For Quick Alerts
ALLOW NOTIFICATIONS  
For Daily Alerts

ಸೂರ್ಯ ನಮಸ್ಕಾರದ 12 ಆಸನಗಳು ಮತ್ತು ಮಂತ್ರ

|
ಯೋಗಾಸನದಲ್ಲಿ ಸೂರ್ಯ ನಮಸ್ಕಾರ ಪ್ರಮುಖವಾದ ವ್ಯಾಯಾಮ. ಇದನ್ನು ಎಲ್ಲಾರು ಮಾಡಬಹುದಾಗಿದ್ದು, ಈ ವ್ಯಾಯಾಮ ಪ್ರತಿದಿನ ಮಾಡುತ್ತಾ ಬಂದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹೆಚ್ಚುವುದು. ಸೂರ್ಯ ನಮಸ್ಕಾರದಲ್ಲಿ 12 ಆಸನಗಳಿವೆ. ಈ ಆಸನಗಳನ್ನು ಖಾಲಿ ಹೊಟ್ಟೆಯಲ್ಲಿ ಮಾಡಬೇಕು. ಆಹಾರದ ನಂತರ ಸೂರ್ಯ ನಮಸ್ಕಾರದ ಮೊದಲು ಕನಿಷ್ಠ ಎರಡು ಗಂಟೆಗಳ ಅಂತರ ಇರಬೇಕು. ಆದ್ದರಿಂದ ಸೂರ್ಯ ನಮಸ್ಕಾರವನ್ನು ಬೆಳಗಿನ ಜಾವ ಅಥವಾ ಸಂಜೆ ಮಾಡುವುದು ಒಳ್ಳೆಯದು.

ಸೂರ್ಯ ನಮಸ್ಕಾರದಲ್ಲಿ 12 ಆಸನಗಳಿಗೆ. ಈ ಆಸನಗಳನ್ನು ಮಾಡುವ ವಿಧಾನ ಮತ್ತು ಶ್ಲೋಕಗಳ ಬಗ್ಗೆ ತಿಳಿಯಲು ಮುಂದೆ ಓದಿ.

1. ಓಂ ಹ್ರಾಂ ಮಿತ್ರಾಯ ನಮಃ
ಕಾಲುಗಳನ್ನು ಹತ್ತಿರ ತಂದು ನೇರವಾಗಿ ನಿಲ್ಲಬೇಕು. ನಿಮ್ಮ ಕೈಗಳನ್ನು ನೇರವಾಗಿ ಮೇಲೆತ್ತಿ ಹಾಗೇ ಮುಂದುವರಿದು ನೇರವಾಗಿ ನಿಮ್ಮ ಮುಖಕ್ಕೆ ಎದುರಾಗುವಂತೆ ಮಾಡಬೇಕು. ಕೈಗಳನ್ನು ನಮಸ್ಕಾರ ಮಾಡುವ ರೀತಿಯಲ್ಲಿ ಜೋಡಿಸಿ ಹಿಡಿಯಬೇಕು.

2. ಓಂ ಹ್ರೀಂ ರವಯೇ ನಮಃ
ಶ್ವಾಸ ಒಳಗೆ ಎಳೆದುಕೊಳ್ಳುವುದರೊಂದಿಗೆ ನಿಮ್ಮ ಕಿವಿಗಳಿಗೆ ತಗಲುವಂತೆ ಕೈಗಳನ್ನು ಮೇಲಕ್ಕೆತ್ತಿ. ನಂತರ ನಿಧಾನವಾಗಿ ಬಾಗಿ ನಿಮ್ಮ ತೋಳುಗಳನ್ನು ತಲೆಯಿಂದ ಹಿಂದಕ್ಕೆ ತೆಗೆದುಕೊಳ್ಳಬೇಕು.

