Latest Updates
-
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ!
ಹಗಲು ನಿದ್ದೆಯ ಸಂಗ ಆರೋಗ್ಯಕ್ಕೆ ಭಂಗ

ಆರಿಜೋನ್ ವಿಶ್ವವಿದ್ಯಾಲಯ ನಡೆಸಿದ ಈ ಅಧ್ಯಯನದಿಂದ ನಿದ್ದೆ ನಮ್ಮ ಜೀವನ ಗುಣಮಟ್ಟವನ್ನು ನಿರ್ಧರಿಸುತ್ತದೆ ಎಂಬ ಅಂಶ ತಿಳಿದುಬಂದಿದೆ.ಸುಮಾರು ಐದು ವರ್ಷಗಳ ಅವಧಿ ಹಗಲು ಹೊತ್ತಿನ ನಿದ್ದೆ ನಿಮ್ಮನ್ನು ಹೆಚ್ಚು ಕಾಡುತ್ತಿದೆ ಎಂದಾದರೆ ಅದು ದೈಹಿಕ ಮತ್ತು ಮಾನಸಿಕವಾಗಿ ನೀವು ದುರ್ಬಲಗೊಳ್ಳುತ್ತಿರುವುದರ ಸಂಕೇತ.
ನಿದ್ದೆಗೂ ಮ್ತತು ಜೀವನದ ಗುಣಮಟ್ಟಕ್ಕೂ ಒಂದಕ್ಕೊಂದು ಅವಿನಾಭಾವ ಸಂಬಂಧವಿದೆ. ನಿದ್ದೆಗೆ ಸಂಬಂಧಿಸಿದಂತೆ ನೀವು ತೊಂದರೆಗೆ ಒಳಪಟ್ಟು ಹಗಲು ಹೊತ್ತಿನಲ್ಲಿ ತೂಕಡಿಸಿದರೆ ನಿಮ್ಮ ಜೀವನಮಟ್ಟವೂ ಕಳಪೆಗೊಳ್ಳುತ್ತಾ ಸಾಗುತ್ತದೆ ಎಂದು ಸಂಶೋಧನೆ ತಿಳಿಸಿದೆ.
ನಿದ್ದೆ ಸಮಪ್ರಮಾಣದಲ್ಲಿರದಿದ್ದರೆ ಪುರುಷರಲ್ಲಿ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ತೊಂದರೆ ಮತ್ತು ಮಹಿಳೆಯರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ. ನಿದ್ರಾಹೀನತೆಯಿಂದ ಬರುವ ಸ್ಥೂಲ ಕಾಯತೆ, ಹೃದಯ ರಕ್ತನಾಳ ತೊಂದರೆ ಹಾಗೂ ಉಸಿರಾಟದ ತೊಂದರೆ ಜೀವನದ ಗುಣಮಟ್ಟದಲ್ಲಿ ಒಡಕನ್ನು ಉಂಟುಮಾಡುತ್ತದೆ. ಆದ್ದರಿಂದ ನಿದ್ದೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ನಮ್ಮ ಜೀವನ ಗುಣಮಟ್ಟವೂ ಉತ್ತಮಗೊಳ್ಳುತ್ತದೆ ಎಂದು ಸಂಶೋಧನೆ ವರದಿ ಮಾಡಿದೆ.
ಸುಮಾರು 3,078 ರೋಗಿಗಳ ಮೇಲೆ ನಡೆಸಿದ ಸಂಶೋಧನೆಯಲ್ಲಿ ನಿದ್ದೆ ಹೇಗೆ ಆರೋಗ್ಯದ ಶೈಲಿಯ ಮೇಲೆ ಪರಿಣಾಮ ಬೀರುತ್ತದೆ ಎಂಬುದು ತಿಳಿದುಬಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
