Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಬೆಳಗ್ಗಿನ ಉಪಹಾರಕ್ಕೆ ಇದು ಉತ್ತಮ ಆಹಾರ; ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ತಿನ್ನಲೇಬೇಡಿ!
ಬೆಳಗ್ಗಿನ ಉಪಾಹಾರ ನಿಮ್ಮ ದಿನಕ್ಕೆ ಉತ್ತಮ ಆರಂಭ. ಹಾಗಂತ, ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ತಿನ್ನಲೇಬೇಡಿ! ಹೌದು, ಎಲ್ಲರ ದಿನ ಆರಂಭವಾಗುವುದೇ ಉಪಾಹಾರದಿಂದ. ರಾತ್ರಿ ನಿದ್ರೆಯ ಬಳಿಕ ದೇಹಕ್ಕೆ ಸಿಗುವ ಮೊದಲ ಆಹಾರವೇ ಉಪಾಹಾರ. ಬೆಳಗ್ಗಿನ ಉಪಾಹಾರ (Breakfast) ತಪ್ಪಿಸುವುದು ಅಥವಾ ಟಿಫನ್ ಮಾಡಲು ಸಮಯವಿಲ್ಲ ಎಂದು ತರಾತುರಿಯಲ್ಲಿ ಕೆಲಸಕ್ಕೆ ಹೋದರೆ ಕಾದಿದೆ ಗಂಡಾಂತರ. ನಿಮ್ಮ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಜೊತೆಗೆ ಹಲವಾರು ಆರೋಗ್ಯ ಸಮಸ್ಯೆ (Health problem) ಉಂಟು ಮಾಡುತ್ತದೆ. ಹಾಗಿದ್ರೆ, ಬೆಳಗ್ಗಿನ ಉಪಹಾರಕ್ಕೆ ಉತ್ತಮ ಆಹಾರ ಯಾವುದು? ಟಿಫಿನ್ ಮಾಡದೇ ಇದ್ದರೆ ಏನಾಗುತ್ತದೆ? ಎನ್ನುವುದನ್ನು ತಿಳಿಯೋಣ ಬನ್ನಿ.
ಬೆಳಗ್ಗಿನ ಉಪಹಾರದಲ್ಲಿ (Morning Breakfast) ಹಣ್ಣುಗಳು, ತರಕಾರಿಗಳು ಮತ್ತು ಸಿರಿಧಾನ್ಯಗಳನ್ನು ಸೇವಿಸುವುದು ಉತ್ತಮ. ಇದರಿಂದ ಜೀರ್ಣಕ್ರಿಯೆಗೆ ಉತ್ತಮವಾದ ಫೈಬರ್ ದೇಹಕ್ಕೆ ಸಿಗುತ್ತದೆ. ಓಟ್ ಮೀಲ್, ಹಣ್ಣು ಮತ್ತು ತರಕಾರಿ ಸ್ಕೂಥಿ, ಮೊಟ್ಟೆ ಹೀಗೆ ಆರೋಗ್ಯಕರ ಆಹಾರಗಳನ್ನು ಬೆಳಗಿನ ಉಪಹಾರದಲ್ಲಿ ಸೇವಿಸಬೇಕು. ಬೆಳಗಿನ ಉಪಾಹಾರವನ್ನು ಸರಿಯಾದ ಸಮಯಕ್ಕೆ ಸೇವಿಸುವುದರಿಂದ ಹಸಿವು ಕಡಿಮೆಯಾಗುತ್ತದೆ. ಇದು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ ಮತ್ತು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಬೆಳಗ್ಗಿನ ಉಪಹಾರಕ್ಕೆ ಸರಿಯಾದ ಸಮಯ ಯಾವುದು?
ಬೆಳಗ್ಗೆ 7 ರಿಂದ 8 ಗಂಟೆಯೊಳಗೆ ಬೆಳಗಿನ ಉಪಹಾರ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ನೀವು ತಡವಾಗಿ ಎದ್ದರೆ, ಎದ್ದ ಒಂದು ಗಂಟೆಯೊಳಗೆ ಉಪಹಾರವನ್ನು ಸೇವಿಸುವುದು ಉತ್ತಮ ಸಮಯ. ಏಕೆಂದರೆ, ರಾತ್ರಿ ಊಟದ ಬಳಿಕ ಹೊಟ್ಟೆ ದೀರ್ಘ ಕಾಲದವರೆಗೆ ಖಾಲಿ ಇರುವ ಕಾರಣ ನಮ್ಮ ದೇಹಕ್ಕೆ ಶಕ್ತಿಯ ಅಗತ್ಯವಿರುತ್ತದೆ. ಬೆಳಗ್ಗೆ ಗ್ಲೋಕೋಸ್ ಮಟ್ಟವು ಕಡಿಮೆಯಾಗುತ್ತದೆ. ಬೆಳಗ್ಗಿನ ಉಪಾಹಾರ ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ. ಜೊತೆಗೆ ದಿನವನ್ನು ಪ್ರಾರಂಭಿಸಲು ನಮಗೆ ಶಕ್ತಿಯನ್ನು ನೀಡುತ್ತದೆ.
ಉಪಾಹಾರ ಸೇವಿಸದೇ ಇದ್ದರೆ ಏನಾಗುತ್ತದೆ?
