Latest Updates
-
iPhone 18 ಸೇಲ್: ನಿಮ್ಮ ಹೊಸ ಫೋನ್ ಪಡೆಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ದೆಹಲಿ-ಎನ್ಸಿಆರ್ ಮಳೆ ಎಚ್ಚರಿಕೆ: ಹೊರಗೆ ಹೋಗುವ ಬದಲು ಮನೆಯಲ್ಲೇ ಮಾಡಿ 12 ನಿಮಿಷದ ವರ್ಕೌಟ್! -
ಸೆಪ್ಟೆಂಬರ್ 15ರ ಲವ್ ರಾಶಿಫಲ: ನಿಮ್ಮ ಸಂಗಾತಿಯ ಮನ ಗೆಲ್ಲಲು ಈ 2 ನಿಮಿಷದ ಸೂತ್ರ ಬಳಸಿ! -
ಮಳೆಗಾಲದ ಎಚ್ಚರಿಕೆ: ಮುಂಬೈ-ಪುಣೆಯಲ್ಲಿ ಮನೆ ಸೋರಿಕೆ ತಡೆಯಲು 30 ನಿಮಿಷದ ಸಿಂಪಲ್ ಟಿಪ್ಸ್ -
ಅಡುಗೆಮನೆ ಬಜೆಟ್ ಏರಿಕೆ: ₹30 ಕ್ಕಿಂತ ಕಡಿಮೆ ವೆಚ್ಚದಲ್ಲಿ ಆರೋಗ್ಯಕರ ಪ್ರೋಟೀನ್ ಆಹಾರ ಪಡೆಯುವುದು ಹೇಗೆ? -
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ -
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ!
ಮರೆವು ರೋಗಿಗಳಿಗೆ ಬೇಕಿರುವುದು ಪ್ರೀತಿ, ಕಾಳಜಿ

ಆದರೆ ಮರೆವಿನ ರೋಗಕ್ಕೆ ಒಳಗಾಗುವ ರೋಗಿಗಳಿಗೆ ಕೇವಲ ಚಿಕಿತ್ಸೆ ಮಾತ್ರ ಸಾಲದು, ಕುಟುಂಬದ ಪ್ರೀತಿ, ಆರೈಕೆಯೂ ಅಷ್ಟೇ ಮುಖ್ಯ. ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಣ್ಣದೊಂದು ಭರವಸೆಯ ಮಾತು ಅವರ ಮನಕ್ಕೆ ಸಂತೃಪ್ತಿ ತುಂಬಬಹುದು.
2010 ರಲ್ಲಿ ಇಡೀ ವಿಶ್ವದಲ್ಲಿ ಸುಮಾರು 3.7 ಬಿಲಿಯನ್ ಜನರು ಈ ಡೆಮೆಂಶಿಯಾ (ಮರೆವು ರೋಗ, ಮಾನಸಿಕ ಅಸ್ವಸ್ಥತೆ) ದಿಂದ ಬಳಲುತ್ತಿದ್ದು, 2020 ರಷ್ಟಕ್ಕೆ ಈ ಕಾಯಿಲೆಯಿಂದ ಬಳಲುವವರ ಸಂಖ್ಯೆ ದುಪ್ಪಟ್ಟಾಗುತ್ತದೆ ಎಂದು 2010ರ ಡೆಮೆಂಶಿಯಾ ವರದಿ ತಿಳಿದಿದೆ.
ವಯಸ್ಸು ಕಳೆದಂತೆ ಸುಮಾರು 60ರ ನಂತರ ಕಾಣಿಸಿಕೊಳ್ಳುವ ಈ ಕಾಯಿಲೆ ಮೊದಲು ಮರೆಗುಳಿತನ ತಂದು ನಂತರ ಮೆದುಳಿನ ಕೆಲಸವನ್ನು ದುರ್ಬಲಗೊಳಿಸುತ್ತಾ ಸಾಗುತ್ತದೆ. ಅತಿಯಾದ ಮರೆವು, ತಮ್ಮ ಕೆಲಸಗಳನ್ನೂ ಮಾಡಿಕೊಳ್ಳಲು ಅಸಹಾಯಕರಾಗುವುದು, ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗುವುದು ಈ ರೀತಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
ಆದರೆ ಈ ಸಮಯದಲ್ಲಿ ಚಿಕಿತ್ಸೆಯೊಂದಿಗೆ ಮನೆಯವರ ಪ್ರೀತಿ, ವಾತ್ಸಲ್ಯ ರೋಗಿಗಳಿಗೆ ಹೆಚ್ಚಿನ ಅವಶ್ಯಕತೆಯಾಗಿರುತ್ತದೆ, ಅವರಗೆ ಒಂಟಿ ಎನ್ನುವ ಭಾವನೆ ಕಾಡದಂತೆ, ಅವರು ಅವಲಂಬಿತರೆನ್ನುವಂತೆ ನೋಡದೆ ಮಕ್ಕಳಂತೆ ಪ್ರೀತಿ ತೋರಿಸಿದರೆ ಅವರ ಖಿನ್ನತೆ, ಒತ್ತಡವನ್ನು ಕಡಿಮೆ ಮಾಡಬಹುದು.
ವಯಸ್ಸಾಗುತ್ತಿದ್ದಂತೆ ರಕ್ತದೊತ್ತಡ, ಮಧುಮೇಹ, ಮಾನಸಿಕ ಒತ್ತಡ ಮತ್ತು ಇನ್ನಿತರ ಆರೋಗ್ಯ ಸಂಬಂಧಿ ತೊಂದರೆಗಳ ಬಗ್ಗೆ ಮೊದಲೇ ಜಾಗೃತಿ ವಹಿಸಿದರೆ ಒಳ್ಳೆಯದು.
ಆಹಾರದಲ್ಲಿ ಅರಿಶಿನದ ಬಳಕೆ, ಸಲಾಡ್ ಗಳು, ಹಣ್ಣುಗಳ ಸೇವನೆ ವಯಸ್ಸಾದ ಮೇಲೆ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿ ಎಂದು ವೈದ್ಯರು ತಿಳಿಸಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
