Latest Updates
-
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ -
ವಡೋದರಾದಲ್ಲಿ ವಾಯುಪಡೆ ಮುಖ್ಯಸ್ಥರ ಗರ್ಬಾ ನೃತ್ಯ: ವೈರಲ್ ವಿಡಿಯೋದಲ್ಲಿ ಸಿಂಗ್ ಅವರ ಸರಳತೆ ನೋಡಿ! -
ಚೆನ್ನೈ ಮಳೆ ಅಲರ್ಟ್: ಹೊರಗೆ ಹೋಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ
SHOCKING: ಮುಟ್ಟಿನ ರಜೆ ಬೇಕಾ.. ಪ್ಯಾಂಟ್ ಬಿಚ್ಚು! ವಿಶ್ವವಿದ್ಯಾಲಯದ ರೂಲ್ಸ್ ಕೇಳಿ ವಿದ್ಯಾರ್ಥಿನಿ ಶಾಕ್
ಮುಟ್ಟಿನ ರಜೆ ಬೇಕಾ... ಪ್ಯಾಂಟ್ ಬಿಚ್ಚು! ವಿಶ್ವವಿದ್ಯಾಲಯದ ನಿಯಮ ಕೇಳಿ ಬೆಚ್ಚಿಬಿದ್ದ ವಿದ್ಯಾರ್ಥಿನಿ. ಈ ವಿಶ್ವವಿದ್ಯಾಲಯದಲ್ಲಿ ಇದೆಂಥಾ ನೀಚ ರೂಲ್ಸ್? ಹೌದು, ವಿದ್ಯಾರ್ಥಿನಿಯೊಬ್ಬಳು ಮುಟ್ಟಿನ ರಜೆ ಕೇಳಿದಾಗ (Period Leave) ತನ್ನ ಪ್ಯಾಂಟ್ ಬಿಚ್ಚುವಂತೆ ವಿಶ್ವವಿದ್ಯಾಲಯದ ಸಿಬ್ಬಂದಿಗಳು ಸೂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಚೀನಾದ (China) ಬೀಜಿಂಗ್ ತಂತ್ರಜ್ಞಾನ ವಿಶ್ವ ವಿದ್ಯಾಲಯದ ಗೆಂಗ್ಡಾನ್ ಇನ್ಸ್ಟಿಟ್ಯೂಟ್ನಲ್ಲಿ (Gengdan Institute) ಈ ಹೇಯ ಘಟನೆ ನಡೆದಿದೆ. ಇದೀಗ, ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಶಾಲೆ ಮತ್ತು ಕಾಲೇಜುಗಳಲ್ಲಿ ಅನಗತ್ಯ ರಜೆ ತೆಗೆದುಕೊಳ್ಳುವುದನ್ನು ತಪ್ಪಿಸಲು ಕೆಲವು ನಿಯಮ ಇರುತ್ತವೆ. ವಿದ್ಯಾರ್ಥಿಗಳಿಗೆ ಅನಗತ್ಯ ರಜೆಗಳನ್ನು ತಪ್ಪಿಸಿ, ತುಂಬಾ ಅವಶ್ಯಕತೆ ಇದ್ದಾಗ ಲೀವ್ ಹಾಕಿ ಎಂದು ಹೇಳುವುದು ಸಾಮಾನ್ಯ. ಆದರೆ, ಚೀನಾದ ವಿಶ್ವವಿದ್ಯಾಲಯವೊಂದರಲ್ಲಿ ವಿದ್ಯಾರ್ಥಿನಿ ಋತುಚಕ್ರದ (Menstrual Cycle) ಒತ್ತಡದಿಂದ ರಜೆ ಕೇಳಿದರೆ, ಒಂದು ವಿಚಿತ್ರ ನಿಯಮ ಹೇಳಿದ್ದು, ಇದನ್ನು ಕೇಳಿ ವಿದ್ಯಾರ್ಥಿಗಳು ಶಾಕ್ ಆಗಿದ್ದಾರೆ. ಈ ಆತಂಕಕಾರಿ ಘಟನೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿನ ಲಿಂಗ ತಾರತಮ್ಯದ ಕುರಿತು ಚರ್ಚೆಗಳನ್ನು ಹುಟ್ಟುಹಾಕಿದೆ.

