Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಕುರುಕುಲು ತಿಂಡಿ ತಿಂದು ಮೆಂಟಲ್ ಆಗುವಿರಿ ಜೋಕೆ!

ಆದರೆ ಈ ಫುಡ್ಸ್ ಕೊಲೆಸ್ಟ್ರಾಲ್ ಹೆಚ್ಚಿಸುವುದರ ಜೊತೆಗೆ ಮಾನಸಿಕ ಅಸ್ವಸ್ಥತೆ ಉಂಟಾಗುವುದು ಎಂಬ ಅಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಈ ವಿಷಯದ ಕುರಿತು ಟಿವಿಗಳಲ್ಲಿ, ಪೇಪರ್ ಗಳಲ್ಲಿ ಸಾಕಷ್ಟು ಚರ್ಚೆ ಆಗಿದ್ದನ್ನು ನೀವು ನೋಡಿರಬಹುದು.
ಜಂಕ್ ಫುಡ್ಸ್ (ಕುರುಕಲು ತಿಂಡಿ) ತಿಂದರೆ ಹೇಗೆ ಮಾನಸಿಕ ಅಸ್ವಸ್ಥತೆ ಉಂಟಾಗುತ್ತದೆ ಎಂದು ತಿಳಿಯಲು ಮುಂದೆ ಓದಿ.
1.ಮಾನಸಿಕ ಅಸ್ವಸ್ಥತೆಗೆ ಕಾರಣ:
* ಈ ರೀತಿಯ ಆಹಾರದಲ್ಲಿ ಬೇಡದ ಕೊಬ್ಬಿನಂಶ ಅಧಿಕವಿದೆ. ಇದು ಮೆದುಳಿನ ನ್ಯೂರೊಟ್ರಾನ್ಸ್ ಮೀಟರ್ ಮೇಲೆ ಪರಿಣಾಮ ಬೀರುತ್ತದೆ.
* ಈ ರೀತಿ ಅಧಿಕ ಕೊಬ್ಬಿನಂಶವನ್ನು ತಿನ್ನುವ ಜನರು ಖಿನ್ನತೆ ಮತ್ತು ಅಲ್ಜೈಮರ್ಸ್ ಕಾಯಿಲೆಯಿಂದ ಬಳಲುತ್ತಾರೆ. ಏಕೆಂದರೆ ಈ ಆಹಾರದಲ್ಲಿ ದೇಹಕ್ಕೆ ಅಗತ್ಯವಾದ ಪ್ರೊಟೀನ್ ಅಥವಾ ಇತರ ಪೋಷಕಾಂಶಗಳು ದೊರೆಯುವುದಿಲ್ಲ.
* ಈ ಆಹಾರದಿಂದ ಹಾರ್ಮೋನ್‌ನಲ್ಲಿ ವ್ಯತ್ಯಾಸ ಉಂಟಾಗಿ ಮೆದುಳಿಗೆ ರಕ್ತ ಸಂಚಲನವಾಗುವ ಕ್ರಿಯೆಗೆ ಅಡಚಣೆ ಉಂಟಾಗುತ್ತದೆ. ಇದರಿಂದ ಮೆದುಳಿಗೆ ಹಾನಿ ಉಂಟಾಗಿ ಮಾನಸಿಕ ಅಸ್ವಸ್ಥತೆ ಉಂಟಾಗುವುದು.
2. ಒತ್ತಡ: ಈ ರೀತಿಯ ಕುರುಕಲು ತಿಂಡಿಗಳಲ್ಲಿ ಕಾರ್ಬೋಹೈಡ್ರೇಟ್ ಅಂಶ ಅಧಿಕವಿರುವುದರಿಂದ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ. ದೇಹದಲ್ಲಿ ಬೇಡದ ಕೊಬ್ಬಿನಂಶ ಅಧಿಕವಾದಷ್ಟು ಒತ್ತಡ ಮತ್ತು ಖಿನ್ನತೆ ಹೆಚ್ಚಾಗುವುದು.
* ಜಂಕ್ ಫುಡ್ಸ್ ಹಾಳಾಗದಂತೆ ಸೋಡಿಯಂ ಬೆಂಜೋಯೇಟ್ ಹಾಕುವುದರಿಂದ ಹೈಪರ್ ಆಕ್ಟಿವಿಟಿ ಬರುತ್ತದೆ.
* ಈ ತಿಂಡಿಗಳಲ್ಲಿ ಬಳಸುವ ಕೃತಕ ಬಣ್ಣದಿಂದ ಹಾರ್ಮೋನ್ ಗಳಲ್ಲಿ ವ್ಯತ್ಯಾಸ ಉಂಟಾಗಿ ಮಾನಸಿಕ ಅಸ್ವಸ್ಥತೆ ಉಂಟಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
