Latest Updates
-
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?
ಥೈರಾಯ್ಡ್ ಸಮಸ್ಯೆ ನಿಯಂತ್ರಿಸಲು ಓಟ್ಸ್ ಸಹಕಾರಿಯೇ?
ನಮ್ಮ ದೇಹದ ಕುತ್ತಿಗೆ ಭಾಗದಲ್ಲಿರುವ ಥೈರಾಯ್ಡ್ ಗ್ರಂಥಿ ಯಾವಾಗ ಸರಿಯಾದ ರೀತಿಯಲ್ಲಿ ಥೈರಾಯ್ಡ್ ಹಾರ್ಮೋನ್‌ಗಳನ್ನು ಉತ್ಪಾದನೆ ಮಾಡುವುದಿಲ್ಲವೋ ಆವಾಗ ಥೈರಾಯ್ಡ್ ಸಮಸ್ಯೆ ಉಂಟಾಗುವುದು. ಥೈರಾಯ್ಡ್ ಸಮಸ್ಯೆಯಲ್ಲಿ ಎರಡು ವಿಧ
1. ಹೈಪೋಥೈರಾಯ್ಡ್: ನಿಗದಿತ ಪ್ರಮಾಣಕ್ಕಿಂತ ಕಡಿಮೆ ಥೈರಾಯ್ಡ್ ಹಾರ್ಮೋನ್‌ಗಳು ಉತ್ಪತ್ತಿಯಾಗುವುದು
2. ಹೈಪರ್ ಥೈರಾಯ್ಡ್: ಥೈರಾಯ್ಡ್ ಹಾರ್ಮೋನ್‌ಗಳು ಅಧಿಕ ಉತ್ಪತ್ತಿಯಾಗುವುದು. ಎರಡೂ ಶರೀರಕ್ಕೆ ಒಳ್ಳೆಯದಲ್ಲ. ಈ ರೀತಿಯಾದಾಗ ಸೂಕ್ತ ಔಷಧಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಆಹಾರಗಳು ಕೂಡ ಥೈರಾಯ್ಡ್ ಹಾರ್ಮೋನ್ ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ, ಅಂಥ ಆಹಾರಗಳಲ್ಲೊಂದು ಓಟ್ಸ್.

ಥೈರಾಯ್ಡ್ ಸಮಸ್ಯೆ ಇರುವವರು ಓಟ್ಸ್ ತಿನ್ನುವುದರಿಂದ ಈ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು:
ಜೀರ್ಣಕ್ರಿಯೆಗೆ ತುಂಬಾನೇ ಒಳ್ಳೆಯದು: ಥೈರಾಯ್ಡ್ ಸಮಸ್ಯೆ ಇರುವವರಿಗೆ ಕಾಡುವ ಬಹುದೊಡ್ಡ ಸಮಸ್ಯೆಯೆಂದರೆ ಚಯಪಚಯ ಕ್ರಿಯೆ ಸರಿಯಾಗಿ ನಡೆಯದಿರುವುದು. ಹೈಪೋಥೈರಾಯ್ಡ್ ಸಮಸ್ಯೆಯಿದ್ದರೆ ಮಲಬದ್ಧತೆ ಸಮಸ್ಯೆ ಉಂಟಾಗುವುದು. ಈ ಬಗೆಯ ಸಮಸ್ಯೆ ತಡೆಗಟ್ಟಲು ಓಟ್ಸ್ ತುಂಬಾನೇ ಸಹಕಾರಿ.
ಪೋಷಕಾಂಶಗಳು ಚೆನ್ನಾಗಿದೆ
ಓಟ್ಸ್‌ನಲ್ಲಿ ವಿಟಮಿನ್ ಬಿ6,ಬಿ12 ಇರುವುದರಿಂದ ಚಯಪಚಯ ಕ್ರಿಯೆಗೆ ತುಂಬಾನೇ ಒಳ್ಳೆಯದು. ಅಲ್ಲದೆ ಓಟ್ಸ್‌ನಲ್ಲಿ ಮೆಗ್ನಿಷ್ಯಿಯಂ, ಕ್ಯಾಲ್ಸಿಯಂ, ಕಬ್ಬಿಣದಂಶ ಮುಂತಾದ ಅಂಶಗಳಿರುವುದರಿಂದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಹಾರ್ಮೋನ್‌ಗಳನ್ನು ನಿಯಂತ್ರಣದಲ್ಲಿಡುತ್ತದೆ
ನೀವು ಓಟ್ಸ್ ಸೇವನೆ ಮಾಡುವುದರಿಂದ ಥೈರಾಯ್ಡ್ ಹಾರ್ಮೋನ್‌ಗಳನ್ನು ನಿಯಂತ್ರಣದಲ್ಲಿಡಲು ಸಹಕಾರಿ. ಇದರಲ್ಲಿ ವಿಟಮಿನ್ ಬಿ, ಇ, ಸತು, ತಾಮ್ರದಂಶ, ಮೆಗ್ನಿಷ್ಯಿಯಂ, ಕಬ್ಬಿಣದಂಶ ಇರುವುದರಿಂದ ಥೈರಾಯ್ಡ್ ಹಾರ್ಮೋನ್‌ಗಳು ಸಮತೋಲನದಲ್ಲಿಡಲು ತುಂಬಾನೇ ಸಹಕಾರಿ. ಅಲ್ಲದೆ ಓಟ್ಸ್‌ನಲ್ಲಿ ಅಯೋಡಿಯನ್ ಅಂಶ ಕೂಡ ಇರುವುದರಿಂದ ಥೈರಾಯ್ಡ್ ಗ್ರಂಥಿ ಸರಿಯಾಗಿ ಕಾರ್ಯನಿರ್ವಹಿಸಲು ತುಂಬಾನೇ ಸಹಕಾರಿ.
