Latest Updates
-
ಅಕ್ಷಯ ತೃತೀಯ: ಮದುವೆ ಮತ್ತು ಚಿನ್ನದ ಖರೀದಿಗೆ ಹೀಗೆ ಪ್ಲಾನ್ ಮಾಡಿ -
ಮನೆಯನ್ನು ತಂಪಾಗಿಡಲು ಹೀಟ್ವೇವ್ ಸಮಯದಲ್ಲಿ ಈ ಟ್ರಿಕ್ಸ್ ಫಾಲೋ ಮಾಡಿ -
ಮಾವಿನ ಹಣ್ಣು ಖರೀದಿಸುವ ಮುನ್ನ ಈ ತಪ್ಪು ಮಾಡಬೇಡಿ! -
ಅಕ್ಷಯ ತೃತೀಯ ಚಿನ್ನದ ಖರೀದಿ: ಈ ಆಫರ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಯಲ್ಲೂ ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಮನೆಯಲ್ಲೇ ಮಾಡಿದ ಈ ಪಾನೀಯಗಳನ್ನು ಕುಡಿಯೋದ್ರಿಂದ ಬಿಪಿ ನಿಯಂತ್ರಣದಲ್ಲಿರುತ್ತೆ!
ಅಧಿಕ ರಕ್ತದೊತ್ತಡದ ಸಮಸ್ಯೆ ಸಾಮಾನ್ಯವಾಗಿ ಹೆಚ್ಚಿನ ಜನರಿಗೆ ಈ ಸಮಸ್ಯೆ ಖಂಡಿತ ಇದ್ದೇ ಇರುತ್ತದೆ. ಇದಕ್ಕಾಗಿ ಜನ ತಮ್ಮ ಜೀವನ ಶೈಲಿಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳುತ್ತಾರೆ. ನಿರಂತರ ವ್ಯಾಯಾವನ್ನು ಮಾಡುತ್ತಾರೆ. ದಿನ ನಿತ್ಯ ಈ ರೀತಿಯ ಚಟುವಟಿಕೆಗಳನ್ನು ಮಾಡೋದ್ರಿಂದ ಖಂಡಿತ ಇದು ಹೃದಯದ ರಕ್ತನಾಳವನ್ನು ಆರೋಗ್ಯವಾಗಿರಿಸಲು ಸಹಾಯ ಮಾಡುತ್ತದೆ.
ಇದ್ರ ಜೊತೆಗೆ ನೀವು ಮನೆಯಲ್ಲೇ ತಯಾರಿಸಿದ ಪಾನೀಯಗಳನ್ನು ಕುಡಿಯೋದ್ರಿಂದ ಕೂಡ ರಕ್ತದೊತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳೋದಕ್ಕೆ ಸಾಧ್ಯವಾಗುತ್ತದೆ. ಅಷ್ಟಕ್ಕು ಆ ಪಾನೀಯಗಳು ಯಾವುದು ಅನ್ನೋದನ್ನು ತಿಳಿಯೋಣ. ಜೊತೆಗೆ ಇದ್ರಿಂದ ರಕ್ತದೊತ್ತಡದ ಸಮಸ್ಯೆಗೆ ಯಾವ ರೀತಿ ಪರಿಹಾರ ಸಿಗುತ್ತೆ ಅನ್ನೋದನ್ನು ತಿಳಿಯೋಣ.

1. ಕೆನೆರಹಿತ ಹಾಲು
ಕೆನೆರಹಿತ ಹಾಲು ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಅನ್ನು ಹೊಂದಿರುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುವ ಖನಿಜಗಳು ಇದ್ರಲ್ಲಿದೆ. ದಿನಕ್ಕೆ 1 ರಿಂದ 2 ಗ್ಲಾಸ್ ಕೆನೆರಹಿತ ಹಾಲನ್ನು ಕುಡಿಯೋದ್ರಿಂದ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳಿಂದ ದೃಢಪಟ್ಟಿದೆ. ರಕ್ತದೊತ್ತಡ ಸಾಮಾನ್ಯವಾಗಿ 55 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಲ್ಲಿ ಕಂಡುಬರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಿಗೆ ಬಹು ಬೇಗನೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಕೆನೆ ರಹಿತ ಹಾಲು ಕುಡಿಯೋದ್ರಿಂದ ಕೇವಲ 4 ವಾರಗಳಲ್ಲಿ ನೀವು ಬದಲಾವಣೆಗಳನ್ನು ಕಾಣುತ್ತೀರಿ.
