Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಈ ತರಕಾರಿ ಕಂಡರೆ ಮೂಗು ಮುರಿಯದಿರಿ, ಇದು ಮಧುಮೇಹಕ್ಕೆ ಉತ್ತಮ ಮದ್ದು!
ಬದನೆ ಅಂದಾಕ್ಷಣ ಮೂಗು ಮುರಿಯುವವರೇ ಹೆಚ್ಚು. ಆದರೆ ಕಡಿಮೆ ಕ್ಯಾಲೋರಿ ಮತ್ತು ಕಾರ್ಬೋಹೈಡ್ರೇಟ್ ಹೊಂದಿರುವ ಈ ತರಕಾರಿ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳ ತಾಣವಾಗಿದೆ ಎಂದು ನಿಮಗೆ ತಿಳಿದಿದೆಯೇ? ಹೌದು, ನೀವು ಮಧುಮೇಹದಿಂದ ಬಳಲುತ್ತಿದ್ದರೆ, ಈ ಕೂಡಲೇ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಅದು ಏಕೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಬದನೆ ಮಧುಮೇಹಿಗಳಿಗೆ ಏಕೆ ಉತ್ತಮ?:
NCBI ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಬದನೆಯು ತುಂಬಾ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿದ್ದ, ಅದು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುವುದಿಲ್ಲ. ಇದು ಪಿಷ್ಟರಹಿತ ಆಹಾರವಾಗಿದೆ. ಇದರ ಗ್ಲೈಸೆಮಿಕ್ ಇಂಡೆಕ್ಸ್ (ಜಿಐ) ಸುಮಾರು 15 ಆಗಿದೆ, ಈ ಕಾರಣದಿಂದಾಗಿ ಇದು ಮಧುಮೇಹಿಗಳಿಗೆ ಪ್ರಯೋಜನಕಾರಿ. ಏಕೆಂದರೆ, ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವ ಆಹಾರಗಳು ಗ್ಲೂಕೋಸ್ ಮಟ್ಟವನ್ನು ಹೆಚ್ಚಿಸುವುದಿಲ್ಲ.
ಆ ಎಲ್ಲಾ ಪೋಷಕಾಂಶಗಳು ಬಿಳಿಬದನೆಯಲ್ಲಿದ್ದು, ಇದು ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅವಶ್ಯಕವಾಗಿದೆ. ಈ ತರಕಾರಿಯಲ್ಲಿ ಹೆಚ್ಚಿನ ಸಂಖ್ಯೆಯ ಜೀವಸತ್ವಗಳು, ಖನಿಜಗಳು ಮತ್ತು ಕರಗುವ ಫೈಬರ್ ಇವೆ. ಬಹು ಮುಖ್ಯವಾಗಿ, ಇದು ಕಡಿಮೆ ಕ್ಯಾಲೋರಿ ಮತ್ತು ಕೊಬ್ಬಿನಾಂಶವನ್ನು ಹೊಂದಿದೆ. ಜೊತೆಗೆ ನಿಯಾಸಿನ್, ಮ್ಯಾಂಗನೀಸ್ ಮತ್ತು ತಾಮ್ರದಂತಹ ಸಣ್ಣ ಸಂಖ್ಯೆಯ ಇತರ ಪೋಷಕಾಂಶಗಳನ್ನು ಸಹ ಒಳಗೊಂಡಿದೆ.

ಮಧುಮೇಹಿಗಳಿಗೆ ಬದನೆಕಾಯಿಯ ಪ್ರಯೋಜನಗಳು:
ಬದನೆಕಾಯಿಯ ಪ್ರಯೋಜನಗಳ ಬಗ್ಗೆ ಮಾತನಾಡುವುದಾದರೆ, ಅದು ಜೀರ್ಣಕ್ರಿಯೆಗೆ ಒಳ್ಳೆಯದು. ಏಕೆಂದರೆ ಇದು ಫೈಬರ್ನಲ್ಲಿ ಸಮೃದ್ಧವಾಗಿರುವ ತರಕಾರಿಯಾಗಿದೆ. ಇನ್ನು ಸಕ್ಕರೆ ಕಾಯಿಲೆ ಇರುವವರಲ್ಲಿ ಇನ್ಸುಲಿನ್ ಹೆಚ್ಚಿಸಿ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ. ಇದಲ್ಲದೆ, ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಈ ತರಕಾರಿ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.