3. ಓಂ ಹ್ರೂಂ ಸೂರ್ಯಾಯ ನಮಃ
ಶ್ವಾಸವನ್ನು ಹೊರಗೆ ಬಿಡುತ್ತಾ ಮುಂದಕ್ಕೆ ಬಾಗಿ ಎರಡು ಕೈಗಳಿಂದ ನಿಮ್ಮ ಪಾದದ ಬೆರಳುಗಳನ್ನು ಮುಟ್ಟಿ ಹಾಗೇ ಕೆಲ ನಿಮಿಷಗಳ ಕಾಲ ಅದೇ ಸ್ಥಿತಿಯಲ್ಲಿರಲು ಪ್ರಯತ್ನಿಸಿ. ಇದು ಪಾದ ಪಶ್ಚಿಮೋತ್ಥಾನಾಸನ.

4. ಓಂ ಹ್ರೈಂ ಭಾನವೇ ನಮಃ
ಶ್ವಾಸ ಒಳಗೆಳೆದುಕೊಳ್ಳುತ್ತಾ ಬಲಗಾಲು ಹಿಂದೆ ಇಟ್ಟು ಕಾಲು ಮತ್ತು ಕೈಗಳನ್ನು ಭೂಮಿಯ ಮೇಲೆ ಊರಲು ಪ್ರಯತ್ನಿಸಿ. ಇದೇ ಸ್ಥಿತಿಯಲ್ಲಿ ಕೆಲ ಸೆಕೆಂಡು ಕಳೆಯಬೇಕು.

5. ಓಂ ಹ್ರೌಂ ಖಗಾಯ ನಮಃ
ಶ್ವಾಸ ಹೊರಗೆ ಬಿಡುತ್ತಾ ಕಾಲುಗಳನ್ನು ನೇರವಾಗಿಸಿ, ಕೈಗಳನ್ನು ನೇರವಾಗಿಡಬೇಕು. ನಂತರ ಹಿಂಗಾಲನ್ನು ಎತ್ತಿ ಅದರ ಜೊತೆಗೆ ನೇರವಾಗಿ ಕೈಗಳನ್ನು ತಲೆಯ ಹಿಂಭಾಗಕ್ಕೆ ತನ್ನಿ.

6. ಓಂ ಹ್ರಃ ಪೂಷ್ಣೇ ನಮಃ
ನೆಲದ ಮೇಲೆ ಬೋರಲಾಗಿ ಮಲಗಿ ಶ್ವಾಸವನ್ನು ಒಳಗೆ ಎಳೆದುಕೊಳ್ಳುತ್ತಾ ಪಾದ, ಮೊಣಕಾಲು ಎದೆ ಮತ್ತು ಹಣೆ ನೆಲಕ್ಕೆ ನಿಧಾನವಾಗಿ ತಾಗುವಂತೆ ಮಾಡಿ ಹಿಂಗಾಲನ್ನು ನೆಲಕ್ಕಿಂತ ಸ್ವಲ್ಪ ಮೇಲಕ್ಕೆತ್ತಿ ಶ್ವಾಸ ಹೊರಗೆ ಬಿಡಬೇಕು.

7. ಓಂ ಹ್ರಾಂ ಹಿರಣ್ಯಗರ್ಭಾಯ ನಮಃ
ಶ್ವಾಸ ಹೊರಗೆಳೆದುಕೊಳ್ಳುತ್ತಾ ನಿಧಾನವಾಗಿ ದೇಹವನ್ನು ಆದಷ್ಟು ಹಿಂದಕ್ಕೆ ಬಾಗಿಸಿ. ಇದನ್ನು ಭುಜಂಗಾಸಾನ ಎಂದು ಕರೆಯುತ್ತಾರೆ.