2.ಟೊಮೊಟೋ ಜ್ಯೂಸ್
ಟೊಮೆಟೋ ಲೈಕೋಪೀನ್‌ನಂತಹ ಉತ್ಕರ್ಷಣ ನಿರೋಧಕ ಹುಣಗಳನ್ನು ಹೊಂದಿರುತ್ತವೆ. ಇದ್ರಿಂದ ಅನೇಕ ಪ್ರಯೋಜನ್ಳು ಕೂಡ ಇದೆ. ವೈಜ್ಞಾನಿಕ ಅಧ್ಯಯನವೊಂದರ ಪ್ರಕಾರ ಟೊಮೆಟೋ ರಸವನ್ನು ಸೇವಿಸೋದ್ರಿಂದ ಸಂಕೋಚನದ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತಂತೆ. 55 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ದಿನಕ್ಕೆ 200 ಮಿಲಿ (1 ಕಪ್‌ಗಿಂತ ಸ್ವಲ್ಪ ಕಡಿಮೆ) ಟೊಮೆಟೋ ರಸವನ್ನು ಸೇವಿಸೋದ್ರಿಂದ ಮಹತ್ತರ ಬದಲಾವಣೆ ಕಂಡು ಬರುತ್ತಂತೆ.
3. ಬೀಟ್‌ರೂಟ್ ಜ್ಯೂಸ್
ಬೀಟ್‌ರೂಟ್ ಜ್ಯೂಸ್ ನಲ್ಲಿ ನೈಟ್ರೇಟ್ ಅಂಶ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇದು ದೇಹದಲ್ಲಿ ರಕ್ತದ ಹರಿವನ್ನು ಸುಧಾರಿಸಲು ನೆರವಾಗುತ್ತದೆ.ಅಧ್ಯಯನಗಳ ಪ್ರಕಾರ ದಿನದಲ್ಲಿ ಎರಡು ಕಪ್ ಬೀಟ್‌ರೂಟ್ ಜ್ಯೂಸ್ ಕುಡಿದವರಲ್ಲಿ ರಕ್ತದೊತ್ತಡದ ಸಮಸ್ಯೆ ನಿಯಂತ್ರಣದಲ್ಲಿಡುತ್ತೆ ಎಂದು ಸಾಬೀತಾಗಿದೆ. ಹೀಗಾಗಿ ನಿತ್ಯ ಬೀಟ್‌ರೂಟ್ ಜ್ಯೂಸ್ ಕುಡಿಯೋದ್ರಿಂದ ಆರೋಗ್ಯದ ದೃಷ್ಟಿಯಿಂದ ತುಂಬಾನೇ ಒಳ್ಳೆಯದು.
4. ದಾಸವಾಳದ ಟೀ
ದಾಸವಾಳದ ಚಹಾವು ಆಂಥೋಸಯಾನಿನ್ ಎಂಬ ಉತ್ಕರ್ಷಣ ನಿರೋಧಕ ಗುಣವನ್ನು ಹೊಂದಿರುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯಿಂದ ದೃಢಪಟ್ಟಿದೆ. ಪ್ರತಿದಿನ 2 ಕಪ್ ದಾಸವಾಳದ ಚಹಾವನ್ನು ಕುಡಿಯಬೇಕು. ಈ ರೀತಿ ನಾಲ್ಕು ವಾರಗಳ ಕಾಲ ಕುಡಿದರೆ ಇದರ ಉತ್ತಮ ಫಲಿತಾಂಶವನ್ನು ಕಾಣಬಹುದು.
