Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಕೊಲೆಸ್ಟ್ರಾಲ್ ಸಮಸ್ಯೆಯೇ? ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವ 8 ಆಹಾರಗಳಿವು
ಕೊಲೆಸ್ಟ್ರಾಲ್ ಬಹುತೇಕರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ, ಮಧ್ಯವಯಸ್ಕರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಕೊಲೆಸ್ಟ್ರಾಲ್ ನಮ್ಮ ಲಿವರ್ ಉತ್ಪತ್ತಿ ಮಾಡುತ್ತದೆ. ಕೊಲೆಸ್ಟ್ರಾಲ್‌ನಲ್ಲಿ 2 ವಿಧ, ಒಂದು ಒಳ್ಳೆಯ ಕೊಲೆಸ್ಟ್ರಾಲ್(HDL) ಮತ್ತೊಂದು ಕೆಟ್ಟ ಕೊಲೆಸ್ಟ್ರಾಲ್ LDL.
ದೇಹದಲ್ಲಿ LDL ಪ್ರಮಾಣ ಹೆಚ್ಚಾದರೆ ಆರೋಗ್ಯ ಸಮಸ್ಯೆ ಉಂಟಾಗುವುದು. ಅದೇ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಾದರೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ದೇಹದಿಂದ ಹೊರ ಹಾಕುತ್ತದೆ. ಆದ್ದರಿಂದ ಈ ಆಹಾರಗಳು ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿಯಾಗಿದೆ ನೋಡಿ:

ಓಟ್ಸ್, ಬಾರ್ಲಿ
ಕೊಲೆಸ್ಟ್ರಾಲ್ ಕಡಿಮೆ ಮಾಡಬೇಕು ಅಥವಾ ಕೊಲೆಸ್ಟ್ರಾಲ್ ಸಮಸ್ಯೆ ಬರಲೇಬಾರದು ಎಂದು ಬಯಸುವವರು ಬಾರ್ಲಿ ಮತ್ತು ಓಟ್ಸ್ ಅನ್ನು ಸೇವನೆ ಮಾಡುವುದು ಒಳ್ಳೆಯದು, ಪ್ರತಿನಿತ್ಯ 120 ಗ್ರಾಂನಿಂದ 200ಗ್ರಾಂನಷ್ಟು ಸೇವಿಸಿದರೆ ಸಾಕು.
ಮೀನು
ಸಾಲಮೋನ್, ಬೂತಾಯಿ ಮೀನು, ಬಂಗುಡೆ, ತುನಾ ಬಗೆಯ ಮೀನುಗಳಲ್ಲಿ ಒಮೆಗಾ 3 ಕೊಬ್ಬಿನಂಶ ಅಧಿಕವಿರುತ್ತದೆ, ಈ ಒಳ್ಳೆಯ ಕೊಬ್ಬಿನಂಶ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸಲು ಸಹಕಾರಿ. ಆದ್ದರಿಂದ ಮೀನನ್ನು ವಾರದಲ್ಲಿ 2-3 ಬಾರಿ ಸೇವಿಸಿದರೆ ಒಳ್ಳೆಯದು.
ನಟ್ಸ್
ನಟ್ಸ್‌ನಲ್ಲಿ ಮೋನೋಸ್ಯಾಚುರೇಟಡ್ ಮತ್ತು ಪಾಲಿಸ್ಯಾಚುರೇಟಡ್ ಅಲ್ಲದ ಕೊಬ್ಬಿನಂಶವಿರುತ್ತದೆ, ಇದು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಅಲ್ಲದೆ ಇವುಗಳ ಸೇವನೆಯಿಂದ ನಿಮ್ಮ ಹೃದಯದ ಆರೋಗ್ಯಕ್ಕೂ ಒಳ್ಳೆಯದು.