ಚೀನಾದ ವಿಶ್ವವಿದ್ಯಾಲಯದಲ್ಲಿ ವಿಚಿತ್ರ ನಿಯಮ
ಚೀನಾದ ಬೀಜಿಂಗ್ ತಂತ್ರಜ್ಞಾನ ವಿಶ್ವವಿದ್ಯಾಲಯದ ಗೆಂಗ್ಡಾನ್ ಇನ್ಸ್ಟಿಟ್ಯೂಟ್ನಲ್ಲಿ ಈ ಘಟನೆ ನಡೆದಿದೆ. ಅಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಮುಟ್ಟಿನ ಕಾರಣದಿಂದ ರಜೆ ಕೇಳಿದ್ದಾಳೆ. ಆದರೆ, ಆಕೆಯೆ ದೊಡ್ಡ ಆಘಾತ ಕಾದಿತ್ತು. ಅಲ್ಲಿನ ಕ್ಲಿನಿಕ್ ಸಿಬ್ಬಂದಿ ವಿದ್ಯಾರ್ಥಿನಿಗೆ ನಿಜವಾಗಿಯೂ ಋತುಚಕ್ರವಾಗುತ್ತಿದೆಯೇ ಎಂಬುವುದನ್ನು ಸಾಬೀತುಪಡಿಸಲು ಸೂಚಿಸಿದ್ದಾರೆ. ನೀನು ಪ್ಯಾಂಟ್ ಬಿಚ್ಚಬೇಕು, ಆಗ ಮಾತ್ರ ರಜೆ ಸಿಗುತ್ತದೆ ಎಂದು ಹೇಳಿದ್ದಾರೆ. ಈ ಘಟನೆಯು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿನ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ ಬಗ್ಗೆ ತಮ್ಮ ಖಾರವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿನಿ!
ಚೀನಾದ ಬೀಜಿಂಗ್ ವಿಶ್ವವಿದ್ಯಾಲಯದ ಗೆಂಗ್ಡಾನ್ ಸಂಸ್ಥೆಯ ವಿದ್ಯಾರ್ಥಿನಿಯೊಬ್ಬರು ಮೇ 15 ರಂದು ತಮ್ಮ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದಾರೆ. ವಿದ್ಯಾರ್ಥಿನಿಯು ಮುಟ್ಟಿನ ರಜೆ ಕೇಳಲು ಕ್ಯಾಂಪಸ್ ಕ್ಲಿನಿಕ್‌ಗೆ ತೆರಳಿದ್ದಾರೆ. ಈ ವೇಳೆ ಅಲ್ಲಿನ ಸಿಬ್ಬಂದಿ ಈ ವಿಚಿತ್ರ ನಿಯಮವನ್ನು ತನ್ನ ಮುಂದಿಟ್ಟರು ಎಂದು ವಿದ್ಯಾರ್ಥಿನಿ ಹೇಳಿದ್ದಾರೆ. ವರದಿಯ ಪ್ರಕಾರ, ಈ ಘಟನೆಯಿಂದ ಭಯಭೀತಳಾದ ವಿದ್ಯಾರ್ಥಿನಿಯು ಅಲ್ಲಿನ ಸಿಬ್ಬಂದಿಯನ್ನು ಕೇಳಿದ್ದಾಳೆ. ರಜೆ ಪಡೆಯಲು ಪ್ರತಿಯೊಬ್ಬ ವಿದ್ಯಾರ್ಥಿನಿಯೂ ತನ್ನ ಪ್ಯಾಂಟ್ ತೆಗೆಯಬೇಕೇ? ಎಂದು ಪ್ರಶ್ನೆ ಮಾಡಿದ್ದಾಳೆ. ಇದಕ್ಕೆ ಮಹಿಳಾ ಸಿಬ್ಬಂದಿ, 'ಇದು ವಿಶ್ವವಿದ್ಯಾಲಯದ ನಿಯಮ' ಎಂದು ಉತ್ತರಿಸಿದ್ದಾರೆ. ಇದು ನನ್ನ ವೈಯಕ್ತಿಕ ನಿರ್ಧಾರವಲ್ಲ, ಬದಲಾಗಿ ವಿಶ್ವವಿದ್ಯಾಲಯದ ನಿಯಮ ಎಂದು ವಿದ್ಯಾರ್ಥಿನಿಗೆ ತಿಳಿಸಿದ್ದಾರೆ.
