Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿಂದ್ರೆ ಈ 6 ಆರೋಗ್ಯ ಸಮಸ್ಯೆ ಕಾಡುತ್ತೆ
ಕೆಲವರು ಬೆಳಗ್ಗೆ ಬ್ರೇಕ್‌ಫಾಸ್ಟ್‌ಗೆ ಬಾಳೆಹಣ್ಣು ಸೇವಿಸುತ್ತಾರೆ, ಬೆಳಗ್ಗೆ ವರ್ಕೌಟ್ ಮಾಡುವವರು ಒಂದು ಬಾಳೆಹಣ್ಣು ತಿಂದು ವರ್ಕೌಟ್ ಮಾಡುತ್ತಾರೆ, ಇನ್ನು ಕೆಲವರು ವರ್ಕೌಟ್ ಮಾಡಿ ಬಂದ ಬಳಿಕ ಬಾಳೆಹಣ್ಣು ಸೇವಿಸುತ್ತಾರೆ, ಆದರೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದು ಒಳ್ಳೆಯದಲ್ಲ ಎಂಬುವುದು ಗೊತ್ತೇ? ಬಾಳೆಹಣ್ಣು ಪೋಷಕಾಂಶವಿರುವ ಆಹಾರವೇ ಆಗಿದ್ದರೂ ಖಾಲಿ ಹೊಟ್ಟೆಯಲ್ಲಿ ತಿನ್ನುವುದು ಒಳ್ಳೆಯದಲ್ಲ. ಬಾಳೆಹಣ್ಣು ಖಾಲಿ ಹೊಟ್ಟೆಯಲ್ಲಿ ತಿಂದರೆ ಏನಾಗುತ್ತದೆ ಎಂದು ನೋಡೋಣ ಬನ್ನಿ:

ನಿಮ್ಮ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ
ಹೌದು, ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದು ಖಾಲಿಹೊಟ್ಟೆಗೆ ಒಳ್ಳೆಯದಲ್ಲ. ದೇಹದಲ್ಲಿ ಮೆಗ್ನಿಷ್ಯಿಯಂ ಹಾಗೂ ಕ್ಯಾಲ್ಸಿಯಂ ಬ್ಯಾಲೆನ್ಸ್ ಮಾಡುವುದು ಕಷ್ಟವಾಗುವುದು. ಬಾಳೆಹಣ್ಣಿನಲ್ಲಿ ಮೆಗ್ನಿಷ್ಯಿಯಂ ಅಧಿಕವಿರುತ್ತದೆ, ಇದನ್ನು ಖಾಲಿ ಹೊಟ್ಟೆಯಲ್ಲಿ ತಿಂದಾಗ ರಕ್ತದಲ್ಲಿ ಮೆಗ್ನಿಷ್ಯಿಯಂ ಅಧಿಕವಾಗುವುದು. ಅಧಿಕ ರಕ್ತದೊತ್ತಡ ಇರುವವರೆಗೆ ಅಂತೂ ಇನ್ನೂ ಡೇಂಜರ್. ಆದ್ದರಿಂದ ಖಾಲಿಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಡಿ.
ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುವುದು'
ಬಾಳೆಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಾಗುವುದು. ಈ ರೀತಿಯಾದಾಗ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಗಳು ಕಂಡು ಬರುವುದು. ಆದ್ದರಿಂದ ಮಧುಮೇಹಿಗಳು ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸಲೇಬೇಡಿ, ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದು.
ಖಾಲಿಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ ಹೊಟ್ಟೆ ಹಾಳಾಗುವುದು
ಬಾಳೆಹಣ್ಣು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು, ಆದರೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಜೀರ್ಣಕ್ರಿಯೆ ನಿಧಾನವಾಗುವುದು, ಇದರಿಂದ ಗ್ಯಾಸ್ಟ್ರಿಕ್ ಅಸಿಡಿಟಿ ಮುಂತಾದ ಸಮಸ್ಯೆ ಹೆಚ್ಚಾಗುವುದು.
ದೇಹವು ಕಬ್ಬಿಣದಂಶ ಹೀರಿಕೊಳ್ಳುವುದು ಕಡಿಮೆಯಾಗುವುದು
ನೀವು ಕಬ್ಬಿಣದಂಶದ ಕೊರತೆ ಅನುಭವಿಸುತ್ತಿದ್ದು ರಕ್ತಹೀನತೆ ಸಮಸ್ಯೆಯಿದ್ದರೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸಲೇಬೇಡಿ. ಬಾಳೆಹಣ್ಣಿನಲ್ಲಿ ಪೊಟಾಷ್ಯಿಯಂ ಇರುವುದರಿಂದ ಖಾಲಿಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸಿದರೆ ದೇಹವು ಆಹಾರದಿಂದ ಕಬ್ಬಿಣದಂಶ ಸರಿಯಾಗಿ ಹೀರಿಕೊಳ್ಳುವುದಿಲ್ಲ, ಆದ್ದರಿಂದ ಖಾಲಿಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸಬೇಡಿ.
ಅಸಿಡಿಟಿ ಸಮಸ್ಯೆ ಹೆಚ್ಚಾಗುವುದು
ಅಸಿಡಿಟಿ ಸಮಸ್ಯೆ ಇರುವವರು ಖಾಲಿಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ ತುಂಬಾನೇ ತೊಣದರೆ ಅನುಭವಿಸುತ್ತಾರೆ, ಏಕೆಂದರೆ ಬಾಳೆಹಣ್ಣಿನಲ್ಲಿ ಆಮ್ಲೀಯತೆ ಇರುವುದರಿಂದ ಖಾಲಿಹೊಟ್ಟೆಯಲ್ಲಿ ಬಾಳೆಹಣ್ಣು ತಿಂದರೆ ಆಮ್ಲೀಯತೆ ಹೆಚ್ಚಾಗುವುದು, ಇದರಿಂದ ಎದೆಯುರಿ ಉಂಟಾಗುವುದು.
ಮೈತೂಕ ಹೆಚ್ಚಾಗುವುದು
ನೀವು ಮೈ ತೂಕ ಕಡಿಮೆ ಮಾಡಲು ವರ್ಕೌಟ್ ಮಾಡುತ್ತಿದ್ದರೆ ನೀವು ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಡಿ. ಕೆಲವರು ಬಾಳೆಹಣ್ಣು ತಿಂದರೆ ದಪ್ಪಗಾಗುತ್ತಾರೆ ಎಂದು ಭಾವಿಸುತ್ತಾರೆ, ಊಟವಾದ ಬಳಿಕ ಬಾಳೆಹಣ್ಣು ತಿಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಜೀರ್ಣಕ್ರಿಯೆ ಚೆನ್ನಾಗಿ ಆದರೆ ಮೈ ತೂಕ ಇಳಿಸಲು ಸಹಕಾರಿ, ಆದ್ದರಿಂದ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಡಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
