Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ನಿದ್ದೆ ಬರಲಿಲ್ಲ ಅಂದ್ರೆ ಚೆರ್ರಿ ಜ್ಯೂಸ್ ಕುಡೀರಿ..

ಸ್ಕೂಲ್ ಆಫ್ ಲೈಫ್ ಸೈನ್ಸ್ ನಾರ್ಥಂಬಿಯಾ ವಿಶ್ವವಿದ್ಯಾಲಯದಲ್ಲಿ ನಡೆಸಿದ ಸಂಶೋಧನೆಯಿಂದ ಇದು ಕಂಡುಬಂದಿದೆ. ಚೆರ್ರಿ ಜ್ಯೂಸ್ ಸೇವನೆ 25 ನಿಮಿಷ ಹೆಚ್ಚು ನಿದ್ದೆ ನೀಡುವುದಷ್ಟೇ ಅಲ್ಲ, ನಿಮ್ಮ ನಿದ್ದೆಯ ಗುಣಮಟ್ಟವನ್ನೂ ಹೆಚ್ಚಿಸುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.
ಚೆರ್ರಿ ಜ್ಯೂಸ್ ಸೇವನೆಯಿಂದ ದೇಹದಲ್ಲಿ ನಿದ್ದೆಯನ್ನು ಸರಿದೂಗಿಸಿಕೊಂಡು ಹೋಗುವ ಮೆಲಟೋನಿನ್ ಹಾರ್ಮೋನನ್ನು ಹೆಚ್ಚಿಸಿ ಒಳ್ಳೆಯ ನಿದ್ದೆ ಪಡೆಯಬಹುದು.
ನಿದ್ರಾಹೀನತೆಯಿಂದ ಬಳಲುತ್ತಿದ್ದವರಿಗೆ ಮತ್ತು ಶಿಫ್ಟ್ ಕೆಲಸ ಮಾಡುವವರಿಗೆ ಇದು ಹೆಚ್ಚು ಸೂಕ್ತ ಎಂದು ತಿಳಿಸಿದ್ದಾರೆ.
ಸಂಶೋಧನೆಯ ಪ್ರಯೋಗದಲ್ಲಿ, 20 ಆರೋಗ್ಯವಂತ ಜನರನ್ನು 7 ದಿನಗಳ ಕಾಲ ದಿನಕ್ಕೆ ಎರಡು ಬಾರಿ ಚೆರ್ರಿ ಜ್ಯೂಸ್ ಸೇವನೆ ಮಾಡುವಂತೆ ಹೇಳಲಾಗಿತ್ತು. ಒಂದು ವಾರದ ನಂತರ ಇವರುಗಳಲ್ಲಿ ಮೆಲಟೋನಿನ್ ಗಣನೀಯ ಮಟ್ಟದಲ್ಲಿ ಹೆಚ್ಚಾಗಿದ್ದು ಕಂಡುಬಂದಿದೆ. ಅಲ್ಲದೆ ಇವರು 25 ನಿಮಿಷ ಹೆಚ್ಚಿಗೆ ನಿದ್ದೆ ಮಾಡುತ್ತಿದ್ದರು ಮತ್ತು ನಿದ್ದೆಯ ಗುಣಮಟ್ಟ 5-6 % ಹೆಚ್ಚಾಗಿದ್ದು ತಿಳಿದುಬಂದಿದೆ.
ಇದೇ ಸಂದರ್ಭ, ಬೇರೆಯವರಿಗೆ ಹೋಲಿಸಿದರೆ ಚೆರ್ರಿ ಜ್ಯೂಸ್ ಸೇವನೆಮಾಡುವವರು ಹಗಲು ಹೊತ್ತು ತೂಕಡಿಸುವುದನ್ನೂ ಕಡಿಮೆಮಾಡುತ್ತಾರೆ ಎಂದು ತಿಳಿದುಬಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
