Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಬೆಳಗ್ಗೆ ಎದ್ದ ತಕ್ಷಣ ಕಾಫಿ-ಟೀ ಬದಲು ಈ 4 ಪಾನೀಯ ಒಳ್ಳೆಯದು!
ಅನೇಕರಿಗೆ ಬೆಳಗ್ಗೆ ಎದ್ದ ತಕ್ಷಣ ಕಾಫಿ ಅಥವಾ ಟೀ ಕುಡಿಯವ ಚಟ ಇರುತ್ತದೆ. ಎಷ್ಟರ ಮಟ್ಟಿಗೆ ಎಂದರೆ ಕಾಫಿ ಅಥವಾ ಟೀ ಕುಡಿಯದೇ ಹೋದರೆ ಅವರಿಗೆ ಯಾವುದೇ ಕೆಲಸವನ್ನು ಕೂಡ ಮಾಡೋದಕ್ಕೆ ಸಾಧ್ಯವಾಗೋದಿಲ್ಲ. ಎಷ್ಟರ ಮಟ್ಟಿಗೆ ಎಂದರೆ ಟೀ ಅಥವಾ ಕಾಫಿಗೆ ಅಡಿಕ್ಟ್ ಆಗಿರ್ತಾರೆ. ಹೀಗಾಗಿ ಕಾಪೀ ಅಥವಾ ಟೀ ಅವರಿಗೆ ಒಂದು ರೀತಿ ಎನರ್ಜಿ ಡ್ರಿಂಕ್ ಇದ್ದ ಹಾಗೆ. ಅದನ್ನು ಕುಡಿದೇ ಮುಂದಿನ ಕೆಲಸ ಮಾಡೋದು.

ಆದರೆ ನಿಮಗೊತ್ತಾ ಈ ಕಾಫಿ ಅಥವಾ ಟೀ ಇದ್ಯಲ್ಲ ಇದು ಆರೋಗ್ಯದ ದೃಷ್ಟಿಯಿಂದ ತುಂಬಾನೇ ಅಪಾಯಕಾರಿ. ನಿತ್ಯವೂ ಅದ್ರಲ್ಲೂ ಬೆಳ ಬೆಳಗ್ಗೆ ಇದನ್ನು ಕುಡಿಯೋದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹೀಗಾಗಿ ಇವುಗಳ ಬದಲಾಗಿ ನೀವು ಈ 4 ಪಾನೀಯಗಳನ್ನು ಬೆಳಗ್ಗೆ ಎದ್ದ ತಕ್ಷಣ ಕುಡಿದ್ರೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಅಷ್ಟಕ್ಕೂ ಆ ನಾಲ್ಕು ಪಾನೀಯಗಳು ಯಾವುದು ಅನ್ನೋದನ್ನು ನೋಡೋಣ.
ನೀರಿಗೆ ಅರಶಿಣ ಮತ್ತು ಕರಿ ಮೆಣಸು ಸೇರಿಸಿ!
ಬೆಳಿಗ್ಗೆ ಎದ್ದ ತಕ್ಷಣ 2-3 ಚಿಟಿಕೆ ಅರಿಶಿನ ಮತ್ತು ಕರಿಮೆಣಸು ಬೆರೆಸಿದ ಬೆಚ್ಚಗಿನ ನೀರನ್ನು ಕುಡಿಯುವುದು ನಿಮ್ಮ ಚಯಾಪಚಯ ಶಕ್ತಿಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೇ, ನಿಮ್ಮ ದೇಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ.
ಬಿಸಿ ನೀರಿಗೆ ಜೀರಿಗೆ ಸೇರಿಸಿರಿ!
2 ಕಪ್ ನೀರು ತೆಗೆದುಕೊಂಡು ಅದಕ್ಕೆ ಚಿಟಿಕೆ ಜೀರಿಗೆ ಸೇರಿಸಿ ಅದನ್ನು ಚೆನ್ನಾಗಿ ಕುದಿಸಿರಿ. ನೀರು ಕುದಿದು ಅರ್ಥಕ್ಕೆ ಬರುವಂತೆ ನೋಡಿಕೊಳ್ಳಿ. ಆ ನಂತರ ಅದನ್ನು ಇಳಿಸಿರಿ. ಆ ನಂತರ ಅದನ್ನು ಫಿಲ್ಟರ್ ಮಾಡಿ ಮತ್ತು ನಿಧಾನವಾಗಿ ಕುಡಿಯಿರಿ. ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಮತ್ತು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯೂ ವೇಗವಾಗಿ ಆಗುತ್ತದೆ.
ನಿಂಬೆ ಪಾನಕ ತಯಾರಿಸಿ!
ಬಿಸಿ ನೀರಿಗೆ ಅರ್ಧ ನಿಂಬೆ ಹಿಂಡಿ. ಇದರ ಹುಳಿ ರುಚಿ ನಿಮಗೆ ಇಷ್ಟವಾಗದಿದ್ದರೆ ಜೇನುತುಪ್ಪವನ್ನು ಕೂಡ ಬೆರೆಸಬಹುದು. ಇದರ ಜೊತೆಗೆ ದಾಲ್ಚಿನ್ನಿ ಕೂಡ ಸೇರಿಸಿ. ಈ ಪಾನೀಯವನ್ನು ಕುಡಿಯುವುದರಿಂದ ದೇಹದಿಂದ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಮತ್ತು ಚರ್ಮಕ್ಕೆ ಹೊಳಪನ್ನು ನೀಡುತ್ತದೆ.
ಬೆಳಗ್ಗೆ ಎದ್ದ ತಕ್ಷಣ ಬಿಸಿ ನೀರನ್ನು ಕುಡಿಯಿರಿ!
ನೀವು ಆರೋಗ್ಯವಾಗಿ ಇರಬೇಕೆಂದರೆ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಸರಳ ಅಥವಾ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಇದು ನಿಮ್ಮ ದೇಹವನ್ನು ಹೈಡ್ರೇಟ್ ಮಾಡುತ್ತದೆ. ಮತ್ತು ನಿಮ್ಮ ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಅಷ್ಟೇ ಅಲ್ಲದೇ, ಇದು ನಿಮ್ಮ ದೇಹದಿಂದ ವಿಷವನ್ನು ಹೊರಹಾಕಲು ಸಹ ಸಹಾಯ ಮಾಡುತ್ತದೆ.
ಒಂದು ವೇಳೆ ನೀವು ಬೆಳಿಗ್ಗೆ ಎದ್ದ ತಕ್ಷಣ ಚಹಾ ಅಥವಾ ಕಾಫಿ ಕುಡಿಯದೆ ನಿಮ್ಮ ಕೆಲಸ ಸಾಧ್ಯವೇ ಇಲ್ಲ ಅಂತಿದ್ದರೆ ಚಹಾ ಅಥವಾ ಕಾಫಿ ಕುಡಿಯುವ ಮೊದಲು ನೆನೆಸಿದ ಬಾದಾಮಿ ಅಥವಾ ಕುಂಬಳಕಾಯಿ ಬೀಜಗಳಂತಹ ಕೆಲವು ಬೀಜಗಳನ್ನು ತಿನ್ನಲು ಪ್ರಯತ್ನಿಸಿ. ಅಷ್ಟೇ ಅಲ್ಲದೇ ಇದರ ಬದಲಾಗಿ ತಾಜಾ ಹಣ್ಣುಗಳನ್ನೂ ಸೇವಿಸಬಹುದು. ಇವುಗಳು ಆರೋಗ್ಯಕ್ಕೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
