For Quick Alerts
ALLOW NOTIFICATIONS  
For Daily Alerts

ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಮನೆಮದ್ದು

|
Home Remedies For Gas Problem
ಗ್ಯಾಸ್ಟ್ರಿಕ್ ಸಮಸ್ಯೆಯಿದ್ದರೆ ಅದರಿಂದ ಹೊಟ್ಟೆ ನೋವು ಅಷ್ಟೆ ಅಲ್ಲ ಮುಜುಗರ ಕೂಡ ಉಂಟಾಗುತ್ತದೆ. ಈ ರೀತಿಯ ಗ್ಯಾಸ್ ಸಮಸ್ಯೆಯಿದ್ದರೆ ಅದರ ಸೌಂಡ್ ಕೇಳಿದಾಗ ಉಳಿದವರು ನಗುತ್ತಾರೆ ಅಥವಾ ವಾಸನೆಯೆಂದು ಮುಖ ಕಿವುಚುತ್ತಾರೆ. ಈ ರೀತಿಯ ಗ್ಯಾಸ್ ಸಮಸ್ಯೆಯನ್ನು ಈ ಕೆಳಗಿನ ಮನೆ ಮದ್ದಿನಿಂದ ಪರಿಹರಿಸಬಹುದು.

1.ಶುಂಠಿ: ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ನೀರು ತಣ್ಣಗಾದ ಮೇಲೆ ಕುಡಿದರೆ ಗ್ಯಾಸ್ ಸಮಸ್ಯೆ ಕಡಿಮೆಯಾಗುವುದು.

* ಟೀಗೆ ಶುಂಠಿ ಹಾಕಿ ಕುಡಿದರೂ ಈ ಸಮಸ್ಯೆ ಪರಿಹಾರವಾಗುವುದು.

2. ನೀರು ಕುಡಿಯುವುದು: ನೀರು ಕುಡಿದರೆ ಈ ರೀತಿಯ ಗ್ಯಾಸ್ ಸಮಸ್ಯೆ ನಿವಾರಣೆಯಗುವುದು. ನೀರು ಕುಡಿದಾಗ ಹೊಟ್ಟೆಯಲ್ಲಿರುವ ಬೇಡದ ಗ್ಯಾಸ್ ಮೂತ್ರದ ಮುಖಾಂತರ ಹೊರಹೋಗುವುದು.

3. ಸೋಂಪು: ಹೊಟ್ಟೆ ನೋವು, ಅಜೀರ್ಣ ಮುಂತಾದ ಸಮಸ್ಯೆಗಳಿಗೆ ಸೋಂಪು ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಊಟದ ಮುಂಚೆ ಮತ್ತು ನಂತರ ಸೋಂಪು ತಿನ್ನುವುದರಿಂದ ಗ್ಯಾಸ್ ಸಮಸ್ಯೆ ಉಂಟಾಗುವುದಿಲ್ಲ.

4.ಆಪಲ್ ಸೈಡರ್ ವಿನಿಗರ್: ಕೆಲವೊಮ್ಮೆ ಹೊಟ್ಟೆಯಲ್ಲಿ ಗ್ಯಾಸ್ ತುಂಬಿದಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಅಗ 2 ಚಮಚ ಆಪಲ್ ಸೈಡರ್ ವಿನಿಗರ್ ಅನ್ನು ಒಂದು ಲೋಟ ಬಿಸಿ ನೀರಿನಲ್ಲಿ ಹಾಕಿ ಕುಡಿದರೆ ನೋವು ಕಡಿಮೆಯಾಗುವುದು.

5. ಅಡುಗೆ ಸೋಡಾ: 1/4 ಚಮಚ ಅಡುಗೆ ಸೋಡಾವನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

6. ಪಲಾವ್ ಎಲೆ: ಪಲಾವ್ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಬೇಕು. ಆ ನೀರನ್ನು ಕುಡಿದರೆ ಗ್ಯಾಸ್ ಸಮಸ್ಯೆ ನಿವಾರಣೆಯಾಗುವುದು.

English summary

Home Remedies For Gas Problem | Tips For Health | ಗ್ಯಾಸ್ಟ್ರಿಕ್ ಸಮಸ್ಯೆಗೆ ಮನೆ ಮದ್ದು | ಆರೋಗ್ಯಕ್ಕಾಗಿ ಕೆಲ ಸಲಹೆಗಳು

Gas not only a painful experience, but an embarrassing one as well, particularly because you do not have any control on it. Here there are home remedies for this problem.
Story first published: Thursday, March 8, 2012, 10:38 [IST]
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Boldsky sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Boldsky website. However, you can change your cookie settings at any time. Learn more
X