ಲಿಖಿತ ದಾಖಲೆ ಕೇಳಿದ ವಿದ್ಯಾರ್ಥಿನಿ.. ಮುಂದೇನಾಯ್ತು?
ಸಿಬ್ಬಂದಿಯ ಉತ್ತರದ ಬಳಿಕ ವಿದ್ಯಾರ್ಥಿನಿ ಲಿಖಿತ ದಾಖಲೆ ನೀಡುವಂತೆ ಕೇಳಿದ್ದಾಳೆ. ಆದರೆ, ಕ್ಲಿನಿಕ್ ಸಿಬ್ಬಂದಿ ಯಾವುದೇ ಉತ್ತರ ನೀಡಿಲ್ಲ. ಆಸ್ಪತ್ರೆಗೆ ಹೋಗುವಂತೆ ಹೇಳಿದ್ದಾರೆ. ಆದರೆ, ಇದನ್ನು ವಿಶ್ವವಿದ್ಯಾಲಯ ಅಲ್ಲಗಳೆದಿದೆ. ಈ ಬಗ್ಗೆ ಮರುದಿನ ವಿಶ್ವವಿದ್ಯಾನಿಲಯವು ಹೇಳಿಕೆ ನೀಡಿದೆ. ನಿಯಮಗಳ ಪ್ರಕಾರ, ಪ್ರಕ್ರಿಯೆಯನ್ನು ನಡೆಸಲಾಗಿದೆ ಎಂದು ತಿಳಿಸಿದೆ. ವಿದ್ಯಾರ್ಥಿಯ ಒಪ್ಪಿಗೆಯ ಮೇರೆಗೆ ಸಿಬ್ಬಂದಿ ಪರೀಕ್ಷೆ ನಡೆಸಿದ್ದಾರೆ. ಯಾವುದೇ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿಲ್ಲ ಎಂದು ಹೇಳಿದೆ. ಇತ್ತ, ವಿದ್ಯಾರ್ಥಿನಿ ಒಂದು ವೇಳೆ ಈ ರೀತಿ ಮಾಡದೇ ಹೋದರೆ ರಜೆ ನೀಡಲು ಸಾಧ್ಯವಿಲ್ಲ ಎಂದು ತನ್ನ ನೋವು ತೋಡಿಕೊಂಡಿದ್ದಾಳೆ.
ರಜೆ ದುರುಪಯೋಗ ತಡೆಯುವುದು ಇದರ ಉದ್ದೇಶ
ಸಿಬ್ಬಂದಿಯೊಬ್ಬರು ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ನಿಯಮ ಹೊಸದಲ್ಲ. ರಜೆಯ ದುರುಪಯೋಗವನ್ನು ತಡೆಯುವುದು ಇದರ ಉದ್ದೇಶ ಎಂದು ಹೇಳಿದ್ದಾರೆ. ಕೆಲವು ವಿದ್ಯಾರ್ಥಿನಿಯರು ತಿಂಗಳಿಗೆ ನಾಲ್ಕರಿಂದ ಐದು ಬಾರಿ ಮುಟ್ಟಿನ ನೆಪ ಹೇಳಿ ರಜೆ ತೆಗೆದುಕೊಳ್ಳುತ್ತಾರೆ. ಹೀಗಾಗಿಯೇ ಈ ನಿಯಮ ಮಾಡಲಾಗಿದೆ ಎಂದು ಸಿಬ್ಬಂದಿ ವಾಸ್ತವಾಂಶವನ್ನು ಬಿಚ್ಚಿಟ್ಟಿದ್ದಾರೆ. ಮತ್ತೊಂದೆಡೆ, ವಿದ್ಯಾರ್ಥಿಯು ಈ ಘಟನೆ ಹಂಚಿಕೊಂಡ ಬಳಿಕ, ಜನರು ವಿಶ್ವವಿದ್ಯಾಲಯದ ನಿಯಮವನ್ನು ಅಸಂಬದ್ಧ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಇದು ವಿದ್ಯಾರ್ಥಿನಿಯರ ಗೌಪ್ಯತೆಯನ್ನು ಉಲ್ಲಂಘಿಸುತ್ತದೆ. ಇದನ್ನು ಸ್ಪಷ್ಟವಾಗಿ ಕಿರುಕುಳ ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
