Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಹಾಸನದಲ್ಲಿ ಮೂವರು ಸೇರಿ 6 ಮಂದಿ ಹೃದಯಾಘಾತಕ್ಕೆ ಬಲಿ: ತಜ್ಞರು ಹೇಳೋದೇನು?
ಯುವ ಜನತೆ ಹೃದಯಾಘಾತದಂತಹ ಸಮಸ್ಯೆಗೆ ತುತ್ತಾಗುತ್ತಿರುವ ನಡುವೆ ಈಗ ಹಾಸನದಲ್ಲಿ ಒಂದರ ಹಿಂದೆ ಒಂದರಂತೆ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕ ಹೆಚ್ಚುವಂತೆ ಮಾಡಿದೆ. ರಾಜ್ಯದಲ್ಲಿ ವರದಿಯಾಗುತ್ತಿರುವ ಹೃದಯಾಘಾತ ಪ್ರಕರಣಗಳಲ್ಲಿ ಹಾಸನ ಜಿಲ್ಲೆಯಲ್ಲೇ ಅತ್ಯಧಿಕ ಪ್ರಕರಣ ವರದಿಯಾಗುತ್ತಿದೆ. ಇದು ಆತಂಕಕ್ಕೆ ಕಾರಣವಾಗಿದೆ.
ಇನ್ನು ಯುವ ಜನತೆಯಲ್ಲಿ ಏಕಾಏಕಿ ಈ ಸಮಸ್ಯೆ ಕಂಡುಬರುತ್ತಿದ್ದು, ಆರೋಗ್ಯವಾಗಿದ್ದವರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಕಳೆದ 40 ದಿನಗಳಲ್ಲಿ 26 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ಅಂಕಿ ಅಂಶಗಳು ಈಗ ಆತಂಕ ಹುಟ್ಟಿಸಲು ಕಾರಣವಾಗಿದೆ. ಅದ್ರಲ್ಲೂ ಕಳೆದ ಸೋಮವಾರ ಒಂದೇ ದಿನ ನಾಲ್ವರು ಹೃದಯಾಘಾತಕ್ಕೆ ಬಲಿಯಾಗಿರುವುದು ಮತ್ತಷ್ಟು ಆತಂಕ ಹುಟ್ಟಿಸಿದೆ.

ಸೋಮವಾರ ಒಂದೇ ದಿನ ಹಾಸನದ ಬೇಲೂರಿನಲ್ಲಿ ಗೃಹಿಣಿ ಲೇಪಾಕ್ಷಿ (50), ಹೊಳೆನರಸೀಪುರದ ಪ್ರಾಧ್ಯಾಪಕ ಮುತ್ತಯ್ಯ (58), ಆಟೊರಿಕ್ಷಾ ಚಾಲಕ ಸೂರ್ಯನಾರಾಯಣರಾವ್ (63) ಹಾಗೂ ನುಗ್ಗೇಹಳ್ಳಿ ನಾಡ ಕಚೇರಿ ಸಿಬ್ಬಂದಿ ಕುಮಾರ್ (57) ಮೃತಪಟ್ಟಿದ್ದಾರೆ. ಈ ಘಟನೆಗಳು ಜಿಲ್ಲೆಯಾದ್ಯಂತ ಭಯಕ್ಕೆ ಕಾರಣವಾಗಿವೆ. ಇದರಲ್ಲಿ ಬೇರೆ ಜಿಲ್ಲೆಯಲ್ಲಿ ನೆಲೆಸಿದ್ದ ಹಾಸನದ ಐವರು ಹೃದಯಾಘಾತಕ್ಕೆ ಒಲಿಯಾಗಿದ್ದಾರೆ.
ಈ ಹೃದಯಾಘಾತಕ್ಕಿದ್ಯಾ ಕೋವಿಡ್ ನಂಟು?