ತಲೆಸುತ್ತು ಕಡಿಮೆಯಾಗುವುದು
ಥೈರಾಯ್ಡ್ ಸಮಸ್ಯೆ ಇರುವವರಿಗೆ ಬ್ಲ್ಯಾಕ್ಔಟ್ ಅಂದರೆ ಕೂತು ಎದ್ದು ನಿಲ್ಲುವಾಗ ಇದ್ದಕ್ಕಿದ್ದಂತೆ ಕಣ್ಣು ಕತ್ತಲೆ ಬರುವುದು. ಓಟ್ಸ್‌ನಲ್ಲಿ ಕಾರ್ಬೋಹೈಟ್ರೇಟ್ಸ್ ಇದ್ದು ಇದು ನಿಧಾನಕ್ಕೆ ಜೀರ್ಣವಾಗುವುದರಿಂದ ದೇಹದಲ್ಲಿ ಕಾಪಾಡಲು ಸಹಕಾರಿ. ಅಲ್ಲದೆ ಥೈರಾಯ್ಡ್ ಸಮಸ್ಯೆ ಇದ್ದರೆ ಸ್ನಾಯುಗಳು ದುರ್ಬಲವಾಗುವುದು, ಸ್ನಾಯುಗಳಲ್ಲಿ ಶಕ್ತಿ ತುಂಬಲು ಓಟ್ಸ್ ತುಂಬಾನೇ ಸಹಕಾರಿ.
ರಕ್ತದೊತ್ತಡ ನಿಯಂತ್ರಿಸಲು ಸಹಕಾರಿ
ಓಟ್ಸ್‌ನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾನೇ ಕಡಿಮೆ ಇದೆ. ಇದರಿಂದ ದೇಹದಲ್ಲಿ ಸಕ್ಕರೆಯಂಶ ಬೇಗನೆ ಹೆಚ್ಚು ಮಾಡುವುದಿಲ್ಲ, ಈ ಕಾರಣಕ್ಕೆ ಕೂಡ ಓಟ್ಸ್ ತುಂಬಾನೇ ಸಹಕಾರಿಯಾಗಿದೆ.
ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ
ಥೈರಾಯ್ಡ್ ಹಾರ್ಮೋನ್‌ಗಳಲ್ಲಿ ವ್ಯತ್ಯಾಸ ಉಂಟಾದಾಗ ಆಕ್ಸಿಡೇಟಿವ್ ಸ್ಟ್ರೆಸ್ ಉಂಟಾಗುವುದು. ಅಲ್ಲದೆ ದೇಹದ ಇತರ ಅಂಗಾಂಗಗಳಿಗೂ ಇದರಿಂದ ಹಾನಿ ಉಂಟಾಗುವುದು, ಇದನ್ನು ತಡೆಗಟ್ಟಲು ಸಹಕಾರಿಯಾಗಿದೆ.
ಮೈ ತೂಕ ನಿಯಂತ್ರಿಸುತ್ತದೆ
ಹೈಪೋಥೈರಾಯ್ಡ್ ಸಮಸ್ಯೆ ಇರುವವರಿಗೆ ಮೈ ತೂಕ ತುಂಬಾನೇ ಹೆಚ್ಚಾಗುವುದು. ಓಟ್ಸ್ ತಿನ್ನುವ ಮೂಲಕ ಮೈ ತೂಕ ತುಂಬಾ ಹೆಚ್ಚಾಗುವುದನ್ನು ತಡೆಗಟ್ಟಬಹುದು. ಹೀಗೆ ಥೈರಾಯ್ಡ್ ಸಮಸ್ಯೆ ಇರುವವರು ತಮ್ಮ ಆಹಾರಕ್ರಮದಲ್ಲಿ ಓಟ್ಸ್ ಸೇರಿಸಿದರೆ ತುಂಬಾನೇ ಪ್ರಯೋಜನ ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications