Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಶೀತ, ಕೆಮ್ಮು, ಜ್ವರಕ್ಕೆ ಮನೆಮದ್ದು

1.ಒಂದು ಲೋಟ ಹಾಲನ್ನು ಸ್ವಲ್ಪ ಅರಿಶಿಣ ಮತ್ತು ಒಂದು ಎಸಳು ಬೆಳ್ಳುಳ್ಳಿ ಹಾಕಿ ಕುದಿಸಿ ಕುಡಿಯಬೇಕು.
2. ಒಂದು ಚಮಚ ಜೇನಿಗೆ ಸ್ವಲ್ಪ ಕರಿಮೆಣಸನ್ನು ಪುಡಿ ಮಾಡಿ ಅದಕ್ಕೆ ತುಳಸಿ ರಸವನ್ನು ಸ್ವಲ್ಪ ಸೇರಿಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮತ್ತು ರಾತ್ರಿ ಮಲಗುವ ಮುನ್ನ ಸೇವಿಸಬೇಕು. ರಾತ್ರಿ ಈ ಔಷಧಿಯನ್ನು ಕುಡಿದ ನಂತರ ಯಾವುದೆ ಪದಾರ್ಥವನ್ನು ಸೇವಿಸಬಾರದು.
3. ತುಳಸಿ ಎಲೆಯನ್ನು ಅಗೆಯುತ್ತಾ ಇರುವುದು ಅಥವಾ ತುಳಿಸಿ ಎಲೆಯನ್ನು ಬಿಸಿ ನೀರಿನಲ್ಲಿ ಹಾಕಿ ಅದನ್ನು ಕುಡಿಯುವುತ್ತಿದ್ದರೆ ನೆಗಡಿ, ಕೆಮ್ಮು ಬರುವುದಿಲ್ಲ.
4. ಕೆಮ್ಮಿಗೆ ಶುಂಠಿ ಹಾಕಿ ಮಾಡಿದ ಟೀ ಒಳ್ಳೆಯದು.
5. ಶುಂಠಿ ರಸಕ್ಕೆ ಸ್ವಲ್ಪ ಕರಿಮೆಣಸು ಮತ್ತು ಜೇನು ಮಿಶ್ರ ಮಾಡಿ ಕುಡಿಯುವುದರಿಂದ ನೆಗಡಿ ಮತ್ತು ಕೆಮ್ಮನ್ನು ನಿಚಾರಿಸಬಹುದು.
6. ಒಣಶುಂಠಿ ಹಾಕಿದ ಕಾಫಿಯನ್ನು ಕುಡಿಯುವುದು ಕೂಡ ಒಳ್ಳೆಯದು.
7. ಚಳಿಗಾಲದಲ್ಲಿ ಕರಿಮೆಣಸಿನ ರಸ ಮಾಡಿ ಕುಡಿಯುವುದು ಕೂಡ ತುಂಬಾ ಒಳ್ಳೆಯದು.
ಶೀತ, ಕೆಮ್ಮು ಕಾಣಿಸಿಕೊಂಡ ನಂತರ ಔಷಧಿ ತೆಗೆದುಕೊಳ್ಳುವುದಕ್ಕಿಂತ ಮೊದಲೆ ಎಚ್ಚರ ವಹಿಸಿದರೆ ಒಳ್ಳೆಯದು, ನೆಗಡಿ, ಕೆಮ್ಮು ಬರದಂತೆ ಕಾಪಾಡಲು ಈ ಕೆಳಗಿನ ಸೂತ್ರಗಳನ್ನು ಪಾಲಿಸಿ.
1. ಹವಾನಿಯಂತ್ರಣ ಕೊಠಡಿಯಲ್ಲಿ ಅಥವಾ ಹೊರಗಡೆ ತಿರುಗಾಡಲು ಹೋಗುವಾಗ ಕಿವಿಗೆ ಹತ್ತಿಯನ್ನು ಇಟ್ಟುಕೊಳ್ಳಬೇಕು.
2. ತಲೆಯನ್ನು ಉಣ್ಣೆಯ ಸ್ಕಾರ್ಫ್ ಬಳಸುವುದು ಸೂಕ್ತ.
3. ಕರ್ಚೀಫ್ ಗೆ ಸ್ವಲ್ಪ ನೀಲಗಿರಿಯ ಎಣ್ಣೆಯನ್ನು ಹಾಕಿ ಅದರ ವಾಸನೆಯನ್ನು ತೆಗೆದು ಕೊಳ್ಳುತ್ತಿದ್ದರೆ ಸೀನು ಬರುವುದಿಲ್ಲ.
4. ಮುಖ ತೊಳೆಯುವಾಗ, ಸ್ನಾನಮಾಡುವಾಗ ಬಿಸಿ ನೀರನ್ನು ಬಳಸಬೇಕು.
5. ಕೈಯನ್ನು ಆಗಾಗ್ಗೆ ತೊಳೆಯುತ್ತಿರಬೇಕು, ಅಲ್ಲದೆ ಕೈನಿಂದ ಪದೇಪದೆ ಕಣ್ಣು, ಬಾಯಿ ಮತ್ತು ಮೂಗನ್ನು ಮುಟ್ಟುತ್ತಿರಬಾರದು.
6. ಜ್ವರವಿರುವವರಿಂದ ಸ್ವಲ್ಪ ದೂರವಿರಿ.
7. ಆರೋಗ್ಯಕರವಾದ ಆಹಾರಕ್ರಮವನ್ನು ಪಾಲಿಸಬೇಕು.
8. ಒಂದು ವೇಳೆ ಜ್ವರ ಬಂದರೆ ಮನೆಯಲ್ಲಿಯೆ ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕು. ಇದರಿಂದ ಜ್ವರ ಮತ್ತೊಬ್ಬರಿಗೆ ಹರಡುವುದನ್ನು ತಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
