Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಎಗ್ ಬ್ರೇಕ್‌ಫಾಸ್ಟ್‌ನಿಂದ ಪ್ರಮುಖ 5 ಪ್ರಯೋಜನಗಳು
ದಿನದಲ್ಲಿ ಒಂದು ಮೊಟ್ಟೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ವೈದ್ಯರು, ಫಿಟ್ ನೆಸ್ ಪರಿಣಿತರು ಹೇಳುತ್ತಾರೆ. ಅದೇ ಮೊಟ್ಟೆಯನ್ನು ಬೆಳಗಿನ ಬ್ರೇಕ್ ಪಾಸ್ಟ್ ಗೆ ತಿಂದರೆ 5 ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು. ಆದ್ದರಿಂದಲೇ ಅದನ್ನು ಬೆಳಗಿನ ಬ್ರೇಕ್‌ಫಾಸ್ಟ್‌ಗೆ ತಿನ್ನಲು ಸಲಹೆ ನೀಡುತ್ತಾರೆ. ಬೆಳಗಿನ ತಿಂಡಿಗೆ ಮೊಟ್ಟೆ ತಿಂದರೆ ದೊರೆಯುವ ಪ್ರಯೋಜನಗಳು ಯಾವುವು ಎಂದು ತಿಳಿಯಲು ಮುಂದೆ ಓದಿ:
1. ಶಕ್ತಿವರ್ಧಕವಾಗಿ ಕೆಲಸ ಮಾಡುತ್ತದೆ: ಬೆಳಗ್ಗೆ ಒಂದು ಅಥವಾ ಎರಡು ಮೊಟ್ಟೆಯ ಬಿಳಿ ತಿಂದರೆ ಶಕ್ತಿ ದಿನಪೂರ್ತಿ ಚಟುವಟಿಕೆಯಿಂದ ಕೆಲಸ ಮಾಡಲು ದೇಹಕ್ಕೆ ಚೈತನ್ಯ ತುಂಬುತ್ತದೆ.

2. ಪ್ರೊಟೀನ್ ಹೀರಿಕೊಳ್ಳಲು ಸಹಾಯ ಮಾಡುತ್ತದೆ: ಮೊಟ್ಟೆಯಲ್ಲಿ ಅಧಿಕ ಪ್ರೊಟೀನ್ ಇದೆ ಎಂದು ತಿಳಿದಿರುವ ವಿಷಯ. ಆದರೆ ಇದರಲ್ಲಿ ಆಲ್ಬುಮಿನ್ (albumin) ಅಂಶವಿರುವುದರಿಂದ ಇದು ದೇಹವು ಪ್ರೊಟೀನ್ ಅಂಶವನ್ನು ಹೀರಿಕೊಳ್ಳಲು ಸಹಾಯಮಾಡುತ್ತದೆ.
3. ದೇಹದ ತೂಕ ಕಡಿಮೆ ಮಾಡುತ್ತೆ: ದೇಹದ ತೂಕ ಕಡಿಮೆ ಮಾಡಬೇಕು ಆದರೆ ದೇಹದ ಶಕ್ತಿ ಕಡಿಮೆಯಾಗಬಾರದು ಎಂದು ಬಯಸುವುದಾದರೆ ಬೆಳಗ್ಗೆ ಬ್ರೇಕ್ ಫಾಸ್ಟ್ ಒಂದು ಲೋಟ ಹಾಲು ಮತ್ತು ಎರಡು ಮೊಟ್ಟೆಯ ಬಿಳಿ ಮಾತ್ರ ತಿಂದರೆ ಸಾಕು. ಮೊಟ್ಟೆಯ ಬಿಳಿ ದೇಹದ ಸ್ನಾಯುಗಳನ್ನು ಬಲಪಡಿಸುತ್ತದೆ.
ದಪ್ಪಗಾಗಬೇಕೆಂದು ಬಯಸುವವರು ಬೆಳಗ್ಗಿನ ಬ್ರೇಕ್ ಫಾಸ್ಟ್ ಜೊತೆ ಒಂದು ಮೊಟ್ಟೆಯನ್ನು ಅದರ ಹಳದಿ ಸಹಿತ ತಿನ್ನಬೇಕು.
4. ಆಗಾಗ ಹಸಿವು ಉಂಟಾಗುವುದಿಲ್ಲ: ಆಗಾಗ ಹಸಿವು ಉಂಟಾದರೆ ಹೆಚ್ಚು ತಿನ್ನುತ್ತೇವೆ. ಮೊಟ್ಟೆ ತಿಂದರೆ ಹಸಿವನ್ನು ತಡೆಯುತ್ತದೆ ಮತ್ತು ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ.
5. ಮೆದುಳಿನ ಸಾಮರ್ಥ್ಯ ಹೆಚ್ಚಿಸುತ್ತದೆ: ಬೆಳಗ್ಗೆ ಮನಸ್ಸು ಮತ್ತು ಮೆದುಳು ಫ್ರೆಶ್ ಆಗಿ ಇದ್ದರೆ ದಿನ ಪೂರ್ತಿ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ. ಮೊಟ್ಟೆ ಮೆದುಳನ್ನು ಚುರುಕಾಗಿ ಕೆಲಸ ಮಾಡುವಂತೆ ಮಾಡುತ್ತದೆ. ಆದ್ದರಿಂದ ಮಕ್ಕಳಿಗೆ ಬೆಳಗ್ಗೆ ಬ್ರೇಕ್ ಫಾಸ್ಟ್ ಜೊತೆ ಒಂದು ಮೊಟ್ಟೆ ಕೊಡುವುದು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
