Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಕ್ಯಾನ್ಸರ್ ತಡೆಗೆ 7.5 ಮಿಲಿಯನ್ ಡಾಲರ್ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ!
ಕ್ಯಾನ್ಸರ್ ಸದ್ಯ ಹಲವು ದೇಶಗಳಲ್ಲಿ ಅತೀ ದೊಡ್ಡ ಸಮಸ್ಯೆ. ಅದರಲ್ಲೂ ಅಮೆರಿಕ ಹಾಗೂ ಭಾರತದಂತಹ ದೇಶದಲ್ಲಿ ಕ್ಯಾನ್ಸರ್ ಬಹಳಷ್ಟು ಸಾವು ನೋವಿಗೆ ಕಾರಣವಾಗಿರುವ ವಿಷಯವಾಗಿದೆ. ಹೀಗಾಗಿ ಕ್ಯಾನ್ಸರ್ ಕುರಿತಂತೆ ಮತ್ತಷ್ಟು ಜಾಗೃತೆ ಮೂಡಿಸಬೇಕಾದ ಅನಿವಾರ್ಯತೆ ಇದೆ. ಇದಕ್ಕೆಂದು ಸರ್ಕಾವು ಸಹ ಹಲವು ರೀತಿಯ ಯೋಜನೆ ಜಾರಿ ಮಾಡಿದೆ.
ಇತ್ತೀಚೆಗೆ ಮುಕ್ತಾಯಗೊಂಡ QUAD ಕ್ಯಾನ್ಸರ್ ಮೂನ್‌ಶಾಟ್ ಈವೆಂಟ್‌ನಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಕ್ಯಾನ್ಸರ್ ಪರೀಕ್ಷೆ, ತಪಾಸಣೆ ಮತ್ತು ರೋಗನಿರ್ಣಯಕ್ಕೆ 7.5 ಮಿಲಿಯನ್ ಡಾಲರ್ ಮೀಸಲಿಡುವುದಾಗಿ ಘೋಷಿಸಿದ್ದಾರೆ. ಅದರಲ್ಲೂ ಮಹಿಳೆಯರಲ್ಲಿ ಕಂಡುಬರುವಂತಹ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಿಕೆಗೆ ಸಹಕಾರ ಅಗತ್ಯ ಎಂದಿದ್ದಾರೆ.

ಭಾರತಲ್ಲಿ ಈ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುವ ಮಹಿಳೆಯರ ಸಂಖ್ಯೆ ಹೆಚ್ಚುತ್ತಲಿದೆ. ಕ್ಯಾನ್ಸರ್ ಆರೈಕೆಯಲ್ಲಿ, ಚಿಕಿತ್ಸೆಗಾಗಿ ಸಹಕಾರ ಅತ್ಯಗತ್ಯ. ಕ್ಯಾನ್ಸರ್‌ನ ಹೊರೆಯನ್ನು ಕಡಿಮೆ ಮಾಡಲು ತಡೆಗಟ್ಟುವಿಕೆ, ತಪಾಸಣೆ, ರೋಗನಿರ್ಣಯ ಮತ್ತು ಚಿಕಿತ್ಸೆಯನ್ನು ಒಳಗೊಂಡಿರುವ ಒಂದು ಸಂಯೋಜಿತ ವಿಧಾನವು ಅತ್ಯಗತ್ಯ. ಭಾರತವು ಅತ್ಯಂತ ವೆಚ್ಚ-ಪರಿಣಾಮಕಾರಿ ನಡೆಯುತ್ತಿರುವ ಗರ್ಭಕಂಠದ ಕ್ಯಾನ್ಸರ್ ಸ್ಕ್ರೀನಿಂಗ್ ಕಾರ್ಯಕ್ರಮವನ್ನು ಸಾಮೂಹಿಕ ಪ್ರಮಾಣದಲ್ಲಿ ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಭಾರತವು ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆಯನ್ನು ಸಹ ನಡೆಸುತ್ತದೆ. ಮತ್ತು ಎಲ್ಲರಿಗೂ ಕೈಗೆಟಕುವ ದರದಲ್ಲಿ ಔಷಧಗಳು ಲಭ್ಯವಾಗುವಂತೆ ವಿಶೇಷ ಕೇಂದ್ರಗಳನ್ನು ಸಹ ರಚಿಸಲಾಗಿದೆ. ಗರ್ಭಕಂಠದ ಕ್ಯಾನ್ಸರ್‌ಗೆ ಭಾರತ ತನ್ನದೇ ಆದ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಮತ್ತು AI ಸಹಾಯದಿಂದ ಹೊಸ ಚಿಕಿತ್ಸಾ ಪ್ರೋಟೋಕಾಲ್‌ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಮೋದಿ ಹೇಳಿದ್ದರು.
