Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ದೃಷ್ಟಿ ಸಾಮರ್ಥ್ಯ ಹೆಚ್ಚಿಸುವ 10 ಆಹಾರಗಳು
ಕಣ್ಣಿನ ಆರೈಕೆಯಿಂದ ದೃಷ್ಟಿ ದೋಷವನ್ನು ತಡೆಗಟ್ಟಬಹುದು. ಅದರಲ್ಲೂ ಅತೀ ಹೆಚ್ಚು ಕಂಪ್ಯೂಟರ್ ನ ಮುಂದೆ ಕೂತು ಕೆಲಸ ಮಾಡುವವರು ಹೆಚ್ಚಿನ ಆರೈಕೆ ಮಾಡಬೇಕಾಗುತ್ತದೆ. ಏಕೆಂದರೆ ಕಂಪ್ಯೂಟರ್ ಸ್ಕ್ರೀನ್ ಅನ್ನು ಎವೆ ಬಿಡದೆ ನೋಡುವುದರಿಂದ ಕಣ್ಣಿನ ಸಮಸ್ಯೆ ಉಂಟಾಗುತ್ತವೆ. ಕೆಲಸದ ಒತ್ತಡದಲ್ಲಿ ಕಣ್ಣು ಪರದೆಯಿಂದ ಸರಿಸಲು ಸಮಯವಿರುವುದಿಲ್ಲ. ಇದರಿಂದ ಕಣ್ಣಿನ ಮೇಲೆ ವಿಪರೀತ ಒತ್ತಡ ಬೀರಿ, ಕ್ರಮೇಣ ಇದು ದೃಷ್ಟಿ ದೋಷವನ್ನು ತರುತ್ತದೆ.
ಕಣ್ಣು ತುಂಬಾ ಸೂಕ್ಷ್ಮವಾದ ಅಂಗವಾಗಿದ್ದು ಇದರ ಬಗ್ಗೆ ಹೆಚ್ಚಿನ ಆರೈಕೆ ಮಾಡಬೇಕು. ಬಿಸಿಲಿಗೆ ಹೋಗುವಾಗ ಸೂರ್ಯನ ಕಿರಣಗಳು ನೇರವಾಗಿ ಕಣ್ಣಿಗೆ ಬಡೆಯದಂತೆ ಎಚ್ಚರಿಕೆ ವಹಿಸಿ, ದೇಹದ ತೂಕವನ್ನು ಗಮನದಲ್ಲಿ ಇಟ್ಟುಕೊಳ್ಳಿ ಹಾಗೂ ಒಳ್ಳೆಯ ಆಹಾರಕ್ರಮ ಪಾಲಿಸಿ.
ಹೌದು, ಊಟ ಬಲ್ಲವನಿಗೆ ರೋಗವಿಲ್ಲ ಅನ್ನುವಂತೆ ಕಣ್ಣಿನ ದೃಷ್ಟಿ ಹೆಚ್ಚಿಸುವ ಆಹಾರಗಳ ಬಗ್ಗೆ ತಿಳಿದುಕೊಂಡರೆ ಕಣ್ಣಿನ ದೋಷವನ್ನು ತಡೆಗಟ್ಟಬಹುದು. ಕಣ್ಣಿನ ಆರೋಗ್ಯ ಹೆಚ್ಚಿಸುವ ಆಹಾರಗಳ ಬಗ್ಗೆ ಇಲ್ಲಿ ಹೇಳಲಾಗಿದೆ ನೋಡಿ:

1. ತರಕಾರಿಗಳು:
ಪಾಲಾಕ್ ಹಾಗೂ ಇತರ ಸೊಪ್ಪುಗಳು, ದವಸ ಧಾನ್ಯಗಳು, ಕ್ಯಾರೋಟಿನ್ ಇರುವ ಆಹಾರ ಇವುಗಳು ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

2. ಹಳದಿ ಬಣ್ಣದ ತರಕಾರಿ ಮತ್ತು ಹಣ್ಣುಗಳು:
ಹಳದಿ ಬಣ್ಣದ ತರಕಾರಿಗಳು ಹಾಗೂ ಹಣ್ಣುಗಳು ಕಣ್ಣಿನ ಪಾಪೆಯ ಆರೋಗ್ಯ ಕಾಪಾಡುವಲ್ಲಿ ತುಂಬಾ ಸಹಕಾರಿಯಾಗಿದೆ.

3. ಬೆಳ್ಳುಳ್ಳಿ ಮತ್ತು ಈರುಳ್ಳಿ:
ಬೆಳ್ಳುಳ್ಳಿ ಹಾಗೂ ಈರುಳ್ಳಿಯಲ್ಲಿ ಸಲ್ಫರ್ ಅಂಶವಿರುವುರಿಂದ ಕಣ್ಣಿಗೆ ಹಾಗೂ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

4. ಸೋಯಾ:
ಇದರಲ್ಲಿ ಆರೋಗ್ಯಕರ ಕೊಬ್ಬಿನಂಶ ಹಾಗೂ ವಿಟಮಿನ್ ಇ ಇದ್ದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

5. ಮೊಟ್ಟೆ:
ಮೊಟ್ಟೆಯಲ್ಲಿ ಅಮೈನೊ ಆಸಿಡ್, ಸಲ್ಫರ್ ಹೀಗೆ ಕಣ್ಣಿನ ಆರೋಗ್ಯಕ್ಕೆ ಬೇಕಾದ ಅಗತ್ಯವಾದ ಅಂಶಗಳಿವೆ. ಇದರಲ್ಲಿ ಪ್ರೊಟೀನ್ ಹೆಚ್ಚಾಗಿ ಇರುವುದರಿಂದ ಆರೋಗ್ಯಕ್ಕೂ ಒಳ್ಳೆಯದು.

6. ಬೆರಿ ಮತ್ತು ದ್ರಾಕ್ಷಿ: ಎ
ಎಲ್ಲಾ ಬೆರಿ ಹಣ್ಣುಗಳಲ್ಲಿ ಹಾಗೂ ದ್ರಾಕ್ಷಿಯಲ್ಲಿ ಕಣ್ಣಿನ ಆರೋಗ್ಯ ಹೆಚ್ಚಿಸುವ ಅಂಶಗಳಿವೆ. ಆದ್ದರಿಂದ ಇವುಗಳನ್ನು ಪ್ರತಿದಿನ ಆಹಾರಕ್ರಮದಲ್ಲಿ ಸೇರಿಸುವುದು ಒಳ್ಳೆಯದು.

7. ಕ್ಯಾರೆಟ್ ಮತ್ತು ದುಂಡು ಮೆಣಸಿನ ಕಾಯಿ
ಇವುಗಳಲ್ಲಿ ವಿಟಮಿನ್ ಸಿ ಹಾಗೂ ವಿಟಮಿನ್ ಎ ಇದ್ದು ಕಣ್ಣಿನ ದೃಷ್ಟಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಲ್ಲಿ ತುಂಬಾ ಸಹಕಾರಿಯಾಗಿದೆ.

8. ನಟ್ಸ್:
ನಟ್ಸ್ ಗಳಲ್ಲಿ ಒಮೆಗಾ 3 ಎಂಬ ಒಳ್ಳೆಯ ಕೊಬ್ಬಿನಂಶವಿದ್ದು, ಇದು ಕಣ್ಣಿನ ಹಾಗೂ ದೇಹದ ಆರೋಗ್ಯ ಹೆಚ್ಚಿಸಲು ಸಹಕಾರಿಯಾಗಿದೆ.

9. ಹಾಲಿನ ಉತ್ಪನ್ನಗಳು:
ಹಾಲು ಮತ್ತು ಹಾಲಿನ ಉತ್ಪನ್ನಗಳು ಕಣ್ಣು ಮಂಜಾಗದಂತೆ ತಡೆಯುವ ಸಾಮರ್ಥ್ಯ ಹೊಂದಿವೆ. ದಿನದಲ್ಲಿ ಒಂದು ಲೋಟ ಹಾಲು ತಪ್ಪದೆ ಕುಡಿಯಿರಿ.

10. ಮೀನು ಹಾಗೂ ಮೃದ್ವಂಗಿಗಳು:
ಮೀನು ತಿಂದರೆ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವು ಕಣ್ಣು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ತುಂಬಾ ಸಹಕಾರಿಯಾಗಿದೆ. ಕಣ್ಣಿನ ಚಿಕಿತ್ಸೆಯಲ್ಲಿ ಇವುಗಳನ್ನು ಉಪಯೋಗಿಸಲಾಗುವುದು.



Click it and Unblock the Notifications