ಮಧುಮೇಹಿಗಳು ಬದನೆಯನ್ನು ಹೇಗೆ ಸೇವಿಸಬೇಕು?:
ನೀವು ಬದನೆಕಾಯಿಯ ತುಂಡುಗಳನ್ನು ಅಕ್ಕಿ ಹಿಟ್ಟು ಹಾಕಿ ಹುರಿದು, ತಿನ್ನಬಹುದು ಅಥವಾ ಬದನೆಕಾಯಿ ಕರಿ ಮಾಡಿ ಸೇವಿಸಬಹುದು. ಬಿಳಿಬದನೆ ತುಂಡುಗಳನ್ನು ಬ್ರೆಡ್‌ನ ಮಧ್ಯದಲ್ಲಿ ಟೋಸ್ಟ್ ಮಾಡಿ ಸೇವಿಸಲೂಬಹುದು. ಜೊತೆಗೆ ಹುರಿದ ಬಿಳಿಬದನೆ ಸೂಪ್ ಇನ್ನೂ ಉತ್ತಮ ಆಯ್ಕೆಯಾಗಿದೆ.

ಮಧುಮೇಹ ರೋಗಿಗಳಿಗೆ ಬಿಳಿಬದನೆ ಎಲೆಗಳು ಮತ್ತು ಬೀಜಗಳು:
ಬಿಳಿಬದನೆ ಎಲೆಗಳಲ್ಲಿ ಫೈಬರ್ ಮತ್ತು ಮೆಗ್ನೀಸಿಯಮ್ನಂತಹ ಪೋಷಕಾಂಶಗಳು ಕಂಡುಬರುತ್ತವೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಕಾರಿ. ಅನೇಕ ಬಾರಿ ಜನರು ತರಕಾರಿಗಳನ್ನು ಬೇಯಿಸುವಾಗ ಅದರಿಂದ ಸಣ್ಣ ಬೀಜಗಳನ್ನು ತೆಗೆಯುತ್ತಾರೆ. ಆದರೆ, ಜೀರ್ಣಕ್ರಿಯೆಯನ್ನು ಸರಿಯಾಗಿಡಲು ಈ ಬೀಜಗಳು ಸಹಾಯಕವಾಗಿವೆ ಎಂಬುದನ್ನು ನೆನಪಿಡಿ ನೀವು ಸಕ್ಕರೆ ರೋಗಿಗಳಾಗಿದ್ದರೆ, ನೀವು ಬದನೆ ಎಲೆಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ಬಿಳಿಬದನೆಯ ಇತರ ಆರೋಗ್ಯ ಪ್ರಯೋಜನಗಳು:
ಬಿಳಿಬದನೆಯು ವಿಟಮಿನ್ ಎ ಮತ್ತು ಸಿ ನಂತಹ ಹೆಚ್ಚಿನ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ, ಇದು ಜೀವಕೋಶದ ಹಾನಿಯಿಂದ ರಕ್ಷಿಸುತ್ತದೆ. ಕಡಿಮೆ ಕ್ಯಾಲೋರಿ ಹೊಂದಿರುವ ಇದು ತೂಕ ನಷ್ಟಕ್ಕೆ ಉತ್ತಮ ಆಹಾರವಾಗಿದೆ. ಫೈಬರ್ನಲ್ಲಿ ಸಮೃದ್ಧವಾಗಿದ್ದು, ಮಲಬದ್ಧತೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಜೊತೆಗೆ ಬದನೆಕಾಯಿಯಲ್ಲಿ ಫೋಲೇಟ್ ಇದ್ದು, ಇದು ರಕ್ತಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಬದನೆಯಿಂದ ಉತ್ಪತ್ತಿಯಾಗುವ ಗ್ಲೈಕೋಲ್ಕಲಾಯ್ಡ್‌ಗಳು ಚರ್ಮದ ಕ್ಯಾನ್ಸರ್ ಅನ್ನು ತಡೆಯಲು ಸಹಾಯ ಮಾಡುತ್ತದೆ.



Click it and Unblock the Notifications