ಆಲೀವ್ ಎಣ್ಣೆ
ಆಲಿವ್ ಎಣ್ಣೆ ಕೂಡ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಆದ್ದರಿಂದ ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಅಡುಗೆ ಮಾಡುವಾಗ ಆಲೀವ್ ಎಣ್ಣೆ ಬಳಸಿದರೆ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯವಾಗುವುದು.
ಹಣ್ಣು ಮತ್ತು ತರಕಾರಿಗಳು
ಎಲ್ಲಾ ಬಗೆಯ ಹಣ್ಣು ತರಕಾರಿಗಳು ಒಳ್ಳೆಯದು, ನೀವು ಮಾಂಸಾಹಾರ ಸೇವನೆ ಕಡಿಮೆ ಮಾಡಿ. ಹಣ್ಣುಗಳು ಹಾಗೂ ತರಕಾರಿಯನ್ನು ಹೆಚ್ಚಾಗಿ ಸೇವಿಸಿ. ಬಣ್ಣ ಬಣ್ಣದ ಹಣ್ಣು ತರಕಾರಿಗಳನ್ನು ಸೇವಿಸಿ. ಸೀಸನ್‌ಗಳ ಹಣ್ಣುಗಳನ್ನು ಹೆಚ್ಚಾಗಿ ಸೇವಿಸಿ. ನಾರಿನಂಶ ಹೆಚ್ಚು ಸೇವಿಸಿದಷ್ಟೂ ಒಳ್ಳೆಯದು.
ಧಾನ್ಯಗಳು
ನಿಮ್ಮ ಆಹಾರದಲ್ಲಿ ಧಾನ್ಯಗಳನ್ನು ಸೇರಿಸಿ. ಚೆನ್ನಾ, ಬೀನ್ಸ್, ಕಾಳುಗಳನ್ನು ಹೆಚ್ಚಾಗಿ ಸೇವಿಸಿ. ಕಾಳುಗಳನ್ನು ಮೊಳಕೆ ಭರಿಸಿ ಸೇವಿಸಿದರೆ ಇನ್ನೂ ಒಳ್ಳೆಯದು. ಪ್ರತಿನಿತ್ಯ ನಿಮ್ಮ ಆಹಾರದಲ್ಲಿ 120ರಿಂದ 200ಗ್ರಾಂ ನಿಮ್ಮ ಆಹಾರಕ್ರಮದಲ್ಲಿ ಸೇರಿಸಿ.
ಬೆಣ್ಣೆಹಣ್ಣು
ಬೆಣ್ಣೆಹಣ್ಣು ಕೂಡ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಕಾರಿ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಬೆಣ್ಣೆಹಣ್ಣು ಸೇವಿಸಿ. ಇದನ್ನು ಸಲಾಡ್ ರೀತಿ ಮಾಡಿ ಸೇವಿಸಬಹುದು.
ಉಪ್ಪು ಕಡಿಮೆ ಸೇವಿಸಿ
ಅತಿಯಾದ ಉಪ್ಪು ಸೇವನೆ ಒಳ್ಳೆಯದಲ್ಲ, ಉಪ್ಪನ್ನು ಮಿತಿಯಲ್ಲಿ ಸೇವಿಸಿ. ಸೋಡಿಯಂ ಕಡಿಮೆ ಸೇವಿಸಿದಷ್ಟೂ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಸಹಕಾರಿ.
ಮದ್ಯವನ್ನು ಮಿತಿಯಲ್ಲಿ ಸೇವಿಸಿ
ಪುರುಷರು ಹಾಗೂ ಮಹಿಳೆಯರು ಮದ್ಯವನ್ನು ಮಿತಿಯಲ್ಲಿ ಸೇವಿಸಿ. ಇದರಿಂದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಬಹುದು, ಆರೋಗ್ಯಕ್ಕೂ ಒಳ್ಳೆಯದು.
ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯದ ಆರೋಗ್ಯಕ್ಕೆ ಅಪಾಯ
ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ, ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯಾಘಾತ, ಪಾರ್ಶ್ವವಾಯು ಅಪಾಯ ಹೆಚ್ಚು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