GAVI ಮತ್ತು QUAD ನ ಉಪಕ್ರಮಗಳ ಮೂಲಕ ಭಾರತವು ಇಂಡೋ-ಪೆಸಿಫಿಕ್ ದೇಶಗಳಿಗೆ 40 ಮಿಲಿಯನ್ ಲಸಿಕೆ ಡೋಸ್‌ಗಳನ್ನು ನೀಡುತ್ತದೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಈ 40 ಮಿಲಿಯನ್ ಲಸಿಕೆ ಡೋಸ್‌ಗಳು ಕೋಟಿಗಟ್ಟಲೆ ಜನರ ಜೀವನದಲ್ಲಿ ಭರವಸೆಯ ಕಿರಣಗಳಾಗಲಿವೆ ಎಂದಿದ್ದಾರೆ.
ಗರ್ಭಕಂಠ ಎಂದರೆ ಗರ್ಭಾಶಯದ ಕೊನೆಯ ಭಾಗದಲ್ಲಿ ಕ್ಯಾನ್ಸರ್ ಉಂಟಾಗುವುದು. ಅಮೇರಿಕಾದಲ್ಲಿ ಪ್ರತಿವರ್ಷ ಸುಮಾರು 12,000 ಹೆಚ್ಚಿನ ಮಹಿಳೆಯರು ಗರ್ಭಕಂಠದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಈ ಸಂಖ್ಯೆ ಭಾರತದಲ್ಲಿ ದುಪ್ಪಟ್ಟಾಗುವ ಅಪಾಯವನ್ನು ತಜ್ಞರು ಹೇಳಿದ್ದಾರೆ. ಹೀಗಾಗಿಯೇ ಸರ್ಕಾರ ಕಳೆದ ಬಜೆಟ್‌ನಲ್ಲಿ ಈ ಗರ್ಭಕಂಠದ ಕ್ಯಾನ್ಸರ್ ತಡೆಗೆ ಹಾಗೂ ಚಿಕಿತ್ಸೆಗೆ 9-14 ವರ್ಷದೊಳಗಿನ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಘೋಷಿಸಲಾಗಿತ್ತು.
ಮುಂಬೈನ ಟಾಟಾ ಮೆಮೋರಿಯಲ್ ಆಸ್ಪತ್ರೆ ನೀಡಿರುವ ವರದಿಯ ಪ್ರಕಾರ, ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಅತೀ ಹೆಚ್ಚಾಗಿ ಕಾಡುತ್ತಿರುವ ಕ್ಯಾನ್ಸರ್ ಪ್ರಕಾರದಲ್ಲಿ ಮೊದಲ ಸ್ಥಾನ ಈ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಮಹಿಳೆಯರ ಮೇಲೆ ದುಷ್ಪರಿಣಾಮ ಬೀರುತ್ತಿರುವ ಅತ್ಯಂತ ಅಪಾಯಕಾರಿ ಕಾಯಿಲೆಗಳ ಪೈಕಿ ಗರ್ಭಕಂಠದ ಕ್ಯಾನ್ಸರ್ ಕೂಡ ಒಂದಾಗಿದ್ದು, ಇದು ಯೋನಿಯಿಂದ ಗರ್ಭಾಶಯದವರೆಗೂ ಆವರಿಸಿಕೊಳ್ಳುತ್ತದೆ.
ಗರ್ಭಕಂಠದ ಕ್ಯಾನ್ಸರ್ ಹೆಚ್‌ಐವಿ (HPV) ಸೋಂಕಿನೊಂದಿಗೆ ನೇರ ಸಂಬಂಧ ಹೊಂದಿರುತ್ತದೆ. ಇದು ನಮ್ಮ ದೇಶದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕ್ಯಾನ್ಸರ್‌ನ ಬಗೆಗಳ ಪೈಕಿ ಒಂದಾಗಿದೆ. ಇದೊಂದು ರೀತಿ ಸೋಂಕಿ ರೀತಿಯಲ್ಲಿ ಹರಡುವುದರಿಂದ ಚಿಕಿತ್ಸೆ ತಡವಾದಷ್ಟು ಪ್ರಾಣಕ್ಕೆ ಅಪಾಯ ಹೆಚ್ಚಾಗುತ್ತದೆ.
ಗರ್ಭಕಂಠದ ಕ್ಯಾನ್ಸರ್‌ಗೆ ಹೆಚ್ಪಿವಿ ಸೋಂಕು ಮುಖ್ಯ ಕಾರಣವಾಗಿರುವ ಕಾರಣ ಹೆಚ್ಪಿವಿ ಲಸಿಕೆ ಪಡೆಯುವುದು ಬಹಳ ಮುಖ್ಯ. 11-26 ವರ್ಷದ ಹೆಣ್ಣುಮಕ್ಕಳು ಕಡ್ಡಾಯವಾಗಿ ಹೆಚ್‌ಐವಿ ಲಸಿಕೆಗಳನ್ನು ಪಡೆಯಲೇಬೇಕು. ಹೆಚ್ಪಿವಿ ಸೋಂಕಿತ ಪುರುಷನಿಂದ ಈ ಕಾಯಿಲೆ ಹರಡುವುದರಿಂದ ಮಹಿಳೆಯರು ಅಸುರಕ್ಷಿತ ಲೈಂಗಿಕ ಕ್ರಿಯೆಗಳನ್ನು ನಡೆಸಬಾರದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
