Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಕೊತ್ತಂಬರಿ ನೀರು ಕುಡಿಯುವುದರಿಂದ ದೊರೆಯುವ 9 ಗುಣಗಳಿವು
ಬೇಸಿಗೆಗಾಲ ಇನ್ನಷ್ಟೇ ಶುರುವಾಗಬೇಕಾಗಿದೆ, ಆದರೆ ಬಿಸಿಲಿನ ಧಗೆ ಮಾತ್ರ ಫೆಬ್ರವರಿ ತಿಂಗಳಿನಿಂದಲೇ ಶುರುವಾಗಿದೆ. ಈ ಸಮಯದಲ್ಲಿ ಆರೋಗ್ಯದ ಕಡೆಗೆ ಗಮನಹರಿಸುವುದು ಒಳ್ಳೆಯದು. ದೇಹವನ್ನು ತಂಪಾಗಿಡುವುದರ ಜೊತೆಗೆ ಹತ್ತು ಹಲವು ಗುಣಗಳುಕೊತ್ತಂಬರಿ ಬೀಜದ ನೀರಿನಲ್ಲಿದೆ. ಕೊತ್ತಂಬರಿ ಬೀಜದ ನೀರು ಯಾವಾಗ ಕುಡಿಯಬೇಕು, ಇದರಿಂದ ದೊರೆಯುವ ಪ್ರಯೋಜನಗಳೇನು ಎಂದು ನೋಡೋಣ ಬನ್ನಿ:

ಕೊತ್ತಂಬರಿ ಬೀಜದ ನೀರು
ಕೊತ್ತಂಬರಿ ಬೀಜದ ನೀರು ನೀವು ರಾತ್ರಿ ಸಮಯದಲ್ಲಿ ಅಂದರೆ ಮಲಗುವ ಸ್ವಲ್ಪ ಮುಂಚೆ ಕುಡಿಯುರಿ. ಕೊತ್ತಂಬರಿ ಬೀಜವನ್ನು ಬೆಳಗ್ಗೆ ಒಂದು ಲೋಟ ನೀರಿನಲ್ಲಿ ಹಾಕಿ ಅದನ್ನು ಕುಡಿಯಬಹುದು ಅಥವಾ ಒಂದು ಚಮಚ ಕೊತ್ತಂಬರಿ ಬೀಜವನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ ಕೂಡ ಕುಡಿಯಬಹುದು, ಇದನ್ನು ಕುಡಿಯುವುದರಿಂದ ನಮ್ಮ ಶರೀರಕ್ಕೆ ಈ ಪ್ರಯೋಜನಗಳಿವೆ.....
ದೇಹವನ್ನು ತಂಪಾಗಿಡುತ್ತದೆ
ವಿಪರೀತ ಸೆಕೆ ಅನಿಸುವುದಿಲ್ಲ, ದೇಹವನ್ನು ತಂಪಾಗಿಡುವಲ್ಲಿ ಸಹಕಾರಿಯಾಗಿದೆ. ಇದರಿಂದ ರಾತ್ರಿ ಮಲಗುವಾಗ ಕಾಡು ಅಸ್ವಸ್ಥತೆ ತಡೆಗಟ್ಟಬಹುದು. ಬೇಸಿಗೆಯಲ್ಲಿ ಇದರ ಪಾನೀಯ ತುಂಬಾ ಒಳ್ಳೆಯದು.
ಜೀರ್ಣಕ್ರಿಯೆಗೆ ಒಳ್ಳೆಯದು
ಅಜೀರ್ಣ ಸಮಸ್ಯೆ ಇರುವವರು ಕೊತ್ತಂಬರಿ ಬೀಜದ ನೀರು ರಾತ್ರಿ ಹೊತ್ತಿನಲ್ಲಿ ಕುಡಿದು ಮಲಗಿದರೆ ಬೆಳಗ್ಗೆ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ, ಹೊಟ್ಟೆಯ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ದೇಹದಲ್ಲಿರುವ ಬೇಡದ ಕಶ್ಮಲ ಹೊರ ಹಾಕುತ್ತದೆ
ದೇಹವನ್ನು ಡಿಟಾಕ್ಸ್ ಮಾಡಲು ಈ ನೀರು ಸಹಕಾರಿಯಾಗಿದೆ, ಇದು ರಕ್ತವನ್ನು ಶುದ್ಧೀಕರಿಸುತ್ತದೆ, ಬೇಡದ ಕಶ್ಮಲ ಹೊರ ಹಾಕಲು ಸಹಾಯ ಮಾಡುತ್ತದೆ. ಕಿಡ್ನಿಯ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿ
ಮಧುಮೇಹಿಗಳಿಗೂ ಈ ನೀರು ತುಂಬಾನೇ ಒಳ್ಳೆಯದು, ಇನ್ಸುಲಿನ್ ಸರಿಯಾದ ಪ್ರಮಾಣದಲ್ಲಿ ಉತ್ಪತ್ತಿಯಾಗಲು ಹಾಗೂ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.
