Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ಐದು ಮುಖ್ಯ ಆಹಾರ

ಆದ್ದರಿಂದ ಕೊಲೆಸ್ಟ್ರಾಲ್ ಕಡಿಮೆ ಮಾಡಿಕೊಳ್ಳುವತ್ತ ಯೋಚಿಸಲೇಬೇಕಾದ ಅಗತ್ಯವಿದೆ. ಹಾಗೆಂದು ಊಟ ತ್ಯಜಿಸುವ ಅವಶ್ಯಕತೆ ಇಲ್ಲ. ನಿಮ್ಮ ದಿನ ನಿತ್ಯದ ಆಹಾರದಲ್ಲಿ ಈ ಐದನ್ನು ಸೇರಿಸಿಕೊಂಡರೆ ಕೊಲೆಸ್ಟ್ರಾಲ್ ಕಡಿಮೆ ಮಾಡಿಕೊಳ್ಳುವುದು ಸುಲಭ.
ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ಐದು ಪ್ರಮುಖ ಆಹಾರಗಳು:
1. ಆಲಿವ್ ಎಣ್ಣೆ: ಅಧಿಕ ಪ್ರಮಾಣದ ಕೊಲೆಸ್ಟ್ರಾಲ್ ಕಡಿಮೆಗೊಳಿಸುವಲ್ಲಿ ಆಲಿವ್ ಎಣ್ಣೆ ತುಂಬಾ ಉಪಯೋಗ. ಇದ್ದಕ್ಕಿದ್ದಂತೆ ತೂಕ ಹೆಚ್ಚಾಗುವ ಮತ್ತು ತುಂಬಾ ಕೊಲೆಸ್ಟ್ರಾಲ್ ಹೊಂದಿರುವ ಜನರಿಗೆ ಎಣ್ಣೆಯಂಶವಿರುವ ಆಹಾರದ ಬದಲು ಆಲಿವ್ ಎಣ್ಣೆ ಬಳಸಿರುವ ಪದಾರ್ಥಗಳನ್ನು ಸೇವಿಸಲು ಸಲಹೆ ನೀಡಲಾಗುತ್ತದೆ. ಹಾಗೆಯೇ ಆಲಿವ್ ಎಣ್ಣೆ ಹೃದಯದ ಆರೋಗ್ಯಕ್ಕೂ ಒಳ್ಳೆಯದು.
2. ಮೀನು: ಮೀನಿನಲ್ಲಿ ರಕ್ತದಲ್ಲಿ ಹೆಚ್ಚಾಗುವ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆಗೊಳಿಸುವ ಒಮೆಗಾ 3 ಫ್ಯಾಟಿ ಆಸಿಡ್ ಇರುವುದರಿಂದ ಮೀನಿನ ಸೇವನೆ ಅತ್ಯುತ್ತಮ. ಅಷ್ಟೇ ಅಲ್ಲದೆ ಇದು ಹೃದಯಕ್ಕೂ ಒಳ್ಳೆಯದು, ರಕ್ತ ಹೆಪ್ಪುಗಟ್ಟುವುದು ಮತ್ತು ರಕ್ತನಾಳಗಳಿಗೂ ಸಹಾಯ ಮಾಡುತ್ತದೆ.
3. ಓಟ್ಸ್ : ಓಟ್ಸ್ ನಲ್ಲಿರುವ ನಾರಿನಂಶ ದೇಹದಲ್ಲಿರುವ ದುಷ್ಟರಿಣಾಮ ಉಂಟು ಮಾಡುವ ಕೊಬ್ಬನ್ನು ಕಡಿಮೆಗೊಳಿಸಲು ಹೆಚ್ಚು ಉಪಯುಕ್ತ. ರಕ್ತನಾಳಗಳಲ್ಲಿ ಕೊಲೆಸ್ಟ್ರಾಲ್ ಸೇರಿಕೊಳ್ಳುವುದನ್ನು ಓಟ್ಸ್ ನಲ್ಲಿನ ನಾರಿನಂಶ ತಡೆಯುತ್ತದೆ. ಪ್ರತಿದಿನ 10 ಗ್ರಾಂ ಓಟ್ ಸೇವನೆಯಿಂದ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ವೈದ್ಯರು ಸಲಹೆ ನೀಡುತ್ತಾರೆ. ಇದರೊಂದಿಗೆ ನಾರಿನಂಶವಿರುವ ಬೀನ್ಸ್, ಸೇಬು ಮುಂತಾದುವುಗಳ ಸೇವನೆಯೂ ಇರಲಿ.
4. ಅಣಬೆ: ಜಪಾನ್ ನಲ್ಲಿ ಅಣಬೆಯನ್ನು ಕೊಲೆಸ್ಟ್ರಾಲ್ ಕಡಿಮೆ ಮಾಡುವ ಉತ್ತಮ ಸಾಧನವನ್ನಾಗಿ ಬಳಸುತ್ತಾರೆ. ಮಶ್ರೂಮ್ ನಲ್ಲಿರುವ ಲೆಂಟಿನಾನ್ ಎಂಬ ಅಂಶ ಕೆಟ್ಟ ಕೊಬ್ಬನ್ನು ನಿಯಂತ್ರಿಸುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ ದೇಹಕ್ಕೆ ಅನೇಕ ರೋಗಗಳು ತಗುಲುವುದನ್ನೂ ಕಡಿಮೆಗೊಳಿಸುತ್ತದೆ.
5. ಬೆಳ್ಳುಳ್ಳಿ: ಬೆಳ್ಳುಳ್ಳಿಯಲ್ಲಿನ ಅಲಿಸಿನ್ ಎಂಬ ಅಂಶ ರಕ್ತವನ್ನು ತಿಳಿಗೊಳಿಸುತ್ತದೆ. ಇದು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ಅತಿ ಪರಿಣಾಮಕಾರಿ ಮಾರ್ಗವಾಗಿದೆ. ದಿನಕ್ಕೆ ಒಂದು ಎಸಳು ಬೆಳ್ಳುಳ್ಳಿಯನ್ನು ಸೇವಿಸಿದರೆ ಅದು ರಕ್ತದಲ್ಲಿ 10-15 % ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆಗೊಳಿಸುತ್ತದೆ. ಆದ್ದರಿಂದ ದಿನನಿತ್ಯ ಆದಷ್ಟೂ ಬೆಳ್ಳುಳ್ಳಿಯನ್ನು ಅಡುಗೆಯಲ್ಲಿ ಬಳಸಿದರೆ ಸದೃಢ ಆರೋಗ್ಯದೊಂದಿಗೆ ಕೊಬ್ಬನ್ನೂ ಕೂಡ ಕಡಿಮೆ ಮಾಡಿಕೊಳ್ಳಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
