Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್‌ನಿಂದ ನಿಧನ, ಈ ಕ್ಯಾನ್ಸರ್ ಲಕ್ಷಣಗಳೇನು?
ಪೂನಂ ಪಾಂಡೆ ಶುಕ್ರವಾರ 2ರಂದು ನಿಧನರಾಗಿದ್ದಾರೆ ಎಂದು ಅವರ ಇನ್‌ಸ್ಟಾ ಖಾತೆಯಲ್ಲಿ ಕುಟುಂಬಸ್ಥರು ತಿಳಿಸಿದ್ದಾರೆ. ಗರ್ಭಕಂಠದ ಕ್ಯಾನ್ಸರ್‌ಗೆ ಈ ನಟಿ ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಪೂನಂ ಪಾಂಡೆಗೆ 32 ವರ್ಷ, ಇಷ್ಟು ಚಿಕ್ಕ ಪ್ರಾಯದಲ್ಲಿಯೇ ಸಾವನ್ನಪ್ಪಿರುವುದು ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ.

ಇಂದು ಬೆಳಗ್ಗೆ ನಮಗೆ ತುಂಬಾನೇ ಕಷ್ಟಕರವಾಗಿತ್ತು. ಗರ್ಭಕಂಠದ ಕ್ಯಾನ್ಸರ್‌ನಿಂದ ನಮ್ಮ ಪ್ರೀತಿಯ ಪೂನಂ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ, ಈ ದುಃಖದ ಸಮಯದಲ್ಲಿ ನಮಗೆ ಪ್ರೈವೆಸಿ ನೀಡಿ ಎಂದು ಅದರಲ್ಲಿ ಬರೆಯಲಾಗಿದೆ.
ಗರ್ಭಕಂಠದ ಕ್ಯಾನ್ಸರ್
ಭಾರತೀಯ ಮಹಿಳೆಯರನ್ನು ಕಾಡುತ್ತಿರುವ ಕ್ಯಾನ್ಸರ್‌ನಲ್ಲಿ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾಯುವವರ ಸಂಖ್ಯೆ 2ನೇ ಸ್ಥಾನದಲ್ಲಿದೆ. ಗರ್ಭಕಂಠದ ಕ್ಯಾನ್ಸರ್ ಮಹಿಳೆಯರನ್ನು ಕಾಡುವ ಅತ್ಯಂತ ಮಾರಕ ಕ್ಯಾನ್ಸರ್ ಆಗಿದೆ.
ಗರ್ಭಕಂಠದ ಕ್ಯಾನ್ಸರ್ ಲಕ್ಷಣಗಳು
* ಲೈಂಗಿಕ ಸಂಪರ್ಕ ಮಾಡಿದಾಗ ಜನನೇಂದ್ರೀಯದಲ್ಲಿ ರಕ್ತಸ್ರಾವ.
* ಮುಟ್ಟಿನ ಅವಧಿಯ ಮುನ್ನವೇ ರಕ್ತಸ್ರಾವ
* ಬಿಳುಪು ಹೋಗುವುದು ಹಾಗೂ ದುರ್ವಾಸನೆ ಬೀರುವುದು'
* ಲೈಂಗಿಕ ಸಂಪರ್ಕದ ಸಮಯದಲ್ಲಿ ಕಾಡುವ ನೋವು
ಯಾರಿಗೆ ಗರ್ಭಕಂಠದ ಕ್ಯಾನ್ಸರ್ ಅಪಾಯ ಹೆಚ್ಚು
- ಧೂಮಪಾನ ಮಾಡುವವರಿಗೆ: ಧೂಮಪಾನ ಮಾಡುವುದರಿಂದ ಗರ್ಭಕಂಠದ ಕ್ಯಾನ್ಸರ್ ಸಾಧ್ಯತೆ ಹೆಚ್ಚುವುದು
- ಒಂದಕ್ಕಿಂತ ಹೆಚ್ಚಿನ ವ್ಯಕ್ತಿಯೊಂದಿಗೆ ಲೈಂಗಿಕ ಸಂಪರ್ಕ: ಅಧಿಕ ಪುರುಷರ ಜೊತೆಗೆ ಸಂಬಂಧವಿದ್ದರೂ ಈ ಗರ್ಭಕಂಠದ ಕ್ಯಾನ್ಸರ್ ಅಪಾಯ ಹೆಚ್ಚು.
- ತುಂಬಾ ಚಿಕ್ಕ ಪ್ರಾಯದಲ್ಲಿಯೇ ಲೈಂಗಿಕ ಚಟುವಟಿಕೆ ಮಾಡಿದರೆ: ಚಿಕ್ಕ ಪ್ರಾಯದಲ್ಲಿ ಲೈಂಗಿಕ ಚಟುವಟಿಕೆಯಲ್ಲಿ ಸಕ್ರೀಯವಾಗಿದ್ದರೆ HPV ಬರುವ ಸಾಧ್ಯತೆ ಇದೆ.
