Latest Updates
-
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ!
ಸಂತೋಷವಾಗಿದ್ದರೆ ಈ 6 ಕಾಯಿಲೆ ಹತ್ತಿರ ಸುಳಿಯುವುದಿಲ್ಲ
ಸಂತೋಷ, ದುಃಖ ಅನ್ನುವುದು ಬರೀ ಮಾನಸಿಕವಾಗಿ ಮಾತ್ರವಲ್ಲ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಚಿಂತೆ ಚಿತೆಗ ದಾರಿ ಎಂದು ಹೇಳುವುದನ್ನು ನೀವು ಕೇಳಿರಬಹುದು. ಆದ್ದರಿಂದಲೇ ತುಂಬಾ ಚಿಂತೆ ಮಾಡಬೇಡಿ, ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಹೇಳುತ್ತಾರೆ.
ಪ್ರತಿದಿನ ನೀವೂ ಸಂತೋಷದಿಂದ ದಿನವನ್ನು ಕಳೆಯುವುದಾದರೆ ಕೆಲವೊಂದು ಕಾಯಿಲೆಗಳು ನಿಮ್ಮ ಹತ್ತಿರಕ್ಕೇ ಸುಳಿಯುವುದಿಲ್ಲ. ಇಷ್ಟೆಲ್ಲಾ ಒತ್ತಡಗಳ ನಡುವೆ ಸಂತೋಷದಿಂದ ಇರಲು ಹೇಗೆ ಸಾಧ್ಯ ಎಂದು ನೀವು ಕೇಳಬಹುದು? ಸಂತೋಷದಿಂದ ಇರಲು ಪ್ರಯತ್ನಿಸಿದರೆ ಸಂತೋಷದ ಬದುಕು ನಿಮ್ಮದಾಗುವುದು. ಸಂತೋಷದಿಂದ ಇದ್ದರೆ ಯಾವುದೆಲ್ಲಾ ಕಾಯಿಲೆಗಳಿಗೆ ಗುಡ್ ಬೈ ಹೇಳಬಹುದು ಎಂದು ನೋಡೋಣ ಬನ್ನಿ.

1. ಒತ್ತಡದ ಹಾರ್ಮೋನ್ ಗಳನ್ನು ಕಡಿಮೆ ಮಾಡುತ್ತದೆ: ಬೆಳಗ್ಗೆ ಎದ್ದು ನಗುವ ವ್ಯಾಯಾಮ ಮಾಡಿದರೆ ಒತ್ತಡದ ಹಾರ್ಮೋನ್ ಗಳು ಕಡಿಮೆಯಾಗಿ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಅಲ್ಲದೆ ಈ ರೀತಿ ಮಾಡಿದರೆ ದಿನಪೂರ್ತಿ ಸಂತೋಷದಿಂದ ಇರಬಹುದು.
2. ತಲೆನೋವು ಕಡಿಮೆಯಾಗುತ್ತದೆ: ಕೆಲವರಿಗೆ ದಿನವೂ ತಲೆನೋವು ಕಾಣಿಸಿಕೊಳುತ್ತದೆ. ಈ ರೀತಿ ಒತ್ತಡದಿಂದಾಗಿ ಉಂಟಾಗುತ್ತದೆ. ಇಂತಹವರು ಒತ್ತಡವನ್ನು ಮರೆತು ಸಂತೋಷದಿಂದ ಇರಲು ಪ್ರಯತ್ನಿಸಿದರೆ ತಲೆನೋವು ಕಡಿಮೆಯಾಗುವುದು.
3. ಮೈಕೈ ನೋವು ಬರುವುದಿಲ್ಲ: ಸಂತೋಷದಿಂದ ಇರುವ ವ್ಯಕ್ತಿಗಳಿಗೆ ಮೈಕೈ ನೋವು ಕಾಣಿಸಿಕೊಳ್ಳುವುದಿಲ್ಲ. ಒತ್ತಡವಿದ್ದರೆ ಮೈಕೈ ನೋವು, ಸುಸ್ತು ಕಾಣಿಸಿಕೊಳ್ಳುವುದು.
4. ಹೃದಯದ ಆರೋಗ್ಯಕ್ಕೆ ಒಳ್ಳೆಯದು: ಹೃದಯಾಘಾತ ಮಾನಸಿಕ ಒತ್ತಡದಿಂದಾಗಿ ಉಂಟಾಗುತ್ತದೆ. ಆದ್ದರಿಂದ ಚಿಂತೆ ಹಾಗೂ ಒತ್ತಡದಿಂದ ಮುಕ್ತರಾಗಿಲು ಪ್ರಯತ್ನಿಸಬೇಕು.
5. ತಲೆಸುತ್ತು ಬರುವುದಿಲ್ಲ: ಸ್ನಾಯುಗಳು ಬಿಗಿದುಕೊಂಡು ಕೆಲಸ ಮಾಡದಿದ್ದಾಗ ತಲೆನೋವು ಕಾಣಿಸಿಕೊಳ್ಳುತ್ತದೆ. ಸಂತೋಷದಿಂದ ಇದ್ದರೆ ಸ್ನಾಯುಗಳು ಸಡಿಲವಾಗುತ್ತದೆ ಮತ್ತೆ ತಲೆನೋವು ಕಾಣಿಸಿಕೊಳ್ಳುದಿಲ್ಲ.
6. ಆಯುಸ್ಸು ಹೆಚ್ಚು: ಸಂತೋಷವಾಗಿ ಇರುವವರು ಆರೋಗ್ಯವಂತರಾಗಿ ಇರುತ್ತಾರೆ. ಇದರಿಂದ ಆಯುಸ್ಸು ಕೂಡ ಹೆಚ್ಚುವುದು.
ಯಾವುದೇ ಸಮಸ್ಯೆಗಳಿಗೆ ಪರಿಹಾರ ಇದ್ದೇ ಇರುತ್ತದೆ. ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ಸಂತೋಷವಾಗಿ ಬಾಳಿ, ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
