Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
'ವಿಟಮಿನ್ ಇ' ಡಯಟ್ ನಲ್ಲಿ ಏಕೆ ಇರಬೇಕು?

'ವಿಟಮಿನ್ ಇ' ಇರುವ ಆಹಾರಗಳು:ಬ್ರೊಕೋಲಿ, ಪಾಲಾಕ್, ಮಾವಿನ ಹಣ್ಣು, ಗೋಧಿ, ಬಾದಾಮಿ, ಬೆಣ್ಣೆ ಹಣ್ಣು, ಬಾಳೆಹಣ್ಣು, ಮೀನು, ಬೆಳ್ಳುಳ್ಳಿ, ಕರ್ಬೂಜ, ಕೆಂಪು ಮೆಣಸಿನ ಕಾಯಿ, ಜೋಳ, ಟೊಮೆಟೊ, ಸೇಬು,ಕಲ್ಲಂಗಡಿ, ಅಣಬೆ ಈ ಆಹಾಗಳಲ್ಲಿ ವಿಟಮಿನ್ ಇ ಮತ್ತು anti oxidant ಅಂಶ ಹೆಚ್ಚಾಗಿರುತ್ತದೆ.
ಆರೋಗ್ಯ ರಕ್ಷಣೆಯಲ್ಲಿ ವಿಟಮಿನ್ ಇ:
1. ತ್ವಚೆ ಸಂರಕ್ಷಣೆ: 'ವಿಟಮಿನ್ ಇ' ಇರುವ ಆಹಾರಗಳಲ್ಲಿ anti oxidant ಪ್ರಮಾಣ ಹೆಚ್ಚಾಗಿ ಇರುವುದರಿಂದ ತ್ವಚೆ ಸಂಬಂಧಿ ಕಾಯಿಲೆಗಳು ಬರದಂತೆ ತಡೆಯುತ್ತದೆ. ಅಲ್ಲದೆ ತ್ವಚೆ ಹೊಳಪನ್ನು ಹೆಚ್ಚಿಸುವುದು.
2. ಕೆಂಪು ರಕ್ತ ಕಣಗಳನ್ನು ಹೆಚ್ಚು ಮಾಡುತ್ತದೆ: ಇದು ದೇಹದಲ್ಲಿ ರಕ್ತ ಸಂಚಲನ ಸರಿಯಾಗಿ ಪ್ರಕ್ರಿಯೆ ಸರಿಯಾಗಿ ನಡೆಯಲು ಸಹಾಯ ಮಾಡುತ್ತದೆ. ವಿಟಮಿನ್ ಇ ಕೊರತೆ ಉಂಟಾದರೆ ಕೂಡಲೆ ಚಿಕಿತ್ಸೆಯನ್ನು ಪಡೆಯಬೇಕು. ಇಲ್ಲದಿದ್ದರೆ ಪ್ರಾಣಕ್ಕೆ ಅಪಾಯ ಉಂಟಾಗಬಹುದು.
3. ರಕ್ತ ಹೆಪ್ಪುಗಟ್ಟುವ ಸಮಸ್ಯೆಯನ್ನು ತಡೆಯುತ್ತದೆ: ವಿಟಮಿನ್ ಇ ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ ಮತ್ತು ತ್ವಚೆ ಸಮಸ್ಯೆಯನ್ನು ನಿವಾರಿಸುತ್ತದೆ, ಮುಖದಲ್ಲಿ ಬೇಗನೆ ನೆರಿಗೆ ಉಂಟಾಗುವುದಿಲ್ಲ. ಅಲ್ಲದೆ ಇದು ಕ್ಯಾನ್ಸರ್ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ.
4. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ರೆಟಿನಾದ ಸಾಮರ್ಥ್ಯ ಹೆಚ್ಚಿಸುತ್ತದೆ.
5. ಇತರ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ: ಮುಟ್ಟುವಿನಲ್ಲಿ ಅಧಿಕ ನೋವು ಕಾಣಿಸಿಕೊಳ್ಳುವುದು, ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು, ಕಣ್ಣಿನಲ್ಲಿ ಉರಿ, ಅಲ್ಜೈಮರ್ಸ್, ಅಸ್ತಮಾ ಈ ಎಲ್ಲಾ ಸಮಸ್ಯೆಗಳನ್ನು ಹೋಗಲಾಡಿಸಲು ವಿಟಮಿನ್ ಇ ಅಂಶ ದೇಹದಲ್ಲಿ ಅವಶ್ಯಕ.
6.ಮಧುಮೇಹವನ್ನು ತಡೆಗಟ್ಟಲು ಸಹಕಾರಿಯಾಗಿದೆ: 'ವಿಟಮಿನ್ ಇ' ದೇಹದಲ್ಲಿ ಸಕ್ಕರೆ ಅಂಶವನ್ನು ಸಮಪ್ರಮಾಣದಲ್ಲಿಡುತ್ತದೆ. ಇದರಿಂದ ಮಧುಮೇಹ ಬರದಂತೆ ತಡೆಯುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