ಹೃದಯ ಆರೋಗ್ಯಕ್ಕೆ ಒಳ್ಳೆಯದು
ಕೊತ್ತಂಬರಿ ಬೀಜದ ನೀರು ಕೊಲೆಸ್ಟ್ರಾಲ್ ಕಡಿಮ ಮಾಡುತ್ತದೆ, ಇದರಿಂದ ರಕ್ತಸಂಚಾರ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ, ಹೃದಯ ಆರೋಗ್ಯ ತುಂಬಾ ಉತ್ತಮವಾಗಿರಲಿದೆ.
ತ್ವಚೆಯ ಆರೋಗ್ಯಕ್ಕೆ ಒಳ್ಳೆಯದು
ಕೊತ್ತಂಬರಿ ಬೀಜದ ನೀರು ತ್ವಚೆಯ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು, ತ್ವಚೆಯ ಹೊಳಪು ಹೆಚ್ಚಿಸುತ್ತದೆ.
ಮುಟ್ಟಿನ ಸಮಯದಲ್ಲಿ ಕಾಡುವ ನೋವು ಕಡಿಮೆಯಾಗುವುದು
ಕೆಲವು ಹೆಣ್ಮಕ್ಕಳಿಗೆ ಮುಟ್ಟಿನ ಸಮಯದಲ್ಲಿ ತುಂಬಾ ನೋವುಂಟಾಗುವುದು. ಈ ನೀರು ಕುಡಿಯುವುದರಿಂದ ಹೊಟ್ಟೆನೋವು ಕಡಿಮೆಯಾಗುವುದು. ಕೊತ್ತಂಬರಿ ಬೀಜ, ಮೆಂತೆ, ಜೀರಿಗೆ ಕೂಡ ಹಾಕಿ ಕುದಿಸಿ ಆ ನೀರು ಕುಡಿದರೆ ಆ ನೀರು ಮುಟ್ಟಿನ ನೋವು ಕಡಿಮೆ ಮಾಡಲು ಸಹಕಾರಿಯಾಗಿದೆ.
ಕಿಡ್ನಿಯ ಆರೋಗ್ಯಕ್ಕೆ ಒಳ್ಳೆಯದು
ಕೊತ್ತಂಬರಿ ನೀರು ಕುಡಿಯುವುದರಿಂದ ದೇಹದಲ್ಲಿರುವ ಕಶ್ಮಲವನ್ನು ಹೊರ ಹಾಕುವುದರಿಂದ ಕಿಡ್ನಿಯ ಆರೋಗ್ಯಕ್ಕೆ ಒಳ್ಳೆಯದು, ಕಿಡ್ನಿ ತನ್ನ ಕಾರ್ಯ ಉತ್ತಮವಾಗಿ ನಿರ್ವಹಿಸಲು ಸಹಕಾರಿಯಾಗಿದೆ.
ಬರಿ ಇಷ್ಟೇ ಇಲ್ಲ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ, ಥೈರಾಯ್ಡ್ ಹಾರ್ಮೋನ್‌ಗಳಿಗೂ ಒಳ್ಳೆಯದು, ಇನ್ನು ಇದರಿಂದ ಕಾಫಿ ಮಾಡಿ ಕುಡಿಯಬಹುದು. ಕಾಫಿ ಮಾಡಿ ಕುಡಿಯುವುದಾದರೆ ಸಂಜೆ ಹೊತ್ತಿಗೆ ಕುಡಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications