Latest Updates
-
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು!
ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಯಾವುದು?

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು:
ಮೊಸರು: ಮೊಸರಿನಲ್ಲಿ ದೇಹಕ್ಕೆ ಅಗತ್ಯವಾದ ಒಳ್ಳೆಯ ಬ್ಯಾಕ್ಟೀರಿಯಾ ಇರುವುದರಿಂದ ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿ. ಇದರ ಸೇವನೆಯಿಂದ ಜೀರ್ಣಕ್ರಿಯೆಯೂ ಸಮತೋಲನವಾಗಿ ಸಾಗುವಂತೆ ನೋಡಿಕೊಳ್ಳುತ್ತದೆ
ಗ್ರೀನ್ ಟೀ: ಗ್ರೀನ್ ಟೀನಲ್ಲಿನ ಪಾಲಿಫೆನಾಲ್ಸ್, ಪೊಟೆಂಟ್ ಪ್ಲಾಂಟ್ ಆಂಟಿಯಾಕ್ಸಿಡೆಂಟ್ ಗಳಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಗ್ರೀನ್ ಟೀನಲ್ಲಿರುವ ಪ್ರತ್ಯೇಕ ಪಾಲಿಫೆನಾಲ್ಸ್ ಕ್ಯಾಟೆಚಿನ್ ಎಂಬ ಅಂಶ ವೈರಸ್ ಗಳನ್ನು ತೊಡೆದು ಹಾಕುತ್ತದೆ ಎಂದು ಕೆಲವು ಅಧ್ಯಯನ ತಿಳಿಸಿದೆ.
ಆದರೆ ಗ್ರೀನ್ ಟೀ ಉಪಯೋಗವನ್ನು ಸಂಪೂರ್ಣವಾಗಿ ಪಡೆಯಬೇಕೆಂದರೆ ಬಿಸಿ ನೀರಿಗೆ ಗ್ರೀನ್ ಟೀಯನ್ನು ಒಂದು ನಿಮಿಷ ಅದ್ದಿ ಸ್ವಲ್ಪ ನಿಂಬೆ ಅಥವಾ ಜೇನನ್ನು ಬೆರೆಸಿ ಕುಡಿಯಬಹುದು. ಆದರೆ ಹಾಲನ್ನು ಸೇರಿಸಿ ಕುಡಿದರೆ ಈ ಉಪಯೋಗ ಪಡೆಯಲು ಸಾಧ್ಯವಿಲ್ಲ.
ವಿಟಮಿನ್ ಡಿ: ವಿಟಮಿನ್ ಡಿ ಮಾತ್ರೆಗಳನ್ನು ತೆಗೆದುಕೊಳ್ಳುವ ಮಕ್ಕಳು ಚಳಿಗಾಲದ ಸಮಸ್ಯೆಗಳಿಗೆ ಒಳಗಾಗುವುದು ಶೇಕಡಾ 40ರಷ್ಟು ಕಡಿಮೆ ಎಂದು ತಿಳಿದುಬಂದಿದೆ. ಈ ವಿಟಮಿನ್ ಡಿ ಮಾತ್ರೆಗಳನ್ನು ತೆಗೆದುಕೊಳ್ಳುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿ ಸುಸ್ತಾಗುವಂತೆ ಮಾಡುವ ಬ್ಯಾಕ್ಟೀರಿಯಾವನ್ನು ನಿರ್ಮೂಲನೆ ಮಾಡುತ್ತದೆ ಎನ್ನಲಾಗಿದೆ. ಅಷ್ಟೇ ಅಲ್ಲ, ಮೀನು, ಸೂರ್ಯನ ಕಿರಣವೂ ಕೂಡ ವಿಟಮಿನ್ ಡಿ ನೀಡುತ್ತದೆ.
ಸೇಬು, ಕ್ಯಾರೆಟ್: ಸಿಟ್ರಸ್ ಹಣ್ಣು, ಸೇಬು, ಕ್ಯಾರೆಟ್, ಬೀನ್ಸ್ ಮತ್ತು ಓಟ್ಸ್ ಸೇವಿಸಿದರೆ ಹೊಟ್ಟೆಯಲ್ಲಿ ಕಾಣಿಸಿಕೊಳ್ಳುವ ಉರಿಯನ್ನು ಹೋಗಿಸಸುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಗೋಧಿ, ಧಾನ್ಯಗಳು, ತರಕಾರಿ ಇವೆಲ್ಲವೂ ಸೇರಿ ದಿನಕ್ಕೆ 25 ರಿಂದ 38 ಗ್ರಾಂ ಫೈಬರ್ ಆಹಾರವನ್ನು ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
