Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಆರೋಗ್ಯ, ಸೌಂದರ್ಯ, ಪರಿಸರ ರಕ್ಷಣೆಗೆ ಸೈಕ್ಲಿಂಗ್

1.ರೋಗ ನಿರೋಧಕ ಶಕ್ತಿ ಹೆಚ್ಚುವುದು: ಸೈಕಲ್ ತುಳಿಯುವುದರಿಂದ ರೋಗ ನಿರೋಧಕ ಶಕ್ತಿಯ ಸಾಮರ್ಥ್ಯ ಹೆಚ್ಚಾಗುತ್ತದೆ. ಇದರಿಂದ ಆರೋಗ್ಯ ವೃದ್ಧಿಸುತ್ತದೆ. ಸೈಕಲ್ ತುಳಿಯುವುದರಿಂದ ಹೊಟ್ಟೆಯಲ್ಲಿ ರೋಗಕಾರಕ ಗೆಡ್ಡೆಗಳು ಉಂಟಾಗುವುದನ್ನು ತಡೆಯಬಹುದೆಂದು ಸಂಶೋಧನೆಯಿಂದ ಸಾಬೀತಾಗಿದೆ.
2.ಸ್ನಾಯುಗಳು ಬಲವಾಗುತ್ತವೆ: ಸೈಕಲ್ ತುಳಿಯುವುದರಿಂದ ದೇಹದಲ್ಲಿ ಸ್ನಾಯುಗಳು ಚಟುವಟಿಕೆಯಿಂದ ಕೂಡಿರುತ್ತದೆ. ಹೊಟ್ಟೆ ಮತ್ತು ಕಾಲುಳ ಸ್ನಾಯುಗಳು ಬಲವಾಗುತ್ತವೆ. ಸ್ನಾಯುಗಳು ಸಡಿಲವಾದರೆ ದೇಹ ದಪ್ಪವಾಗುವುದು. ಸ್ನಾಯುಗಳು ಬಲವಾಗಿದ್ದರೆ ದೇಹದ ತೂಕ ಸಮತೋಲನದಲ್ಲಿರುತ್ತದೆ.
3.ಮೂಳೆಗಳು ಬಲವಾಗುತ್ತವೆ: ಸೈಕಲ್ ತುಳಿದರೆ ಕಾಲು ಮತ್ತು ಸೊಂಟದ ಮೂಳೆಗಳು ಬಲವಾಗುತ್ತವೆ. ಇದರಿಂದಾಗಿ ಸೊಂಟ ಮತ್ತು ಮಂಡಿ ನೋವು ಕಡಿಮೆಯಾಗುವುದು. ಅಲ್ಲದೆ ಬೆನ್ನು ನೋವಿನ ಸಮಸ್ಯೆ ನಿವಾರಣೆ ಮಾಡುವಲ್ಲಿ ಸೈಕಲ್ ತುಳಿಯುವ ವ್ಯಾಯಾಮ ತುಂಬಾ ಪ್ರಯೋಜನಕಾರಿಯಾಗಿದೆ.
4.ಮಾನಸಿಕ ಸ್ವಾಸ್ಥ್ಯ: ಸೈಕಲ್ ತುಳಿಯುವುದರಿಂದ ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯವನ್ನು ಪಡೆಯಬಹುದು. ಇದು ದೇಹದಲ್ಲಿ ಹಾರ್ಮೋನ್ ಗಳನ್ನು ಸಮತೋಲನದಲ್ಲಿಡುವುದರಿಂದ ಖಿನ್ನತೆ, ಒತ್ತಡ, ಉದ್ವೇಗ ಮುಂತಾದ ಮಾನಸಿಕ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಿದೆ.
5.ರಕ್ತ ಸಂಚಲನ: ದಿನವೂ ಸೈಕಲ್ ತುಳಿಯುವ ವ್ಯಾಯಾಮ ಮಾಡಿದರೆ ದೇಹದಲ್ಲಿ ರಕ್ತ ಸಂಚಲನ ಸರಿಯಾದ ರೀತಿಯಲ್ಲಿ ನಡೆಯುವುದು. ಇದರಿಂದ ಆರೋಗ್ಯ ಹೆಚ್ಚುತ್ತದೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.
6.ಹೃದಯದ ಸ್ವಾಸ್ಥ್ಯ ಕಾಪಾಡುತ್ತದೆ: ಸೈಕಲ್ ತುಳಿದರೆ ಮಾನಸಿಕ ಒತ್ತಡ ಕಡಿಮೆಯಾಗುವುದು. ದಿನವೂ ಸೈಕ್ಲಿಂಗ್ ಮಾಡುವವರಿಗೆ ಹೃದಯಾಘಾತವಾಗುವ ಸಾಧ್ಯತೆ ತುಂಬಾ ಕಡಿಮೆ.
7.ಕ್ಯಾನ್ಸರ್ ತಡೆಗಟ್ಟುತ್ತದೆ: ದಿನವೂ ಸೈಕಲ್ ತುಳಿದರೆ ಕರುಳಿನ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಳ್ಳುವ ಸಾಧ್ಯತೆ ತುಂಬಾ ಕಡಿಮೆ.
8.ಸೌಂದರ್ಯ ಹೆಚ್ಚುವುದು: ಗಟ್ಟಿಮುಟ್ಟಾದ ಮೈಕಟ್ಟಿನಿಂದ ಸೌಂದರ್ಯ ಹೆಚ್ಚುವುದು. ಸೈಕಲ್ ತುಳಿದರೆ ದೇಹದಲ್ಲಿರುವ ಅಧಿಕ ಕೊಬ್ಬು ಕರಗುತ್ತದೆ. ಒಬೆಸಿಟಿ ಸಮಸ್ಯೆ ಉಂಟಾಗುವುದಿಲ್ಲ. ಆಕರ್ಷಕವಾದ ಮೈಕಟ್ಟು ಪಡೆಯಬಹುದು.
9. ಪರಿಸರ ರಕ್ಷಣೆ: ಈ ವ್ಯಾಯಾಮದಿಂದ ಆರೋಗ್ಯ ಅಷ್ಟೆ ಅಲ್ಲ ಪರಿಸರವನ್ನು ಕೂಡ ಕಾಪಾಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