ಕೋವಿಡ್ ಲಸಿಕೆಯ ಬಳಿಕ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿವೆ ಎಂಬ ಆರೋಪಗಳು ಕೂಡ ಇವೆ. ಈ ಕುರಿತಾಗಿ ಟ್ವೀಟ್ (ಎಕ್ಸ್) ಮಾಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಎಳೆಯ ವಯಸ್ಸಿನವರ ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ ಎಂದು ಸಿಎಂ ಹೇಳಿದ್ದಾರೆ.
ವೈದ್ಯರು, ತಜ್ಞರು ಹೇಳೋದೇನು?
ಹಾಸನ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತಾಗಿ ಹಾಸನ ಜಿಲ್ಲಾ ಡಿಹೆಚ್‌ಒ ಡಾ. ಅನಿಲ್ ಹೆಚ್ ಮಾತಾಡಿದ್ದಾರೆ. ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಡಾ.ಚೇತನ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಕೋವಿಡ್-19 ಲಸಿಕೆಯ ಅಡ್ಡಪರಿಣಾಮ ಎಂಬ ಆತಂಕ ಬೇಡ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಬದಲಾಗುತ್ತಿರುವ ಜೀವನಶೈಲಿ, ವ್ಯಾಯಾಮದ ಕೊರತೆ, ನಿಯಮಿತ ಆರೋಗ್ಯ ತಪಾಸಣೆ ಇಲ್ಲದಿರುವುದು ಹೃದಯಾಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ.
ಹೃದಯಾಘಾತಕ್ಕೆ ಕಾರಣ ತಿಳಿಯಲು ತಜ್ಞರ ಸಮಿತಿ
ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು ವರದಿಯಾಗುತ್ತಿದ್ದಂತೆಯೇ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ಈ ಹೃದಯಾಘಾತಗಳಿಗೆ ಕಾರಣ ಹುಡುಕಲು ತಜ್ಞರ ಸಮಿತಿ ರಚಿಸಿದೆ. ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈಗಾಗಲೇ ಕೋವಿಡ್ ಅಡ್ಡ ಪರಿಣಾಮದಿಂದ ಆಗಿರುವ ಸಾವುಗಳು, ಹೃದಯಾಘಾತಗಳ ಕುರಿತಂತೆ ಸಂಶೋಧನೆ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಗಿತ್ತು. ಇದೀಗ ಹಾಸನ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ಇದೇ ಸಮಿತಿಗೆ ಜವಾಬ್ದಾರಿ ವಹಿಸಲಾಗಿದೆ. ಈ ಸಮಿತಿ ಮುಂದಿನ 10 ದಿನಗಳಲ್ಲಿ ವರದಿ ಸಲ್ಲಿಸಲಿದೆ.
ಇನ್ನು ರಾಜ್ಯದಾದ್ಯಂತ ನಿನ್ನೆ ಒಂದೇ ದಿನದಲ್ಲಿ 6 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅದರಲ್ಲೂ ಹಾಸನದಲ್ಲಿ ಮೂವರು, ಶಿವಮೊಗ್ಗದಲ್ಲಿ ಓರ್ವ, ಚಿಕ್ಕಮಗಳೂರು ಹಾಗೂ ತುಮಕೂರಿನಲ್ಲಿ ಇಬ್ಬರು ಮೃತೊಟ್ಟಿದ್ದಾರೆ. ಈ ಸಂಖ್ಯೆ ಏರಿಕೆಯಾಗುತ್ತಿರುವುದು ಮತ್ತಷ್ಟು ಆತಂಕ ಹೆಚ್ಚಾಗಲು ಕಾರಣವಾಗುತ್ತಿದೆ. ಸದ್ಯ ಹೃದಯಾಘಾತಕ್ಕೆ ನಿಖರ ಕಾರಣ ಏನಿರಬಹುದು ಎಂಬುದನ್ನು ಪತ್ತೆ ಮಾಡಲು ನೇಮಿಸಿರುವ ಸಮಿತಿ 10 ದಿನದಲ್ಲಿ ವರದಿ ನೀಡಲಿದ್ದು, ಈ ಘಟನೆಗಳಿಗೆ ಕಾರಣ ತಿಳಿದುಬರಲಿದೆ.



Click it and Unblock the Notifications
