Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
Menstrual Hygiene : ಮುಟ್ಟಿನ ಸಮಯದಲ್ಲಿ ನೈರ್ಮಲ್ಯ ಕಾಪಾಡದಿದ್ದರೆ ಏನೆಲ್ಲಾ ಅಪಾಯಗಳಾಗಲಿದೆ ಗೊತ್ತಾ?
ಋತುಚಕ್ರವು ಮಹಿಳೆಯ ಜೀವನದ ಒಂದು ಮುಖ್ಯ ಭಾಗಗಳಲ್ಲಿ ಒಂದಾಗಿದೆ. ಋತುಚಕ್ರದ ಸಮಯದಲ್ಲಿ ಮಹಿಳೆ ಅನುಭವಿಸುವ ನೋವು ಅಷ್ಟಿಷ್ಟಲ್ಲ. ಇದ್ರ ಜೊತೆಗೆ ಆಕೆ ತನ್ನ ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಕೂಡ ತುಂಬಾನೇ ಮುಖ್ಯವಾಗುತ್ತದೆ. ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಸೋಂಕಿನ ಅಪಾಯವನ್ನು ಕಡಿಮೆ ಮಾಡಬಹುದು. ಅಷ್ಟೇ ಅಲ್ಲದೇ ಈ ಸಮಯದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳದೇ ಹೋದರೆ ಇದರಿಂದ ಅಪಾಯ ಎದುರಾಗುವ ಸಾಧ್ಯತೆಗಳಿದೆ.
ಮೇ 28 ರಂದು ಜಗತ್ತಿನಾದ್ಯಂತ ಮುಟ್ಟಿನ ನೈರ್ಮಲ್ಯ ದಿನವನ್ನು ಆಚರಿಸಲಾಗುತ್ತಿದೆ. ಇದರ ಉದ್ದೇಶ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಆಚರಿಸಲಾಗುತ್ತದೆ. ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ಎಷ್ಟು ಮುಖ್ಯ ಎಂದರೆ ನೈರ್ಮಲ್ಯ ಕಾಪಾಡದೇ ಹೋದರೆ, ಇದರಿಂದ ಸಾವು ಸಂಭವಿಸುವ ಸಾಧ್ಯತೆಯು ಕೂಡ ಹೆಚ್ಚಾಗಿದೆ. ಹೀಗಾಗಿ ಮಹಿಳೆಯರು ಈ ಬಗ್ಗೆ ಜಾಗೃತೆ ವಹಿಸಬೇಕು. ಅಷ್ಟಕ್ಕು ಮಟ್ಟಿನ ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸದೇ ಹೋದರೆ ಏನೆಲ್ಲಾ ಅಪಾಯಗಳಾಗಲಿದೆ ಅನ್ನೋದನ್ನು ತಿಳಿಯೋಣ.

1. ಸಂತಾನೋತ್ಪತ್ತಿ ಪ್ರದೇಶದಲ್ಲಿ ಸೋಂಕು ಉಂಟಾಗುತ್ತದೆ
ಮುಟ್ಟಿನ ಸಮಯದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳೋದು ತುಂಬಾನೇ ಮುಖ್ಯವಾಗಿದೆ. ಇಲ್ಲದಿದ್ದರೆ ಇದರಿಂದ ಸೋಂಕು ಹರಡುವ ಅಪಾಯ ಹೆಚ್ಚಾಗಿದೆ. ಅದು ಕೂಡ ಸಂತಾನೋತ್ಪತ್ತಿ ಪ್ರದೇಶದಲ್ಲಿ ಉಂಟಾಗುತ್ತದೆ. ಅದನ್ನು ಬಿಟ್ಟರೆ ಇನ್ನೂ ಮೂರು ವಿಧದಲ್ಲಿ ಸೋಂಕು ಹರಡುತ್ತದೆ. ಅವುಗಳೆಂದರೆ 1) ಲೈಂಗಿಕ ಸಂಪರ್ಕದಿಂದ, 2) ಬ್ಯಾಕ್ಟೀರಿಯಾದ ಯೋನಿನೋಸಿಸ್ ಅಥವಾ ವಲ್ವೋವಾಜಿನಲ್ ಕ್ಯಾಂಡಿಡಿಯಾಸಿಸ್, ಮತ್ತು 3) ಅಸುರಕ್ಷಿತ ಗರ್ಭಪಾತ. ಇದರಿಂದಲೂ ಕೂಡ ಸೋಂಕು ಹರಡುವ ಅಪಾಯಗಳಿದೆ.
