Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರಾಜ್ಯದಲ್ಲಿ 24 ಗಂಟೆಯಲ್ಲಿ 114 ಮಂದಿಗೆ ಕೋವಿಡ್! ಶಾಲೆಗಳಿಗೆ ಹೊಸ ಮಾರ್ಗಸೂಚಿ!
ದೇಶದಲ್ಲಿ ಮತ್ತೆ ಕೋವಿಡ್ ಆತಂಕ ಹೆಚ್ಚಾಗುತ್ತಿದೆ. ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 2,700ಕ್ಕೆ ಏರಿಕೆಯಾಗಿದೆ. ಈವರೆಗೆ 22 ಕೋವಿಡ್ ಸಂಬಂಧಿ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ದೆಹಲಿಯಲ್ಲಿ 375 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಆದ್ರೆ ಕೇರಳದಲ್ಲಿ 1,147 ಸಕ್ರಿಯ ಪ್ರಕಣಗಳಿದ್ದ ದೇಶದಲ್ಲೇ ಅತ್ಯಧಿಕ ಕೇಸ್ ಹೊಂದಿದೆ.
ಮಹಾರಾಷ್ಟ್ರದಲ್ಲಿ 424 ಪ್ರಕರಣಗಳಿವೆ. ಹಾಗೆ ಕಳೆದ 24 ಗಂಟೆಯಲ್ಲಿ 255 ರೋಗಿಗಳು ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕರ್ನಾಟಕದಲ್ಲೂ ಹೊಸ ಕೋವಿಡ್ ಕೇಸ್‌ಗಳು ದಾಖಲಾಗಿವೆ. ಒಟ್ಟು 234 ಸಕ್ರಿಯ ಕೋವಿಡ್ ಪ್ರಕರಣಗಳು ಹಾಗೆ ಇನ್ನೆರಡು ಸಾವು ರಾಜ್ಯದಲ್ಲಿ ವರದಿಯಾಗಿದೆ. ಈ ನಡುವೆ ಪ್ರಾಥಮಿಕ ಶಾಲೆಗಳು ಆರಂಭಗೊಂಡಿದ್ದು, ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಬರೋಬ್ಬರಿ 114 ಮಂದಿಗೆ ಕೋವಿಡ್ ದೃಢವಾಗಿದೆ. ಹಾಗೆ ಸಾವಿನ ಸಂಖ್ಯೆ ಈ ಮೂರಕ್ಕೆ ಏರಿಕೆಯಾದಂತಾಗಿದೆ. ರಾಜ್ಯದಲ್ಲಿ ಒಟ್ಟು 460 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು ಈ ಪೈಕಿ 114 ಜನರಿಗೆ ಸೋಂಕು ದೃಢವಾಗಿದೆ. ಒಟ್ಟು 234 ಸಕ್ರಿಯ ಪ್ರಕರಣದಲ್ಲಿ 223 ಮಂದಿ ಮನೆಯಲ್ಲೇ ಚಿಕಿತ್ಸೆಗೆ ಒಳಗಾಗಿದ್ದಾರೆ ಉಳಿದವರು ಆಸ್ಪತ್ರೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಸಮಯದಲ್ಲಿಯೇ ಶಾಳೆಗಳು ಆರಂಭಗೊಂಡಿರುವ ಹಿನ್ನೆಲೆ ಪೋಷಕರು ಹಾಗೂ ಶಾಲೆಗಳಲ್ಲಿ ಅನುಸರಿಸಬೇಕಾದ ಕೆಲವು ನಿಯಮಗಳನ್ನು ಸೂಚಿಸಲಾಗಿದೆ. ಇದರಿಂದ ಮಕ್ಕಳ ಆರೋಗ್ಯ ಕುರಿತಾಗಿ ಎಚ್ಚರಿಕೆ ಇಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಹಾಗೆ ಶಾಲೆಯಲ್ಲೂ ಮುಂಗಾಗೃತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಿಬ್ವಂದಿ ಕೂಡ ಕೋವಿಡ್ ಕುರಿತಾಗಿ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
- ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳು ಕಂಡು ಬಂದಲ್ಲಿ, ಮಕ್ಕಳನ್ನು ಶಾಲೆಗೆ ಕಳುಹಿಸದೆ ವೈದ್ಯರ ಸಲಹೆಯಂತೆ, ಸೂಕ್ತ ಚಿಕಿತ್ಸೆ ಹಾಗೂ ಆರ್ರೈಕಾ ಕ್ರಮಗಳನ್ನು ಪಾಲಿಸುವುದು.
- ಸದರಿ ಲಕ್ಷಣಗಳು ಸಂಪೂರ್ಣವಾಗಿ ಗುಣಮುಖವಾದ ನಂತರವೇ ಮಕ್ಕಳನ್ನು ಶಾಲೆಗೆ ಕಳುಹಿಸುವುದು.
- ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದಲ್ಲಿ, ಪೋಷಕರಿಗೆ ಮಾಹಿತಿಯನ್ನು ನೀಡಿ ಅಂತಹ ಮಕ್ಕಳನ್ನು ಮನೆಗೆ ಕಳುಹಿಸುವುದು.
- ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳು ಕಂಡು ಬಂದಲ್ಲಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸುವುದು.
- ಮಂಜಾಗ್ರತಾ ಕ್ರಮಗಳಾದ ಕೈಗಳ ಸ್ವಚ್ಛತೆ, Cough Etiquette ಇತ್ಯಾದಿ Covid 19 Appropriate Behaviour ( CAB) ನ ಪಾಲನೆ ಖಚಿತಪಡಿಸಿಕೊಳ್ಳುವುದು.
- ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ 19 ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.
ಕೋವಿಡ್ ಕುರಿತು ಭಯ ಬೇಡ
ಕೋವಿಡ್ ಹರಡುತ್ತಿರುವ ಈ ಸಮಯದಲ್ಲಿ ಭಯ ಬೇಡ ಎಂದು ಐಸಿಎಂಆರ್ ಸೂಚಿಸಿದೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು ಹಾಗೂ ದೀರ್ಘಕಾಲದ ಕಾಯಿಲೆ ಇರುವವರು ಮಾಸ್ಕ್ ಧರಿಸುವುದು ಸೇರಿದಂತೆ ಸೋಂಕು ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಲಾಗಿದೆ.
ಜನಸಂದಣಿ ಇರುವ ಕಡೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಇದಲ್ಲದೇ ಪರಸ್ಪರ ಅಂತರ ಕಾಯ್ದುಕೊಳ್ಳುವುದು, ಕೈಗಳನ್ನು ಸಾಬೂನು ಬಳಸಿ ತೊಳೆಯುವುದು. ಶೀತ, ಜ್ವರದಂತಹ ಸಮಸ್ಯೆ ಇದ್ದರೆ ಆಸ್ಪತ್ರೆಗೆ ತೆರಳುವುದು ಕೂಡ ಕೋವಿಡ್‌ನಿಂದ ಪಾರಾಗಲು ಮಾರ್ಗವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications