Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಬೆಳಗ್ಗೆ ಹೊತ್ತು ಸಿಗರೇಟ್ ಸೇದಿದರೆ ಸಖತ್ ಡೇಂಜರ್

ಕೆಲವೊಬ್ಬರಿಗೆ ಬೆಳಗ್ಗೆ ಏಳುತ್ತಿದ್ದಂತೆಯೇ ಸಿಗರೇಟ್ ಕೈಗೇರಿಸುವ ಅಭ್ಯಾಸವಿರುತ್ತೆ. ಅಂತಹವರಿಗೆ ಶ್ವಾಸಕೋಶ, ಕುತ್ತಿಗೆ ಮತ್ತು ತಲೆಯಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ದುಪ್ಪಟ್ಟು ಎಂದು ತಿಳಿಸಿದೆ.
ಮುಂಜಾನೆ ಸಿಗರೇಟ್ ಸೇದುವವರ ಆರೋಗ್ಯದ ಕುರಿತು ಪೆನ್ ಸ್ಟೇಟ್ ಕಾಲೇಜ್ ಆಫ್ ಮೆಡಿಸನ್ ನಡೆಸಿದ ಸಂಶೋಧನೆಯಿಂದ ಈ ಫಲಿತಾಂಶ ತಿಳಿದುಬಂದಿದೆ.
ಬೆಳಗಿನ ಹೊತ್ತು ಸಿಗರೇಟ್ ಸೇದುವವರ ದೇಹದಲ್ಲಿ ಹೆಚ್ಚು ನಿಕೊಟಿನ್ ಅಂಶ ಸೇರಿಕೊಳ್ಳುತ್ತದೆ ಎನ್ನಲಾಗಿದೆ. 4,775 ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳನ್ನು ಪರೀಕ್ಷಿಸಿದಾಗ ಅವರೆಲ್ಲರೂ ನಿರಂತರವಾಗಿ ಸಿಗರೇಟ್ ಚಟ ಅಂಟಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಬೆಳಗಿನ ವಾಕಿಂಗ್ ಆದ 60 ನಿಮಿಷಕ್ಕೂ ಹೆಚ್ಚು ಅಂತರದಲ್ಲಿ ಸಿಗರೇಟ್ ಸೇದುವವರಿಗೆ ಹೋಲಿಸಿದಾಗ ವಾಕಿಂಗ್ ಮುಗಿಸಿದ 31 ರಿಂದ 60 ನಿಮಿಷದ ಒಳಗೆಯೇ ಸಿಗರೇಟ್ ಸೇದುವವರು ಶ್ವಾಸಕೋಶದ ತೊಂದರೆಗೆ ಒಳಗಾಗುವ ಸಾಧ್ಯತೆ ಎರಡು ಪಟ್ಟು ಹೆಚ್ಚಿರುತ್ತದೆ ಎಂದು ತಿಳಿದುಬಂದಿದೆ.
ತಲೆ ಮತ್ತು ಕುತ್ತಿಗೆಯಲ್ಲಿ ಉಂಟಾಗುವ ಸುಮಾರು 1,055 ಕ್ಯಾನ್ಸರ್ ಪ್ರಕರಣಗಳನ್ನು ಪರಿಶೀಲಿಸಿದಾಗ ಇವೆಲ್ಲದರ ಹಿಂದೆ ಸಿಗರೇಟ್ ಸೇವನೆ ಇದ್ದುದಾಗಿ ವರದಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
