Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ಹೆಚ್ಚುತ್ತಿದೆ ಯುವಕರ ಹಠಾತ್ ಸಾವು, ಕಾರಣವೇನು? ಪತ್ತೆಗೆ ಮುಂದಾದ ರಾಜ್ಯ ಸರ್ಕಾರ
ಈ ಕೊರೊನಾ ಬಳಿಕ ಪರಿಸ್ಥಿತಿ ತುಂಬಾನೇ ಬದಲಾಗಿದೆ, ಅದಕ್ಕೂ ಮೊದಲು ಕೂಡ ಹೃದಯಾಘಾತದ ಸಮಸ್ಯೆವಿತ್ತು, ಆದರೆ ಯುವಕರಲ್ಲಿ, ಚಿಕ್ಕ ಮಕ್ಕಳಲ್ಲಿ ಕಂಡು ಬಂದಿರಲಿಲ್ಲ, ಆದರೆ ಈಗ ಆಗಲ್ಲ ಚಿಕ್ಕ ಪ್ರಾಯದವರಲ್ಲಿ, ನೋಡಲು ಗಟ್ಟಿಮುಟ್ಟಾಗಿ ಆರೋಗ್ಯವಾಗಿ ಇದ್ದವರು ಹಠಾತ್ ಆಗಿ ಹೃದಯಾಘಾತದಿಂದ ಸಾವನ್ನಪ್ಪಿದರು ಎಂದು ಕೇಳಿದಾಗ ಖಂಡಿತ ಅಚ್ಚರಿ ಉಂಟಾಗುವುದು. ಸರ್ಕಾರ ಇದನ್ನು ಗಂಭೀರ ಸಮಸ್ಯೆಯಾಗಿ ಪರಿಗಣಿಸಿದೆ, ಈ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಬೇಕೆಂದು ತೀರ್ಮಾನಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸಾಮಾಜಿಕ ತಾಣದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.

ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ.
ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು.
ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು.
ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ.
- ಮುಖ್ಯಮಂತ್ರಿ Siddaramaiah
ಈ ಕುರಿತು ನಡೆಸಿದ ಅಧ್‌ಯಯನ ವರದಿ ಏನು ಹೇಳಿದೆ
ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ ಕೋವಿಡ್ 19ನಿಂದ ಚೇತರಿಸಿಕೊಂಡವರಲ್ಲಿ ಹೃದಯಾಘಾತದ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೇಳಿದೆ, ಅದರಲ್ಲಿಯೂ ಕೋವಿಡ್ 19 ಗಂಭೀರ ಪರಿಣಾಮ ಬೀರಿದ್ದು ನಂತರ ಚೇತರಿಸಿಕೊಂಡಿದ್ದರೆ ಅವರಲ್ಲಿ ಈ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೇಳಿದೆ.
ಹಾಗಾಗಿ ಕೋವಿಡ್ 19 ಬಾಧಿಸಿದ್ದ ರೋಗಿಗಳು ಹೃದಯದ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕೆಂದು ಹೇಳಿದೆ. ಕೋವಿಡ್ 19 ಬಾಧಿಸಿದವರಲ್ಲಿ ಉರಿಯೂತದ ಸಮಸ್ಯೆ ಕಂಡು ಬರುತ್ತಿದೆ ಎಂದ ಹೇಳಿದೆ. ಈ ವರದಿ ಜಗತ್ತಿನಲ್ಲಿ ಒಂದು ಬಗೆಯ ಆತಂಕ ಉಂಟು ಮಾಡಿದೆ, ಕಾರಣ ಸುಮಾರು 800 ಮಿಲಿಯನ್ ಜನರಿಗೆ ಕೋವಿಡ್ ಬಾಧಿಸಿತ್ತು.
ಕೋವಿಡ್ ಲಸಿಕೆಯಿಂದ ಹೃದಯಾಘಾತದ ಸಮಸ್ಯೆ ಹೆಚ್ಚಾಗುತ್ತಿದೆಯೇ?
ಈ ಬಗೆಯ ವಾದ ಕೂಡ ಇದೆ, ಕೋವಿಡ್ ಹೃದಯಾಘಾತದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಕೆಲವರು ವಾದಿಸುತ್ತಿದ್ದಾರೆ. ಆದರೆ ಇದುವರೆಗಿನ ಯಾವುದೇ ಅಧ್ಯಯನಗಳು ಕೋವಿಡ್ ಲಸಿಕೆಯಿಂದಾಗಿ ಹೃದಯಾಘಾತದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿಲ್ಲ, ಬದಲಿಗೆ ಕೋವಿಡ್ 19 ಬಾಧಿಸಿ ಶ್ವಾಸಕೋಶಕ್ಕೆ ತೊಂದರೆಯಾಗಿದ್ದವರಿಗೆ, ಗಂಭೀರ ಆರೋಗ್ಯ ಸಮಸ್ಯೆ ಎದುರಿಸಿದವರಿಗೆ ಈ ಹೃದಯಾಘಾತದ ಅಪಾಯ ಹೆಚ್ಚಿದೆ ಎಂದು ಹೇಳಿದೆ.
ಸೌತ್ ಕೊರಿಯಾದಲ್ಲಿ ನಡೆಸಿದ ಅಧ್ಯಯನವೂ ಕೊರೊನಾ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂಬುವುದಾಗಿ ಹೇಳಿದೆ, ಭಾರತದಲ್ಲಿಯೂ ಈ ಬಗ್ಗೆ ಅಧ್ಯಯನಗಳು ನಡೆಯುತ್ತಿವೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