ಬೆಳಗ್ಗೆ ಟಿಫಿನ್ ಮಾಡದಿರುವುದರಿಂದ ಚಯಾಪಚಯ ಕ್ರಿಯೆ ನಿಧಾನವಾಗುತ್ತದೆ. ಇದು ದಿನದ ಇತರೆ ಸಮಯಗಳಲ್ಲಿ ಅತಿಯಾಗಿ ತಿನ್ನುವ ಮತ್ತು ತೂಕ ಹೆಚ್ಚಾಗುವ ಅಪಾಯವನ್ನುಂಟುಮಾಡುತ್ತದೆ. ದಿನವಿಡೀ ಸಿಹಿತಿಂಡಿ ಮತ್ತು ಕಾಫಿ ತ್ಯಜಿಸುವುದು ಆರೋಗ್ಯಕ್ಕೆ ಒಳ್ಳೆಯದು. ಬೆಳಗ್ಗೆ ಉಪಾಹಾರ ಸೇವಿಸುವುದರಿಂದ ನಿಮ್ಮ ದೇಹ ದಿನವಿಡೀ ಚುರುಕಾಗಿರುತ್ತದೆ. ನಿಮ್ಮ ಚಯಾಪಚಯ ಕ್ರಿಯೆಯೂ ಸುಧಾರಿಸುತ್ತದೆ. ಪ್ರೋಟೀನ್ ಭರಿತ ಉಪಹಾರ ಸೇವಿಸುವುದು ದೇಹಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ.
ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ತಿನ್ನಲೇಬೇಡಿ!
ಉತ್ತಮ ಆರೋಗ್ಯಕ್ಕಾಗಿ ಉತ್ತಮ ಆಹಾರ ಬಹಳ ಮುಖ್ಯ. ಆದರೆ, ಯಾವುದೇ ಆಹಾರವನ್ನು ಯಾವಾಗ ತೆಗೆದುಕೊಳ್ಳಬೇಕು ಎಂಬುದು ಸಹ ಅಷ್ಟೇ ಮುಖ್ಯ. ದ್ರಾಕ್ಷಿ, ನಿಂಬೆಹಣ್ಣು ಮತ್ತು ಕಿತ್ತಳೆ ಮುಂತಾದ ಹುಳಿ ಹಣ್ಣುಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಖಾಲಿ ಹೊಟ್ಟೆಯಲ್ಲಿ ಮೆಣಸಿನಕಾಯಿ, ಮಸಾಲೆಯುಕ್ತ ಆಹಾರ ಸೇವನೆ ಸಹ ಬೇಡ. ಚಹಾ ಅಥವಾ ಕಾಫಿ ಕುಡಿಯುವುದರಿಂದ ಆಮ್ಮಿಯತೆಯ ತೊಂದರೆ ಉಂಟಾಗುತ್ತದೆ. ಇನ್ನು, ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು, ಸೋಡಾ, ಕೂಲ್ಲಿಂಕ್ಸ್ ಕೂಡ ಬೇಡ.
ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿದರೆ..!
ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನಮ್ಮ ಕರುಳಿನ ಆರೋಗ್ಯ ಚೆನ್ನಾಗಿರುತ್ತದೆ. ಇದರಿಂದ ಬೆಳಗ್ಗಿನ ಸಮಯದಲ್ಲಿ ಸರಾಗವಾಗಿ ಮಲವಿಸರ್ಜನೆ ಆಗುತ್ತದೆ. ಜೊತೆಗೆ ಮಲಬದ್ಧತೆ ಸಮಸ್ಯೆ ಎದುರಾಗುವುದಿಲ್ಲ. ನಮ್ಮ ದೇಹದಿಂದ ವಿಷಕಾರಿ ಅಂಶಗಳನ್ನು ಹೋಗಲಾಡಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇದರಿಂದ ನಮ್ಮ ಚರ್ಮದ ಕಾಂತಿ ಕೂಡ ಹೆಚ್ಚಾಗುತ್ತದೆ. ಇದು ತಲೆನೋವನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲದೆ ಬಾಯಲ್ಲಿ ಬರುವ ದುರ್ವಾಸನೆಯನ್ನು ಕೂಡ ಇದು ದೂರ ಮಾಡಬಲ್ಲದು.
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡಿ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಾಗುತ್ತದೆ. ಅಂಗಗಳು ಮತ್ತು ಜೀವಕೋಶಗಳು ಗ್ಲುಕೋಸ್ ಅನ್ನು ತ್ವರಿತವಾಗಿ ಹೀರಿಕೊಳ್ಳುತ್ತವೆ. ರಕ್ತದಲ್ಲಿನ ಸಕ್ಕರೆ ಮಟ್ಟಗಳ ಸಂಖ್ಯೆ ಕಡಿಮೆಯಾಗುತ್ತದೆ. ಟೈಪ್ 2 ಮಧುಮೇಹ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ. ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಾದರೆ, ದೇಹವು ಹೆಚ್ಚಿನ ಪೋಷಕಾಂಶಗಳನ್ನು ಹೀರಿಕೊಳ್ಳುತ್ತದೆ. ಇದು ದೇಹದಲ್ಲಿ ಶಕ್ತಿಯ ಮಟ್ಟ ಹೆಚ್ಚಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ತ್ರಾಣ ಹೆಚ್ಚಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
