Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
Beauty tips: ಈ ಆಹಾರಗಳನ್ನು ನಿತ್ಯ ಸೇವಿಸಿದರೆ ನಿಮ್ಮ ತ್ವಚೆ ಸುಕ್ಕಾಗುವುದಿಲ್ಲ!
ಆಕರ್ಷಕವಾಗಿ ಕಾಣಬೇಕು ಎಂಬ ಬಯಕೆ ಯಾರಿಗೆ ತಾನೆ ಇರುವುದಿಲ್ಲ. ಆದರೆ ನಮ್ಮ ಆಹಾರ ಶೈಲಿ, ಮಾಲಿನ್ಯ, ಒತ್ತಡದಿಂದಾಗಿ ನಮ್ಮ ತ್ವಚೆ ಬೇಗನೇ ಸುಕ್ಕಾಗುವುದು, ವಯಸ್ಸಾದಂತೆ ಕಾಣುವುದು ಬಹುತೇಕ ಮಹಿಳೆಯರ ಸಮಸ್ಯೆಯಾಗಿದೆ.

ಆಹಾರ ತಜ್ಞರ ಪ್ರಕಾರ, ನಾವು ನಿತ್ಯ ಇಂಥಾ ಆಹಾರಗಳನ್ನು ಸೇವಿಸಿದರೆ ನಮ್ಮ ತ್ವಚೆ ಬೇಗ ಸುಕ್ಕಾಗುವುದಿಲ್ಲ ಅಲ್ಲದೆ ಸದಾ ಹೊಳೆಯುವಂತೆ ಮಾಡುತ್ತದೆ ಎನ್ನುತ್ತಾರೆ. ಯಾವೆಲ್ಲಾ ಆಹಾರ, ಹೇಗೆ ಸೇವಿಸಬೇಕು ಮುಂದೆ ನೋಡೋಣ:

ಬಾದಾಮಿ
ಬಾದಾಮಿಯಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ ಮತ್ತು ಇದು ಚರ್ಮಕ್ಕೆ ಅತ್ಯುತ್ತಮ ಪೋಷಕಾಂಶವಾಗಿದೆ. ಮೆದುಳು, ಹೃದಯ ಮತ್ತು ಕೀಲುಗಳ ಆರೋಗ್ಯವನ್ನು ಬೆಂಬಲಿಸುವ ಒಮೆಗಾ 3 ಬಾದಾಮಿಯಲ್ಲಿ ಸಮೃದ್ಧವಾಗಿವೆ. ದಿನಕ್ಕೆ ಬೆರಳೆಣಿಕೆಯಷ್ಟು ಬಾದಾಮಿ ತಿನ್ನುವುದು ಅಥವಾ ಸಲಾಡ್‌ಗಳು ಅಥವಾ ಓಟ್‌ಮೀಲ್‌ಗಳ ಜತೆ ಸವಿಯುವುದರಿಂದ ಆರೋಗ್ಯಕರ ಚರ್ಮವನ್ನು ನೀವು ಪಡೆಯಬಹುದು.

ತೆಂಗಿನ ಎಣ್ಣೆ
ತೆಂಗಿನ ಎಣ್ಣೆ ಚರ್ಮಕ್ಕೆ ಅದ್ಭುತವಾಗಿದೆ. ಇದು ತುಂಬಾ ಶುಷ್ಕ ಚರ್ಮ, ಸುಕ್ಕುಗಳು ಮತ್ತು ನಿಮ್ಮ ಚರ್ಮದ ಟೋನ್ ಅನ್ನು ಸುಗಮಗೊಳಿಸಲು ಸಹಾಯಕವಾಗಿದೆ. ತೆಂಗಿನ ಎಣ್ಣೆಯನ್ನು ದೇಹಕ್ಕೆ ಹಚ್ಚಿಕೊಳ್ಳುವುದರ ಜೊತೆಗೆ ನಿಮ್ಮ ಅಡುಗೆ ಖಾದ್ಯಗಳಿಗೂ ಬಳಸುವುದರಿಂದ ಆರೋಗ್ಯಕ್ಕೆ ಉತ್ತಮವಾಗುತ್ತದೆ. ಇದರಿಂದ ಬಹಿರ್ಮುಖವಾಗಿ ತ್ವಚೆ ಆಕರ್ಷಕವಾಗಿ ಕಾಣಲು ಸಹಾಯಕವಾಗಿದೆ.

ಆವಕಾಡೊ
ಬೆಣ್ಣೆಹಣ್ಣುಗಳ ಫೇಸ್ ಪ್ಯಾಕ್ ಅನ್ನು ಬಳಸುವುದು ತ್ವಚೆಗೆ ಅತ್ಯುತ್ತಮ ಫಲಿತಾಂಶಗಳನ್ನು ನೀಡುತ್ತದೆ. ಇದು ಒಮೆಗಾ 3 ಮತ್ತು ವಿಟಮಿನ್ ಇ ಎಣ್ಣೆಯಿಂದ ತುಂಬಿರುತ್ತದೆ. ಅಷ್ಟೇ ಅಲ್ಲದೆ, ನಿಮ್ಮ ಸಲಾಡ್‌ಗಳಿಗೆ ಸೇರಿಸಿ ಸೇವಿಸುವುದರಿಂದ ತ್ವಚೆಯ ಆರೋಗ್ಯವನ್ನು ಸುಧಾರಿಸುತ್ತದೆ.

ಪಾಲಕ್ ಸೊಪ್ಪು
ಪಾಲಕ್ ಸೊಪ್ಪು ವಿಟಮಿನ್ ಇ, ವಿಟಮಿನ್ ಸಿ ಮತ್ತು ಬೀಟಾ ಕ್ಯಾರೋಟಿನ್‌ನಿಂದ ಸಮೃದ್ಧವಾಗಿದೆ. ಅಲ್ಲದೆ, ಇದು ಚರ್ಮದ ಸ್ವಾಸ್ಥವನ್ನು ಕಾಪಾಡುತ್ತದೆ, ತ್ವಚೆ ಸುಕ್ಕಾಗುವುದನ್ನು ನಿಧಾನಗೊಳಿತ್ತದೆ. ಪಾಲಕ್ ಸೊಪ್ಪು ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ದಿನಕ್ಕೆ ಕನಿಷ್ಠ ಒಂದು ಕಪ್ ಪಾಲಾಕ್ ಸೊಪ್ಪು ತಿನ್ನಿರಿ.

ಚಿಯಾ ಬೀಜಗಳು
ಚಿಯಾ ಬೀಜಗಳು ಒಮೆಗಾ 3, ಪ್ರೋಟೀನ್ ಮತ್ತು ಫೈಬರ್‌ನಿಂದ ಸಮೃದ್ಧವಾಗಿದೆ. ಚಿಯಾ ಬೀಜಗಳು ಉರಿಯೂತಕ್ಕೆ ಸಹ ಸಹಾಯಕವಾಗಿವೆ. ಅಷ್ಟೇ ಅಲ್ಲದೆ ಇದು, ತ್ವಚೆಯ ಆಕರ್ಷಕತೆಯನ್ನು ಹೆಚ್ಚಿಸುತ್ತದೆ. ಚರ್ಮ ಸುಕ್ಕಾಗದಂತೆ ತಡೆಯುತ್ತದೆ.



Click it and Unblock the Notifications