2. ಬ್ಯಾಕ್ಟೀರಿಯಾದ ಯೋನಿನೋಸಿಸ್
ಹೆರಿಗೆಯ ಸಮಯದಲ್ಲಿ ಮಹಿಳೆಯರು ಬ್ಯಾಕ್ಟೀರಿಯಾದ ಯೋನಿನೋಸಿಸ್ ನ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಅಸುರಕ್ಷಿತ ಲೈಂಗಿಕ ಚಟುವಟಿಕೆಗಳಿಂದ ನಿಮ್ಮಲ್ಲಿ ಈ ಅಪಾಯ ಹೆಚ್ಚಾಗುವ ಸಾಧ್ಯತೆಯಿದೆ. ಕೆಲವೊಂದು ಸಲ ಮಹಿಳೆಯರಲ್ಲಿ ಬ್ಯಾಕ್ಟೀರಿಯಾದ ಯೋನಿನೋಸಿಸ್ ನ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕೂಡ ಕಾಣಿಸಿಕೊಳ್ಳುತ್ತದೆ. ಇನ್ನೂ ಬ್ಯಾಕ್ಟೀರಿಯಾದ ಯೋನಿನೋಸಿಸ್ ನ ಲಕ್ಷಣಗಳು ಯಾವುದು ಅಂತ ನೋಡೋದಾದ್ರೆ ಅಸಹಜ ಯೋನಿ ಡಿಸ್ಚಾರ್ಜ್, ಉರಿಯುವಿಕೆ ಮತ್ತು ವಾಸನೆ ಹೆಚ್ಚಾಗುತ್ತದೆ.
3. ಮೂತ್ರನಾಳದ ಸೋಂಕು
ಇದು ಮೂತ್ರನಾಳದ ಯಾವುದೇ ಭಾಗವನ್ನು ಬಾಧಿಸುವ ಕಾಯಿಲೆಯಾಗಿದೆ. ಪುರುಷರಿಗಿಂತ ಮಹಿಳೆಯರು ಮೂತ್ರನಾಳದ ಸೋಂಕಿನಿಂದ ಹೆಚ್ಚು ಒಳಗಾಗುತ್ತಾರೆ. ಮೂತ್ರನಾಳದ ಸೋಂಕು ಉಂಟಾದರೆ ಅತಿಯಾದ ನೋವು ಅನುಭವಿಸಬೇಕಾಗುತ್ತದೆ. ಮೂತ್ರ ನಾಳದ ಸೋಂಕು ನಿಮ್ಮ ಮೂತ್ರಪಿಂಡಗಳಿಗೆ ಹರಡಿದರೆ ಇದರಿಂದ ಅತ್ಯಂತ ನಕಾರಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಈ ವಿಚಾರಗಳು ಗೊತ್ತಿರಲಿ
* ಮಹಿಳೆಯರೇ ಋತುಚಕ್ರದ ಸಮಯದಲ್ಲಿ ಮುಟ್ಟಿನ ಕಪ್, ಸಾವಯಾವ ಹತ್ತಿಯಿಂದ ಮಾಡಿದ ಸ್ಯಾನಿಟರಿ ಪ್ಯಾಡ್ ಗಳನ್ನು ಬಳಕೆ ಮಾಡಿ
* ಯಾವುದೇ ಪ್ಯಾಡ್ ಅನ್ನು 6 ಕ್ಕಿಂತ ಹೆಚ್ಚು ಗಂಟೆಗಳ ಕಾಲ ಬಳಸಬಾರದು
* ದೀರ್ಘಕಾಲದವರೆಗೆ ಪ್ಯಾಡ್ ಧರಿಸಿದರೆ ಕಿರಿಕಿರಿ, ದದ್ದು, ಕೆಟ್ಟ ವಾಸನೆಯನ್ನು ಉಂಟುಮಾಡಬಹುದು
* ಸೋಂಕನ್ನು ತಪ್ಪಿಸಲು ಸ್ವಚ್ಛವಾದ ಪ್ಯಾಡ್ ಅಥವಾ ಬಿಸಿಲಿನಲ್ಲಿ ಒಣಗಿದ ಬಟ್ಟೆಯನ್ನು ಬಳಸಿ
ಮುಟ್ಟಿನ ದಿನಗಳಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ತುಂಬಾನೇ ಮುಖ್ಯವಾಗಿದೆ. ಕೊಂಚ ಏರು ಪೇರಾದರೂ ಪ್ರಾಣಕ್ಕೆ ಕುತ್ತು ತರಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