5. ದಾಳಿಂಬೆ ಜ್ಯೂಸ್
ದಾಸವಾಳದಂತೆಯೇ, ದಾಳಿಂಬೆ ರಸವು ಆಂಥೋಸಯಾನಿನ್ ಗುಣಗಳನ್ನು ಹೊಂದಿರುತ್ತದೆ. ಮತ್ತು ಇದು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಅಧ್ಯಯನದ ಪ್ರಕಾರ 2 ವಾರಗಳ ಕಾಲ ಪ್ರತಿದಿನ ಸುಮಾರು ¼ ಕಪ್ ಅಥವಾ ಅದಕ್ಕಿಂತ ಹೆಚ್ಚು ದಾಳಿಂಬೆ ರಸವನ್ನು ಸೇವಿಸಿದ ಪುರುಷರಲ್ಲಿ ರಕ್ತದೊತ್ತಡದ ಪ್ರಮಾಣ ಕಡಿಮೆಯಾಗಿರೋದು ಕಂಡು ಬಂದಿದೆ.
6. ದ್ರಾಕ್ಷಿ ಜ್ಯೂಸ್
ದ್ರಾಕ್ಷಿಹಣ್ಣಿನಲ್ಲಿ ಪೊಟ್ಯಾಸಿಯಮ್, ಲೈಕೋಪೀನ್, ಫೈಬರ್ ಮತ್ತು ಇತರ ನೈಸರ್ಗಿಕ ಸಸ್ಯ ಪೋಷಕಾಂಶಗಳನ್ನು ಹೊಂದಿರುತ್ತದೆ. ಅದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಹೀಗಾಗಿ ದಿನನಿತ್ಯ ದ್ರಾಕ್ಷಿ ಹಣ್ಣಿನ ಜ್ಯೂಸ್ ಕುಡಿದ್ರೆ ಆರೋಗ್ಯದ ದೃಷ್ಟಿಯಿಂದ ತುಂಬಾನೇ ಒಳ್ಳೆಯದು.
7. ತೆಂಗಿನ ನೀರು
ತೆಂಗಿನ ನೀರಿನಲ್ಲಿ ಪೊಟ್ಯಾಸಿಯಮ್‌ನಲ್ಲಿ ಸಮೃದ್ಧವಾಗಿರುವ ಕಾರಣ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತಂತೆ. ಎಲೆಕ್ಟ್ರೋಲೈಟ್‌ಗಳಿಂದ ತುಂಬಿರುವ ಈ ನೈಸರ್ಗಿಕ ಪಾನೀಯವು ಮೂತ್ರಪಿಂಡಗಳು ಹೆಚ್ಚಿನ ಸೋಡಿಯಂ ಮಟ್ಟವನ್ನು ದೇಹದಿಂದ ಹೊರಹಾಕಲು ಸಹಾಯ ಮಾಡುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಅತ್ಯಗತ್ಯವಾಗಿದೆ. ಹೆಚ್ಚಿನ ಪೊಟ್ಯಾಸಿಯಮ್ ಅಂಶವು ದೇಹದ ಒಟ್ಟಾರೆ ನಾಳೀಯ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಪಾರ್ಶ್ವವಾಯು ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
ಈ ಪಾನೀಯಗಳನ್ನು ನೀವು ಮನೆಯಲ್ಲಿಯೇ ಸುಲಭವಾಗಿ ತಯಾರಿಸಿ ಕುಡಿಯಬಹುದು. ಇದರಿಂದ ರಕ್ತದೊತ್ತಡ ಕಡಿಮೆಯಾಗುವುದು ಮಾತ್ರವಲ್ಲದೇ ಯಾವುದೇ ರೀತಿ ಅಡ್ಡ ಪರಿಣಾಮಗಳು ಆಗೋದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