- ಲೈಂಗಿಕವಾಗಿ ಹರಡುವ ಸೋಂಕುಗಳಿಂದ: ಲೈಂಗಿಕ ಸೋಂಕಿನಿಂದ ಕೂಡ ಗರ್ಭಕಂಠದ ಕ್ಯಾನ್ಸರ್ ಹೆಚ್ಚಾಗುವುದು. ಹರ್ಪೀಸ್, ಕ್ಲಮೈಡಿಯ, ಗೊನೊರಿಯಾ, ಸಿಫಿಲಿಸ್ ಮತ್ತು ಎಚ್ಐವಿ ಈ ಬಗೆಯ ಸೋಂಕುಗಳಿಂದಲೂ ಬರುವುದು.
- ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು
- ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೆ ಈ ಬಗೆಯ ಸೋಂಕು ಹರಡುವುದು.
ಗರ್ಭಪಾತ ತಡೆಗಟ್ಟಲು ಔಷಧ ತೆಗೆದುಕೊಳ್ಳುತ್ತಿದ್ದರೆ
ನಿಮ್ಮ ತಾಯಿ DES ಎಂಬ ಔಷಧಿ ಗರ್ಭಾವಸ್ಥೆಯಲ್ಲಿ ತೆಗೆದುಕೊಂಡಿದ್ದರೆ ಇದರಿಂದ ಕೂಡ ಗರ್ಭಕಂಠದ ಕ್ಯಾನ್ಸರ್ ಉಂಟಾಗುವ ಸಾಧ್ಯತೆ ಇದೆ.
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಬಗ್ಗೆ ಬಜೆಟ್‌ನಲ್ಲಿಯೂ ಘೋಷಣೆ ಮಾಡಲಾಗಿದೆ:
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ 9-14ರ ಪ್ರಾಯದ ಬಾಲಕಿಯರಿಗೆ ಶಾಲೆಯಲ್ಲಿಯೇ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಈ ಮೂಲಕ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ದೇಶವು ಮಹತ್ವದ ಹೆಜ್ಜೆ ಇಟ್ಟಿದೆ.
ಗರ್ಭಕಂಠಧ ಕ್ಯಾನ್ಸರ್ 9-14ರ ಪ್ರಾಯದ ಹೆಣ್ಮಕ್ಕಳಿಗೆ HPV ಲಸಿಕೆ
ಹೆಚ್ಚಿನ ಗರ್ಭಕಂಠದ ಕ್ಯಾನ್ಸರ್‌ಗಳು ಹ್ಯೂಮನ್ ಪ್ಯಾಪಿಲೋಮಾ ವೈರಸ್‌ಗೆ (ಎಚ್‌ಪಿವಿ) ಸಂಬಂಧಿಸಿವೆ, ಮಹಿಳೆಯರು ವೈರಸ್‌ಗೆ ತೆರೆದುಕೊಳ್ಳುವ ಮೊದಲು ಅಂದರೆ ಬಾಲಕಿಯಾಗಿರುವಾಗಲೇ ಲಸಿಕೆಯನ್ನು ನೀಡಿದರೆ ಎಚ್‌ಪಿವಿ ಲಸಿಕೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸಹಕಾರಿ. ಆದ್ದರಿಂದ 9ರಿಂದ 14 ವರ್ಷದ ಪ್ರಾಯದಲ್ಲಿ ಹೆಣ್ಮಕ್ಕಳಿಗೆ ಈ ಲಸಿಕೆ ಕೊಡಸಬೇಕು, ಹೀಗೆ ಕೊಡಿಸುವುದರಿಂದ ಈ ಭಯಾನಕ ಕ್ಯಾನ್ಸರ್ ತಡೆಗಟ್ಟಬಹುದು.
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸರ್ಕಾರ ಕೈಗೊಂಡಿರುವ ಕ್ರಮಗಳೇನು?
