Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಪುರುಷರೇ, ಈ ಡ್ರೈ ಫ್ರೂಟ್ಸ್ ತಿಂದರೆ ಬೆಡ್‌ನಲ್ಲಿ ಸಾಮರ್ಥ್ಯ ಹೆಚ್ಚಾಗುತ್ತಂತೆ.!
ಒಬ್ಬ ಮನುಷ್ಯನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ, ಅಷ್ಟೇ, ಲೈಂಗಿಕ ಆರೋಗ್ಯವೂ ಮುಖ್ಯವಾಗಿರುತ್ತದೆ. ಲೈಂಗಿಕತೆ ಎನ್ನುವುದು ಪ್ರತಿಯೊಬ್ಬರ ಬದುಕಿನ ಒಂದು ಭಾಗ. ಇದನ್ನು ಆರೋಗ್ಯಕರವಾಗಿರಿಸಿಕೊಳ್ಳುವುದು ಬಹಳ ಮುಖ್ಯ. ಅದರಲ್ಲೂ, ಪುರುಷರ ಲೈಂಗಿಕ ಆರೋಗ್ಯ ಯಾವತ್ತೂ, ನಿರ್ಲಕ್ಷ್ಯ ಮಾಡುವಂತಹ ವಿಷಯ. ಇದರಿಂದ, ಲೈಂಗಿಕಾಸಕ್ತಿ ಕಡಿಮೆಯಾಗಿ ಅಥವಾ ಲೈಂಗಿಕ ದೌರ್ಬಲ್ಯ ಉಂಟಾಗಿ ಪುರುಷರಲ್ಲಿ ಬಂಜೆತನ ಸಮಸ್ಯೆಗಳು ಕಂಡುಬರುತ್ತವೆ.
ಇದಕ್ಕೆ ಯಾವುದೋ ಔಷಧಿಗಳನ್ನು ತೆಗೆದುಕೊಳ್ಳುವ ಬದಲು, ನಾವಿಂದು ಹೇಳಿರುವ ಈ ಒಂದು ಪದಾರ್ಥವನ್ನು ಸೇವಿಸಿ. ಇದು ಪುರುಷರ ಲೈಂಗಿಕ ಶಕ್ತಿಯನ್ನು ವೃದ್ಧಿಸುತ್ತದೆ. ಅದರಲ್ಲೂ ವಿವಾಹಿತ ಪುರುಷರು ಈ ಪದಾರ್ಥವನ್ನು ಪ್ರತಿದಿನ ಸೇವಿಸುವುದರಿಂದ, ನಿಮ್ಮ ಲೈಂಗಿಕ ಆರೋಗ್ಯ ಉತ್ತಮವಾಗುತ್ತದೆ. ಆ ಪದಾರ್ಥವೇ ಒಣ ಹಣ್ಣುಗಳ ರಾಜ ಎಂದು ಕರೆಯಲ್ಪಡುವ ವಾಲ್ನಟ್. ಇದು ಮೆದುಳಿಗೆ ಮಾತ್ರವಲ್ಲದೆ ಒಟ್ಟಾರೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.

ಪುರುಷರ ಲೈಂಗಿಕಾಸಕ್ತಿ ಹೆಚ್ಚಿಸಲು ವಾಲ್ನಟ್ ಹೇಗೆ ಸಹಕಾರಿ ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ವಾಲ್‌ನಟ್ಸ್‌ನಲ್ಲಿ ಕಂಡುಬರುವ ಪೋಷಕಾಂಶಗಳು ಹೀಗಿವೆ:
ವಾಲ್ನಟ್ಸ್ ಆರೋಗ್ಯಕರ ಕೊಬ್ಬುಗಳು, ಫೈಬರ್, ವಿಟಮಿನ್‌ಗಳು ಮತ್ತು ಖನಿಜಗಳನ್ನು ಒಳಗೊಂಡಿರುತ್ತವೆ, ಇದು ಮೆದುಳಿನ ಆರೋಗ್ಯ ಮತ್ತು ನೆನಪಿನ ಶಕ್ತಿಗೆ ಪ್ರಯೋಜನಕಾರಿಯಾಗಿರುವುದಲ್ಲದೇ, ನಿಮ್ಮ ಒಟ್ಟಾರೆ ಆರೋಗ್ಯಕ್ಕೆ ಉತ್ತಮವೆಂದು ಪರಿಗಣಿಸಲಾಗಿದೆ. ಇದು ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ತಾಮ್ರ, ಸೆಲೆನಿಯಮ್, ಒಮೆಗಾ -3 ಕೊಬ್ಬಿನಾಮ್ಲಗಳಂತಹ ಅನೇಕ ಪೋಷಕಾಂಶಗಳನ್ನು ಸಹ ಒಳಗೊಂಡಿದೆ.

