕ ಕಳೆದುಕೊಂಡಾಗ ಅದರ ಜೊತೆಗೆ ದೇಹದಲ್ಲಿರುವ ಕೊಬ್ಬು ಕಡಿಮೆಯಾಗುತ್ತದೆ. ನಿಮ್ಮ ಹೃದಯ ಸಾಮಾನ್ಯವಾಗಿ ಕಾರ್ಯ ನಿರ್ವಹಿಸಲು ಇದು ಸಹಾಯ ಮಾಡುತ್ತದೆ.
3. ಡಯಾಬಿಟೀಸ್‌ನ ಅಪಾಯವನ್ನು ಕಡಿಮೆ ಮಾಡುತ್ತದೆ
ಡಯಾಬಿಟೀಸ್ ನಿಮ್ಮ ದೇಹದಲ್ಲಿ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ಹೃದಯಾಘಾತ ಹಾಗೂ ಹಾರ್ಟ್ ಸ್ಟ್ರೋಕ್ ಅಪಾಯಗಳು ಹೆಚ್ಚಾಗುತ್ತದೆ. ದೇಹದ ತೂಕ ಕಡಿಮೆಗೊಳಿಸಿದರೆ ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು. ಹೀಗಾಗಿ ಹಾರ್ಟ್ ಅಟ್ಯಾಕ್‌ನ ಅಪಾಯದಿಂದ ತಪ್ಪಿಸಿಕೊಳ್ಳಬಹುದು.
ಮನುಷ್ಯ ಜೀವಂತವಾಗಿ ಉಸಿರಾಡಬೇಕೆಂದರೆ ಹೃದಯ ಕೆಲಸ ಮಾಡಲೇಬೇಕು. ಹೀಗಾಗಿ ಹೃದಯದ ಆರೋಗ್ಯ ಕಾಪಾಡುವುದು ತುಂಬಾನೇ ಮುಖ್ಯವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