- ಶಾಲೆಗಳಲ್ಲಿ ಎಚ್‌ಪಿವಿ ಲಸಿಕಾ ಕೇಂದ್ರಗಳನ್ನು ತೆರೆದು 9-14ರ ಪ್ರಾಯದ ಹೆಣ್ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗುವುದು, ಈ ಕುರಿತು ಎಲ್ಲಾ ಶಿಕ್ಷಣ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು
- ಪೋಷಕರ ಸಭೆ ಕರೆದು ಎಲ್ಲಾ ಪೋಷಕರಿಗೆ ಶಾಲಾ ಶಿಕ್ಷಕರ ಮೂಲಕ ಜಾಗೃತಿ ಮೂಡಿಸಿ ಮಕ್ಕಳಿಗೆ ಲಸಿಕೆ ನೀಡಲಾಗುವುದು
- ಪರೀಕ್ಷೆ ಮತ್ತು ರಜೆಯ ತಿಂಗಳುಗಳನ್ನು ಹೊರತುಪಡಿಸಿ ರಾಜ್ಯದಲ್ಲಿ ಲಸಿಕಾ ಅಭಿಯಾನವನ್ನು ಯೋಜಿಸಲು ಆರೋಗ್ಯ ಇಲಾಖೆಗಳು ಮುಂದಾಗಿವೆ.
- ನಿಮ್ಮ ಮನೆಯಲ್ಲಿ 9-14 ವರ್ಷದ ಹೆಣ್ಮಕ್ಕಳಿಗೆ ಈ ಲಸಿಕೆ ಕೊಡಿಸಿ ಅವರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಾಪಾಡಿ.
ತಜ್ಞರು ನೀಡಿದ ಸಲಹೆ:ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಕ್ರಮಗಳೇನು ?
ಗರ್ಭಕಂಠದ ಕ್ಯಾನ್ಸರ್ ಅನ್ನು ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮತ್ತು HPV ಸೋಂಕಿನಿಂದ ರಕ್ಷಿಸುವ ಲಸಿಕೆಯನ್ನು ಪಡೆಯುವ ಮೂಲಕ ಮಾತ್ರ ತಡೆಗಟ್ಟಲು ಸಾಧ್ಯ. ಹೀಗಾಗಿ ೨೫ ರಿಂದ ೬೪ ವರ್ಷ ವಯೋಮಿತಿಯೊಳಗಿನ ಮಹಿಳೆಯರಲ್ಲಿ ನಿಯಮಿತ ಪ್ಯಾಪ್ಸ್ಮಿಯರ್ (Pap Smear Test) ಅಥವಾ ಹೆಚ್ಪಿವಿ ಟೆಸ್ಟಿಂಗ್ (HPV Testing) ಪರೀಕ್ಷೆಗಳ ಮೂಲಕ ಮಾತ್ರ ರೋಗಲಕ್ಷಣಗಳನ್ನು ಗುರುತಿಸಿ ಚಿಕಿತ್ಸೆ ನೀಡಬಹುದು. ಆದಾಗ್ಯೂ ೧೨ ರಿಂದ ೧೩ ವರ್ಷ ವಯೋಮಿತಿಯ ಮಕ್ಕಳಿಗೆ ಹೆಚ್ಪಿವಿ ಲಸಿಕೆ ನೀಡುವ ಮೂಲಕವೂ ಹೆಚ್ಪಿವಿ ಪ್ರೇರಿತ ಕ್ಯಾನ್ಸರ್ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ ಎಂದು ಡಾ. ಶ್ರೀಜಾ ರಾಣಿ(ಬೆಂಗಳೂರಿನ ಕಿಂಡರ್ ಆಸ್ಪತ್ರೆಯ ಸ್ರೀರೋಗ ತಜ್ಞೆ) ಸಲಹೆ ನೀಡಿದ್ದಾರೆ.
ವೈದ್ಯಕೀಯ ವಿಚಾರಗಳ ಹೊರತಾಗಿಯೂ ನೀವು ನಿಮ್ಮ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕವೂ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟಬಹುದು. ಹೆಚ್ಚಿನ ಗರ್ಭಕಂಠದ ಕ್ಯಾನ್ಸರ್ಗಳು HPVಯಿಂದ ಉಂಟಾಗುತ್ತವೆ. HPV ಲೈಂಗಿಕ ಸಂಪರ್ಕದ ಮೂಲಕ ಹರಡುವ ಸಾಮಾನ್ಯ ವೈರಸ್. ಈ ಹಿನ್ನೆಲೆಯಲ್ಲಿ HPV ಸೋಂಕಿನ ಸಾಧ್ಯತೆಯನ್ನು ಕಡಿಮೆ ಮಾಡಲು ಕಾಂಡೋಮ್ಗಳನ್ನು ಬಳಸುವುದು, ಧೂಮಪಾನವನ್ನು ತ್ಯಜಿಸುವುದು ಮತ್ತು ಸಮತೋಲಿತ ಆಹಾರವನ್ನು ಸೇವಿಸುವುದು ಉತ್ತಮ ಎಂದು ಡಾ. ಶ್ರೀಜಾ ರಾಣಿ ಶಿಫಾರಸು ಮಾಡುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications