Latest Updates
-
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ!
90 ವರ್ಷ ಆರೋಗ್ಯದಿಂದ ಬದುಕುವುದು ಹೇಗೆ?

ನಾವು ಬದುಕಿರುವಷ್ಟು ಕಾಲ ಸಂತೋಷದಿಂದ ಮತ್ತು ಆರೋಗ್ಯದಿಂದ ಇರಬೇಕೆಂದು ಬಯಸುತ್ತೇವೆ. ಆದರೆ ಬದಲಾಗುತ್ತಿರುವ ಜೀವನ ಶೈಲಿ ಸಂತೋಷ ಮತ್ತು ಆರೋಗ್ಯ ಎರಡನ್ನು ನುಂಗಿ ಹಾಕುತ್ತಿದೆ. ಮಾನಸಿಕ ಒತ್ತಡಗಳಿಂದ ದೇಹದ ಆರೋಗ್ಯ ಕೂಡ ಹದಗೆಡುತ್ತಿದೆ. ಆದ್ದರಿಂದಲೆ ಚಿಕ್ಕ ವಯಸ್ಸಿನಲ್ಲಿಯೆ ರಕ್ತದೊತ್ತಡ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹಾಗಂತ ಆ ರೀತಿ ಆಗಲು ಅವಕಾಶ ಕೊಡಬಾರದಾಗಿದೆ.
ನಮ್ಮ ಜೀವನ ಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದು ಅದನ್ನು ಕಟ್ಟುನಿಟ್ಟಿನಿಂದ ಪಾಲಿಸಿದರೆ 90 ವರ್ಷಗಳ ಕಾಲ ಸಂತೋಷ ಮತ್ತು ಆರೋಗ್ಯದಿಂದ ಬದುಕಿರಬಹುದಾಗಿದೆ. ಅದ್ಹೇಗೆ ಎಂದು ತಿಳಿಯಲು ಮುಂದೆ ಓದಿ.
1.ಆಹಾರ: ವಿಟಮಿನ್ ಮತ್ತು ಫ್ರೋಟೀನ್, ಕ್ಯಾಲ್ಸಿಯಂ ಅಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ಹಣ್ಣು ತರಕಾರಿಗಳನ್ನು ಮತ್ತು ಸಮುದ್ರ ಆಹಾರದ ಸೇವನೆ ದೇಹದ ಆರೋಗ್ಯಕ್ಕೆ ಒಳ್ಳೆಯದು. ಅಧಿಕ ಕೊಬ್ಬಿನ ಮತ್ತು ಕೊಲೆಸ್ಟ್ರಾಲ್ ಇರುವ ಆಹಾರಗಳ ಸೇವನೆ ಸಾಧ್ಯವಾದಷ್ಟು ಕಡಿಮೆ ಮಾಡಬೇಕು.
2. ನೀರು: ಪ್ರತಿನಿತ್ಯ 8-9 ಲೋಟ ನೀರನ್ನು ಸೇವಿಸಲೆ ಬೇಕು. ಇದು ಜೀರ್ಣಕ್ರಿಯೆ ಮತ್ತು ಕಿಡ್ನಿ ಸಮಸ್ಯೆಗಳು ಬರದಂತೆ ತಡೆಯುತ್ತದೆ.
3. ವ್ಯಾಯಾಮ: ಪ್ರತಿ ನಿತ್ಯ ವ್ಯಾಯಾಮ ಮಾಡುವುದು ಅದರಲ್ಲೂ 30 ನಿಮಿಷಗಳ ವೇಗದ ನಡುಗೆ ದೇಹದಲ್ಲಿರು ಅಧಿಕ ಕೊಬ್ಬನ್ನು ಕರಗಿಸಿ ದೇಹಕ್ಕೆ ಅಧಿಕ ಆಮ್ಲಜನಕವನ್ನು ಪೂರೈಸುವುದರಿಂದ ದೇಹಕ್ಕೆ ತುಂಬಾ ಒಳ್ಳೆಯದು.
4. ಅಭ್ಯಾಸ: ಒಳ್ಳೆಯ ಅಭ್ಯಾಸಗಳನ್ನು ಬೆಳಸಿಕೊಳ್ಳುವುದು, ಒಳ್ಳೆಯ ವಿಚಾರಗಳನ್ನು ಮಾಡುವುದು, ಬೇಡದ ವಿಚಾರಗಳನ್ನು ತಲೆಯಿಂದ ತೆಗೆದು ಹಾಕಿದರೆ ಕೊರಗು ಕಮ್ಮಿಯಾಗುತ್ತದೆ, ಹೀಗೆ ಮಾಡಿ ಸಂತೋಷ ಮತ್ತು ಆರೋಗ್ಯದಿಂದ ಇರಬಹುದಾಗಿದೆ.
5. ವಿಶ್ರಾಂತಿ: 7-8 ಗಂಟೆಗಳ ಕಾಲದ ನಿದ್ರೆ, ಬೆಳಗ್ಗೆ ಬೇಗನೆ ಏಳುವುದು, ಹೊತ್ತಿಗೆ ಸರಿಯಾಗಿ ಊಟ ಮಾಡುವುದು ಆರೋಗ್ಯಕ್ಕೆ ಅವಶ್ಯಕ. ತಿಂಗಳಿಗೆ ಒಮ್ಮೆ ದೇಹಕ್ಕೆ ಮಸಾಜ್ ಮಾಡಿಸಿಕೊಳ್ಳುವದರಿಂದ ದೇಹದಲ್ಲಿ ರಕ್ತ ಸಂಚಲನ ಸರಿಯಾಗಿ ಆಗುವುದು.
6. ನಂಬಿಕೆ: ದೇವರ ಮೇಲೆ ನಂಬಿಕೆಯನ್ನು ಇಡುವುದು, ಪವಿತ್ರವಾದ ಸ್ಥಳಗಳಿಗೆ ಹೋಗುವುದು, ಪವಿತ್ರ ಪುಸ್ತಕಗಳನ್ನು ಓದುವುದರಿಂದ ಮನಸ್ಸು ಪ್ರಶಾಂತವಾಗುತ್ತದೆ, ಇದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ.
7. ಪ್ರೀತಿ : ಎಲ್ಲರೊಂದಿಗೆ ಪ್ರೀತಿಯಿಂದ ವ್ಯವಹರಿಸುವುದು, ಬಾಳ ಸಂಗಾತಿಯನ್ನು ಪ್ರೀತಿಯಿಂದ ಕಾಣುವುದು, ಭಾವನೆಗಳನ್ನು ಹಂಚಿಕೊಳ್ಳುವುದು, ಆರೋಗ್ಯಕರವಾದ ದೈಹಿಕ ಸಂಬಂಧ ಇವೆಲ್ಲವೂ ಮನುಷ್ಯನ ಸಂತೋಷ ಮತ್ತು ಆರೋಗ್ಯಕ್ಕೆ ಅವಶ್ಯಕ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