8. ಓಂ ಹ್ರೀಂ ಮರೀಚಯೇ ನಮಃ
ಶ್ವಾಸ ನಿಧಾನವಾಗಿ ಹೊರಗೆ ಬಿಡುತ್ತಾ ಕೈಗಳನ್ನು ನೇರವಾಗಿಟ್ಟು ಸೊಂಟವನ್ನು ಮೇಲಕ್ಕೆತ್ತಿ ತಲೆಯನ್ನು ಮೇಲ್ಮುಖ ಮಾಡುತ್ತಾ ಕೈಗಳನ್ನು ಹಿಂದಕ್ಕೆ ತೆಗೆಯಬೇಕು.

9. ಓಂ ಹ್ರೂಂ ಆದಿತ್ಯಾಯ ನಮಃ
ನಿಧಾನವಾಗಿ ಶ್ವಾಸ ಒಳಗೆಳೆದುಕೊಳ್ಳುತ್ತಾ ಬಲಗಾಲಿನ ಮೊಣಕಾಲನ್ನು ಮುಂದಕ್ಕೆ ಇಡುತ್ತಾ ತಲೆಯನ್ನು ಆದಷ್ಟು ಮೇಲೆತ್ತಬೇಕು.

10. ಓಂ ಹ್ರೈಂ ಸವಿತ್ರೇ ನಮಃ
ನಿಧಾನವಾಗಿ ಶ್ವಾಸ ಹೊರಗೆ ಬಿಡುತ್ತಾ ಕಾಲುಗಳು ನೇರ, ಕೈಗಳು ಪಾದದ ಬೆರಳುಗಳನ್ನು ಮುಟ್ಟುತ್ತಿದ್ದು ತಲೆ ಮೊಣಕಾಲಿಗೆ ತಗುಲಿರಬೇಕು.

11. ಓಂ ಹ್ರೌಂ ಅರ್ಕಾಯ ನಮಃ
ನಿಧಾನವಾಗಿ ಶ್ವಾಸ ಒಳಗೆಳೆದುಕೊಳ್ಳುತ್ತಾ ಕೈಗಳನ್ನು ಮೇಲಕ್ಕೆತ್ತಿ ನಿಧಾನವಾಗಿ ಹಿಂದಕ್ಕೆ ಭಾಗಿ ಕೈಗಳನ್ನು ತಲೆಯ ಹಿಂಭಾಗಕ್ಕೆ ತನ್ನಿ. ನಮಸ್ಕಾರದ ಸ್ಥಿತಿಗೆ ಬನ್ನಿ.

12. ಓಂ ಹ್ರಃ ಭಾಸ್ಕರಾಯ ನಮಃ
ಈಗ ಸಾಮಾನ್ಯ ಸ್ಥಿತಿಗೆ ಬನ್ನಿ. ಈ ರೀತಿ ಮಾಡಿದರೆ ಒಂದು ಸುತ್ತಿನ ಸೂರ್ಯ ನಮಸ್ಕಾರ ಮಾಡಿದಂತಾಯಿತು. ನಂತರ ಎಡಗಾಲಿನಿಂದ ಈ ಹಂತಗಳನ್ನು ಪುನರಾವರ್ತಿಸಬೇಕು.

ಈ ಆಸನಗಳನ್ನು ಮಾಡುವಾಗ ಪಾಲಿಸಬೇಕಾದ ನಿಯಮಗಳ ಬಗ್ಗೆ ತಿಳಿಯಲು ಮುಂದೆ ಓದಿ.

English summary

12 Posture Of Suryanamaskar | Tips For Health | ಸೂರ್ಯ ನಮಸ್ಕಾರದ 12 ಭಂಗಿಗಳು | ಆರೋಗ್ಯಕ್ಕಾಗಿ ಕೆಲ ಸಲಹೆಗಳು

Suryanamaskar is the easiest way for a person to get used to Yoga. It should be done along with chanting of mantras in every posture. Suryanamaskar is a combination of 12 different postures, followed in a particular sequence with a specific breathing pattern.
Story first published: Tuesday, June 26, 2012, 14:48 [IST]
X
Desktop Bottom Promotion