ವಾಲ್ನಟ್ ಸೇವಿಸಲು ಸರಿಯಾದ ಮಾರ್ಗ:
ವಾಲ್ನಟ್ ತುಂಬಾ ಪ್ರಯೋಜನಕಾರಿಯಾಗಿದ್ದರೂ, ಅದನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಮರುದಿನ ತಿಂದರೆ, ಅದರ ಗುಣಗಳು ಮತ್ತಷ್ಟು ಹೆಚ್ಚಾಗುತ್ತವೆ. ರಾತ್ರಿ ಮಲಗುವ ಮುನ್ನ 2 ವಾಲ್್ನಟ್ಸ್ ಅನ್ನು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಎದ್ದು, ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಹೀಗೆ ಮಾಡುವುದರಿಂದ, ಅದರ ಹೆಚ್ಚಿನ ಮಟ್ಟದ ಪೋಷಕಾಂಶಗಳು ದೇಹಕ್ಕೆ ಲಭ್ಯವಾಗುತ್ತವೆ.

ವಾಲ್ನಟ್ ಪುರುಷರಿಗೆ ಹೇಗೆ ಪ್ರಯೋಜನಕಾರಿ?:
ಅಧ್ಯಯನದ ಪ್ರಕಾರ, ವಾಲ್ನಟ್ಸ್ ಪುರುಷರ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ವಾಲ್ನೆಟ್ ನಲ್ಲಿ ಸೆಕ್ಸ್ ಹಾರ್ಮೋನ್ ಉತ್ಪಾದನೆಗೆ ಅಗತ್ಯವಾದ ಮೆಲಟೋನಿನ್ ಅಂಶವಿದ್ದು, ಲೈಂಗಿಕ ಆಸಕ್ತಿ ಹೆಚ್ಚಾಗಲು ಸಹಕರಿಸುತ್ತದೆ. ಜೊತೆಗೆ ಮುಖ್ಯವಾಗಿ ವೀರ್ಯದ ಗುಣಮಟ್ಟವನ್ನು ಸುಧಾರಿಸುತ್ತದೆ. ವಾಲ್ನಟ್‌ನ್ನು ಆಹಾರದಲ್ಲಿ ಸೇರಿಸುವುದರಿಂದ ವೀರ್ಯಾಣುವಿನ ವಯಸ್ಸು, ವೀರ್ಯಾಣುಗಳ ಸಂಖ್ಯೆ, ವೀರ್ಯದಲ್ಲಿನ ಚಲನಶೀಲತೆ ಸುಧಾರಿಸುತ್ತದೆ, ಜತೆಗೆ ಲೈಂಗಿಕ ಶಕ್ತಿಯ ದೌರ್ಬಲ್ಯವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಈ ಮೂಲಕ ವಾಲ್ನಟ್ ಸೇವನೆಯು ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಪ್ರಯೋಜನಕಾರಿಯಾಗಿದೆ.

ನೆನೆಸಿದ ವಾಲ್ನಟ್ಸ್ ಸೇವನೆಯಿಂದ ಸಿಗುವ ಇತರ ಪ್ರಯೋಜನಗಳು:
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದು
ದೇಹದಿಂದ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡುವುದು
ಜೀರ್ಣಾಂಗ ವ್ಯವಸ್ಥೆಯನ್ನು ಸದೃಢಗೊಳಿಸುವುದು
ನಿದ್ರೆಯನ್ನು ಸುಧಾರಿಸುವುದು
ತೂಕ ನಿಯಂತ್ರಣದಲ್ಲಿಡಲು ಸಹಕಾರಿ
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು
ಮಲಬದ್ಧತೆ ಸಮಸ್ಯೆಗೆ ಪರಿಹಾರ ನೀಡುವುದು
ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ
ಇದರಲ್ಲಿರುವ ಆಲ್ಫಾ-ಲಿನೋಲೆನಿಕ್ ಆಮ್ಲವು ಮೂಳೆಗಳನ್ನು ಬಲಪಡಿಸುವುದು



Click it and Unblock the Notifications
