Latest Updates
-
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ? -
8,000mAh ಬ್ಯಾಟರಿಯ POCO M8 Power ಲಾಂಚ್: ಈ ಫೋನ್ ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ವಿಷಯಗಳಿವು! -
ರಾಷ್ಟ್ರೀಯ ಮೂಳೆ ಮತ್ತು ಕೀಲು ದಿನ: ಬೆನ್ನು ಮತ್ತು ಮೊಣಕಾಲು ನೋವಿಗೆ ಈ 10 ನಿಮಿಷದ ವ್ಯಾಯಾಮವೇ ಮದ್ದು! -
ಫ್ರೆಂಡ್ಶಿಪ್ ಡೇ ವಿಶ್ ಮಾಡೋಕೆ ಮರೆತಿದ್ದೀರಾ? ನಿಮ್ಮ ಸ್ನೇಹಿತರ ಮನ ಗೆಲ್ಲಲು ಇಲ್ಲಿದೆ ಸಿಂಪಲ್ ಟಿಪ್ಸ್! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ!
ಮಹಿಳೆಯರು ಎದುರಿಸುತ್ತಿರುವ 5 ಪ್ರಮುಖ ಕಾಯಿಲೆಗಳು

ಈ ಕೆಳಗೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಾಯಿಲೆಗಳ ಪಟ್ಟಿ ಮಾಡಲಾಗಿದೆ. ಇವುಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿದರೆ ಈ ಕಾಯಿಲೆಗಳನ್ನು ಸುಲಭದಲ್ಲಿ ನಿವಾರಿಸಬಹುದು.
1. ಮೂಳೆ ಸವೆತ: ಹೆಚ್ಚಿನ ಮಹಿಳೆಯರಲ್ಲಿ ಈ ರೀತಿಯ ಸಮಸ್ಯೆ ಕಂಡು ಬರುತ್ತದೆ. ಅದಕ್ಕೆ ಕಾರಣ ಕ್ಯಾಲ್ಸಿಯಂ ಕೊರತೆ. ಹೆರಿಗೆ ಸಮಯದಲ್ಲಿ ಹೆಚ್ಚಿನ ಕ್ಯಾಲ್ಸಿಯಂ ನಷ್ಟವಾಗುತ್ತದೆ. ಆದ್ದರಿಂದ ಬಾಣಂತಿಯಲ್ಲಿ ಉತ್ತಮ ರೀತಿಯ ಆರೈಕೆ ಬೇಕು. ಆದರೆ ಬಡತನ, ಕೆಲಸದ ಒತ್ತಡ ಇವುಗಳಿಂದ ಸಾಕಷ್ಟು ಜನರಿಗೆ ಈ ಸಮಯದಲ್ಲಿ ಉತ್ತಮ ಪೋಷಕಾಂಶ ತೆಗೆದುಕೊಳ್ಳುವುದು ಸಾದ್ಯವಾಗಿರುವುದಿಲ್ಲ. ಇದರಿಂದಾಗಿ ಮಧ್ಯ ವಯಸ್ಸು ದಾಟುತ್ತಿದ್ದ ಹಾಗೆ ಮೂಳೆ ಸವೆತ, ಕೈ ಕಾಲುಗಳ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.
2. ಹೃದಯಾಘಾತ: ದೇಹದಲ್ಲಿ ಅಧಿಕ ಕೊಲೆಸ್ಟ್ರಾಲ್ ಹೆಚ್ಚಾಗಿದ್ದರೆ, ಅನಾರೋಗ್ಯಕರ ಜೀವನ ಶೈಲಿ, ವ್ಯಾಯಾಮದೆಡೆಗೆ ನಿರ್ಲಕ್ಷ್ಯ ಇವುಗಳಿಂದಾಗಿ ಹೃದಯಾಘಾತ ಪ್ರಮಾಣ ಇತ್ತೀಚಿಗೆ ಹೆಚ್ಚಾಗುತ್ತಿದೆ.
3. ಖಿನ್ನತೆ: ಮಧ್ಯ ವಯಸ್ಸಿನ ಮಹಿಳೆಯರಲ್ಲಿ ಈ ರೀತಿಯ ಖಿನ್ನತೆ ಹೆಚ್ಚಾಗಿ ಕಂಡು ಬರುತ್ತದೆ. ಈ ಸಮಯದಲ್ಲಿ ಅವರು ತುಂಬಾ ಮಂಕಾಗಿ ಇರುತ್ತಾರೆ. ಯಾರೂ ನಮ್ಮನ್ನು ನೋಡಿ ಕೊಳ್ಳುತ್ತಿಲ್ಲ, ಮಕ್ಕಳು ಪ್ರೀತಿ ತೋರುತ್ತಿಲ್ಲ ಎಂದು ಅನಾವಶ್ಯಕವಾಗಿ ಬೇಸರ ಪಟ್ಟುಕೊಳ್ಳುತ್ತಾರೆ. ಈ ಸಮಯದಲ್ಲಿ ಇವರಿಗೆ ಕೌನ್ಸಿಲಿಂಗ್ ಕೊಡಿಸಿ. ಗಂಡ ಮಕ್ಕಳು ಪ್ರೀತಿ ಮಹಿಳೆಯರನ್ನು ಸಮಸ್ಯೆಯಿಂದ ಹೊರಬರಲು ಸಹಾಯಮಾಡುತ್ತದೆ.
4. ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್: ಸ್ತನ ಕ್ಯಾನ್ಸರ್ ಪ್ರಮಾಣ ಹೆಚ್ಚುತ್ತಿದೆ. ಎಲ್ಲಾ ವಯಸ್ಸಿನ ಮಹಿಳೆಯರು ಸ್ವತಃ ಸ್ತನ ಪರೀಕ್ಷೆ ಮಾಡುತ್ತಿರಬೇಕು. ಆ ಭಾಗದಲ್ಲಿ ಗೆಡ್ಡೆಗಳು ಗೋಚರವಾದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು. ಏಕೆಂದರೆ ಸ್ತನ ಕ್ಯಾನ್ಸರ್ ಮೊದಲ ಹಂತದಲ್ಲಿದ್ದರೆ ಚಿಕಿತ್ಸೆಯಿಂದ ಸುಲಭವಾಗಿ ಗುಣಪಡಿಸಬಹುದು.
5. ಅನಿಯಮಿತ ಮುಟ್ಟು: ಸಾಕಷ್ಟು ಸ್ತ್ರೀಯರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಅದಕ್ಕೆ ಕಾರಣ ಅನಾರೋಗ್ಯಕರ ಜೀವನ ಶೈಲಿ ಅಥವಾ ಪೋಷಕಾಂಶವಿರುವ ಆಹಾರಗಳ ಕೊರತೆ. ಈ ರೀತಿಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ತೋರದೆ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications