Latest Updates
-
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ!
ಚಿತ್ರ ಮಾಹಿತಿ: ಸೂರ್ಯನಮಸ್ಕಾರದ 12 ಭಂಗಿಗಳು
ಈ ಜಂಜಾಟದ ಬದುಕಿನಲ್ಲಿ ಮನಸ್ಸಿಗೆ ಸ್ವಲ್ಪವಾದರೂ ನೆಮ್ಮದಿ ಬೇಕೆಂದುಬಯಸುತ್ತವೆ. ಮನಸ್ಸಿಗೆ ನೆಮ್ಮದಿ ಇಲ್ಲ ಅಂದರೆ ಮಾಡುವ ಕೆಲಸದಲ್ಲಿ ಏಕಾಗ್ರತೆ ಇರುವುದಿಲ್ಲ, ಅರೋಗ್ಯ ಹಾಳಾಗುವುದು ಹೀಗೆ ಅನೇಕ ಸಮಸ್ಯೆಗಳು ಎದುರಾಗುತ್ತದೆ. ಎಷ್ಟೇ ಜಂಜಾಟವಿರಲಿ, ಒತ್ತಡವಿರಲಿ ಬದುಕಿನಲ್ಲಿ ದಿನನಿತ್ಯದ ಜೀವನದಲ್ಲಿ ಸ್ವಲ್ಪ ಬದಲಾವಣೆ ತಂದರೆ ಸಾಕು ಮನಸ್ಸಿಗೆ ನೆಮ್ಮದಿ ಸಿಗುವುದು, ಅದಕ್ಕಾಗಿ ನೀವು ಏನು ಮಾಡಬೇಕೆಂದು ಇಲ್ಲಿ ಹೇಳಲಾಗಿದೆ ನೋಡಿ.
ಸೂರ್ಯನಮಸ್ಕಾರ ಅತ್ಯಂತ ಪ್ರಯೋಜನಕಾರಿಯಾದ ವ್ಯಾಯಾಮವಾಗಿದೆ. ದಿನದಲ್ಲಿ 30 ನಿಮಿಷ ಈ ವ್ಯಾಯಾಮ ಮಾಡಲು ಮಾಡಲು ಮೀಸಲಿಟ್ಟರೆ ಸಾಕು ಅನೇಕ ರೀತಿಯ ಆರೋಗ್ಯಕರ ಲಾಭವನ್ನು ಪಡೆಯಬಹುದು.
ಸೂರ್ಯ ನಮಸ್ಕಾರದಲ್ಲಿ 12 ಆಸನಗಳಿಗೆ. ಈ ಆಸನಗಳನ್ನು ಮಾಡುವಾಗ ಹೇಳುವ ಶ್ಲೋಕ ಮತ್ತು ವ್ಯಾಯಾಮದ ಭಂಗಿಗಳನ್ನು ಚಿತ್ರಸಹಿತ ನೀಡಲಾಗಿದೆ ನೋಡಿ:

1. ಓಂ ಹ್ರಾಂ ಮಿತ್ರಾಯ ನಮಃ
ಕಾಲುಗಳನ್ನು ಹತ್ತಿರ ತಂದು ನೇರವಾಗಿ ನಿಲ್ಲಬೇಕು. ನಿಮ್ಮ ಕೈಗಳನ್ನು ನೇರವಾಗಿ ಮೇಲೆತ್ತಿ ಹಾಗೇ ಮುಂದುವರಿದು ನೇರವಾಗಿ ನಿಮ್ಮ ಮುಖಕ್ಕೆ ಎದುರಾಗುವಂತೆ ಮಾಡಬೇಕು. ಕೈಗಳನ್ನು ನಮಸ್ಕಾರ ಮಾಡುವ ರೀತಿಯಲ್ಲಿ ಜೋಡಿಸಿ ಹಿಡಿಯಬೇಕು.

2. ಓಂ ಹ್ರೀಂ ರವಯೇ ನಮಃ
ಶ್ವಾಸ ಒಳಗೆ ಎಳೆದುಕೊಳ್ಳುವುದರೊಂದಿಗೆ ನಿಮ್ಮ ಕಿವಿಗಳಿಗೆ ತಗಲುವಂತೆ ಕೈಗಳನ್ನು ಮೇಲಕ್ಕೆತ್ತಿ. ನಂತರ ನಿಧಾನವಾಗಿ ಬಾಗಿ ನಿಮ್ಮ ತೋಳುಗಳನ್ನು ತಲೆಯಿಂದ ಹಿಂದಕ್ಕೆ ತೆಗೆದುಕೊಳ್ಳಬೇಕು.

3. ಓಂ ಹ್ರೂಂ ಸೂರ್ಯಾಯ ನಮಃ
ಶ್ವಾಸವನ್ನು ಹೊರಗೆ ಬಿಡುತ್ತಾ ಮುಂದಕ್ಕೆ ಬಾಗಿ ಎರಡು ಕೈಗಳಿಂದ ನಿಮ್ಮ ಪಾದದ ಬೆರಳುಗಳನ್ನು ಮುಟ್ಟಿ ಹಾಗೇ ಕೆಲ ನಿಮಿಷಗಳ ಕಾಲ ಅದೇ ಸ್ಥಿತಿಯಲ್ಲಿರಲು ಪ್ರಯತ್ನಿಸಿ. ಇದು ಪಾದ ಪಶ್ಚಿಮೋತ್ಥಾನಾಸನ.

4. ಓಂ ಹ್ರೈಂ ಭಾನವೇ ನಮಃ
ಶ್ವಾಸ ಒಳಗೆಳೆದುಕೊಳ್ಳುತ್ತಾ ಬಲಗಾಲು ಹಿಂದೆ ಇಟ್ಟು ಕಾಲು ಮತ್ತು ಕೈಗಳನ್ನು ಭೂಮಿಯ ಮೇಲೆ ಊರಲು ಪ್ರಯತ್ನಿಸಿ. ಇದೇ ಸ್ಥಿತಿಯಲ್ಲಿ ಕೆಲ ಸೆಕೆಂಡು ಕಳೆಯಬೇಕು.

5. ಓಂ ಹ್ರೌಂ ಖಗಾಯ ನಮಃ
ಶ್ವಾಸ ಹೊರಗೆ ಬಿಡುತ್ತಾ ಕಾಲುಗಳನ್ನು ನೇರವಾಗಿಸಿ, ಕೈಗಳನ್ನು ನೇರವಾಗಿಡಬೇಕು. ನಂತರ ಹಿಂಗಾಲನ್ನು ಎತ್ತಿ ಅದರ ಜೊತೆಗೆ ನೇರವಾಗಿ ಕೈಗಳನ್ನು ತಲೆಯ ಹಿಂಭಾಗಕ್ಕೆ ತನ್ನಿ.

6. ಓಂ ಹ್ರಃ ಪೂಷ್ಣೇ ನಮಃ
ನೆಲದ ಮೇಲೆ ಬೋರಲಾಗಿ ಮಲಗಿ ಶ್ವಾಸವನ್ನು ಒಳಗೆ ಎಳೆದುಕೊಳ್ಳುತ್ತಾ ಪಾದ, ಮೊಣಕಾಲು ಎದೆ ಮತ್ತು ಹಣೆ ನೆಲಕ್ಕೆ ನಿಧಾನವಾಗಿ ತಾಗುವಂತೆ ಮಾಡಿ ಹಿಂಗಾಲನ್ನು ನೆಲಕ್ಕಿಂತ ಸ್ವಲ್ಪ ಮೇಲಕ್ಕೆತ್ತಿ ಶ್ವಾಸ ಹೊರಗೆ ಬಿಡಬೇಕು.

7. ಓಂ ಹ್ರಾಂ ಹಿರಣ್ಯಗರ್ಭಾಯ ನಮಃ
ಶ್ವಾಸ ಹೊರಗೆಳೆದುಕೊಳ್ಳುತ್ತಾ ನಿಧಾನವಾಗಿ ದೇಹವನ್ನು ಆದಷ್ಟು ಹಿಂದಕ್ಕೆ ಬಾಗಿಸಿ. ಇದನ್ನು ಭುಜಂಗಾಸಾನ ಎಂದು ಕರೆಯುತ್ತಾರೆ.

8. ಓಂ ಹ್ರೀಂ ಮರೀಚಯೇ ನಮಃ
ಶ್ವಾಸ ನಿಧಾನವಾಗಿ ಹೊರಗೆ ಬಿಡುತ್ತಾ ಕೈಗಳನ್ನು ನೇರವಾಗಿಟ್ಟು ಸೊಂಟವನ್ನು ಮೇಲಕ್ಕೆತ್ತಿ ತಲೆಯನ್ನು ಮೇಲ್ಮುಖ ಮಾಡುತ್ತಾ ಕೈಗಳನ್ನು ಹಿಂದಕ್ಕೆ ತೆಗೆಯಬೇಕು.

9. ಓಂ ಹ್ರೂಂ ಆದಿತ್ಯಾಯ ನಮಃ
ನಿಧಾನವಾಗಿ ಶ್ವಾಸ ಒಳಗೆಳೆದುಕೊಳ್ಳುತ್ತಾ ಬಲಗಾಲಿನ ಮೊಣಕಾಲನ್ನು ಮುಂದಕ್ಕೆ ಇಡುತ್ತಾ ತಲೆಯನ್ನು ಆದಷ್ಟು ಮೇಲೆತ್ತಬೇಕು.

10. ಓಂ ಹ್ರೈಂ ಸವಿತ್ರೇ ನಮಃ
ನಿಧಾನವಾಗಿ ಶ್ವಾಸ ಹೊರಗೆ ಬಿಡುತ್ತಾ ಕಾಲುಗಳು ನೇರ, ಕೈಗಳು ಪಾದದ ಬೆರಳುಗಳನ್ನು ಮುಟ್ಟುತ್ತಿದ್ದು ತಲೆ ಮೊಣಕಾಲಿಗೆ ತಗುಲಿರಬೇಕು.

11. ಓಂ ಹ್ರೌಂ ಅರ್ಕಾಯ ನಮಃ
ನಿಧಾನವಾಗಿ ಶ್ವಾಸ ಒಳಗೆಳೆದುಕೊಳ್ಳುತ್ತಾ ಕೈಗಳನ್ನು ಮೇಲಕ್ಕೆತ್ತಿ ನಿಧಾನವಾಗಿ ಹಿಂದಕ್ಕೆ ಭಾಗಿ ಕೈಗಳನ್ನು ತಲೆಯ ಹಿಂಭಾಗಕ್ಕೆ ತನ್ನಿ. ನಮಸ್ಕಾರದ ಸ್ಥಿತಿಗೆ ಬನ್ನಿ.

12. ಓಂ ಹ್ರಃ ಭಾಸ್ಕರಾಯ ನಮಃ
ಈಗ ಸಾಮಾನ್ಯ ಸ್ಥಿತಿಗೆ ಬನ್ನಿ. ಈ ರೀತಿ ಮಾಡಿದರೆ ಒಂದು ಸುತ್ತಿನ ಸೂರ್ಯ ನಮಸ್ಕಾರ ಮಾಡಿದಂತಾಯಿತು. ನಂತರ ಎಡಗಾಲಿನಿಂದ ಈ ಹಂತಗಳನ್ನು ಪುನರಾವರ್ತಿಸಬೇಕು.
ಈ ಭಂಗಿಗಳನ್ನು ಒಮ್ಮೆ ಎಡಕಾಲಿನಿಂದ ಒಂದು ಸುತ್ತು ಮಾಡಿದ ನಂತರ ಬಲಕಾಲಿನಿಂದ ಮಾಡಿ. ಈ ರೀತಿ ಮಾಡಿದರೆ ಒತ್ತಡ ಕಡಿಮೆಯಾಗುವುದು, ಬೊಜ್ಜು ಕರಗುವುದು, ದೇಹದ ಆರೋಗ್ಯ ಹೆಚ್ಚಾಗುವುದು. ಕಾಯಿಲೆ ಬಂದು ಆಸ್ಪತ್ರೆಗೆ ದುಡ್ಡು ಖರ್ಚು ಮಾಡುವ ಬದಲು ದಿನದಲ್ಲಿ ಸ್ವಲ್ಪ ಸಮಯವನ್ನು ಸಮ್ಮ ಆರೋಗ್ಯಕ್ಕಾಗಿ ಮೀಸಲಿಡುವುದು ಒಳ್ಳೆಯದಲ್ಲವೇ?



Click it and Unblock the Notifications