Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ನೆನಪಿನ ಶಕ್ತಿ ಬೇಕೆಂದರೆ ಈ ಆಹಾರ ತಿನ್ನಿ

ಕಲಿಯುವ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಇಲ್ಲ ಅಂದರೆ ಅದರ ಕೆಟ್ಟ ಪರಿಣಾಮ ಕಾಣುವುದು ಪರೀಕ್ಷೆ ಪೇಪರ್ ನಲ್ಲಿ. ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಅನೇಕ ಪ್ರೊಟೀನ್ ಪುಡಿಗಳ ಜಾಹೀರಾತನ್ನು ನೋಡಿರಬಹುದು. ಆದರೆ ಕೆಲವು ಆಹಾರಗಳ ಸೇವನೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲದೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವು ಎಂದು ತಿಳಿಯಲು ಮುಂದೆ ಓದಿ.
1. ಟೀ: ಟೀಯಿಂದ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಇದರಲ್ಲಿ anti oxidants ಅಂಶ ಉಳಿದೆಲ್ಲಾ ತರಕಾರಿ ಮತ್ತು ಹಣ್ಣುಗಳಲ್ಲಿ ಇರುವುದಕ್ಕಿಂತ ಹೆಚ್ಚಾಗಿರುತ್ತದೆ. ಈ ಅಂಶವನ್ನು ಪಾಲಿಫಿನೊಲ್ಸ್ಎಂದು ಕರೆಯಲಾಗುವುದು, ಇದು ಮೆದುಳಿನ ಚಟುವಟಿಕೆಗಳನ್ನು ಹೆಚ್ಚು ಮಾಡುತ್ತದೆ. ಇದರಲ್ಲಿರುವ ಅಮೈನೊ ಆಸಿಡ್ ವಿಷಯವನ್ನು ಸರಿಯಾದ ರೀತಿಯಲ್ಲಿ ಯೋಚಿಸಲು ಸಹಾಯ ಮಾಡುತ್ತದೆ. ಹಿಂದೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಚೀನಾದಲ್ಲಿ ಕಾಡು ಎಲೆಯನ್ನು ಸಂಗ್ರಹಿಸಿ ಅದನ್ನು ಸೇವಿಸುತ್ತಿದ್ದರು. ಆಗ ಸಂಗ್ರಹಿಸುತ್ತಿದ್ದ ಎಲೆ ಯಾವುದು ಎಂದು ಗೊತ್ತೆ? ಅದು ಬೇರಾವುದು ಅಲ್ಲ ಇದೇ ಟೀ ಎಲೆ.
2. ರೋಸ್ ಮೆರಿ: ರೋಸ್ ಮೆರಿ ಜ್ಞಾಪಕ ಶಕ್ತಿ ಕಳೆದು ಹೋದವರಿಗೆ ಪುನಃ ನೆನಪು ಬರುವಂತೆ ಮಾಡಲು ಹರ್ಬಲ್ ಔಷಧಿಯಲ್ಲಿ ಬಳಸಲಾಗುವುದು. ಇದರಲ್ಲಿರುವ ಕಾರ್ನೋಸೈಕ್ ಆಸಿಡ್ ಎಂಬ ರಾಸಾಯನಿಕವು ರೋಸ್ ಮೆರಿಯಲ್ಲಿ ಇದ್ದು ಅದು ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ.
3. ಹಣ್ಣುಗಳು: ಸೇಬು ಮತ್ತು ಕಪ್ಪು ದ್ರಾಕ್ಷಿ ಜ್ಞಾಪಕಶಕ್ತಿಯನ್ನು ಹೆಚ್ಚು ಮಾಡುತ್ತದೆ. ಇದರಲ್ಲಿರುವ ಆಂತೊಸೈನಾನ್ ನೆನಪಿನ ಶಕ್ತಿಯನ್ನು ಹೆಚ್ಚು ಮಾಡುತ್ತದೆ.
4. ತರಕಾರಿ: ನೀಲಿ, ಕೆಂಪು ಮತ್ತು ಹಸಿರು ಬಣ್ಣದಲ್ಲಿರುವ ತರಕಾರಿಗಳು ಮೆದುಳಿಗೆ ಒಳ್ಳೆಯದು. ಬದನೆಕಾಯಿ, ಬೀಟ್ ರೂಟ್ಸ್, ಈರುಳ್ಳಿ, ಸೊಪ್ಪುಗಳು ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ.
5. ಮೀನು: ಮೀನಿನಲ್ಲಿರುವ ಒಮೆಗಾ 3 ಕೊಬ್ಬಿನಂಶವು ಮೆದುಳಿನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ, ಈ ಅಂಶವು ಆಹಾರದಿಂದ ಮಾತ್ರ ನಮ್ಮ ದೇಹ ಸೇರುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
